ʻಅಥಿʼ ಆರಂಭ.ಲೋಕೇಂದ್ರ ಸೂರ್ಯ-ಶ್ರಾವ್ಯ ರಾವ್‌ ಜೋಡಿ!

Beginning of ʻAthiʼ Lokendra Surya-Shravya Rao Jodi!

ಗಂಡ ಮನೆಯಿಂದ ಹೋದ ಬಳಿಕ ನಡೆಯುವ ಕತೆ
ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ನಿರ್ಮಾಣದಲ್ಲಿ ಮತ್ತೊಂದು ಚಿತ್ರ

ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು ಅವರ ಡೆಡ್ಲಿ ಕಿಲ್ಲರ್‌ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ್ದಾರೆ.Beginning of ʻAthiʼ Lokendra Surya-Shravya Rao Jodi!

ಇತ್ತೀಚೆಗಷ್ಟೇ ಸಿಂಗಾಪೂರದಲ್ಲಿ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ಮತ್ತು ಹಲವು ದೇಶಗಳಲ್ಲಿ ಪ್ರಶಸ್ತಿಗಳನ್ನು ಪಡೆದ ʻಕುಗ್ರಾಮʼ ಚಿತ್ರದ ರಚನೆ ಮತ್ತು ನಿರ್ದೇಶನ ಕೂಡಾ ಇವರದ್ದೇ. ಇನ್ನೇನು ತೆರೆಗೆ ಬರಲು ಸಿದ್ದಗೊಳ್ಳುತ್ತಿರುವ ʻಬ್ರಹ್ಮಕಮಲʼ ಚಿತ್ರಕ್ಕೆ ಲೋಕೇಂದ್ರ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.Beginning of ʻAthiʼ Lokendra Surya-Shravya Rao Jodi!

ನಟನೆ, ನಿರ್ದೇಶನದ ಜೊತೆಗೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡುತ್ತಿರುವ ಲೋಕೇಂದ್ರ ಸೂರ್ಯ ಈಗ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಸ್ವತಃ ಲೋಕೇಂದ್ರ ಅವರೇ ನಿರ್ದೇಶಿಸಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʻಅಥಿ ಐ ಲವ್‌ ಯೂʼ ಎಂಬ ಹೆಸರನ್ನಿಡಲಾಗಿದೆ.Beginning of ʻAthiʼ Lokendra Surya-Shravya Rao Jodi!

ಫೆಬ್ರವರಿ 7ರ ಬೆಳಿಗ್ಗೆ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಳ ಪೂಜಾ ಕಾರ್ಯದೊಂದಿಗೆ ʻಅಥಿ ಐ ಲವ್‌ ಯೂʼ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ ಮ ಹರೀಶ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಭಾ ಮ ಗಿರೀಶ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ರೆಡ್‌ & ವೈಟ್‌ ಸೆವೆನ್‌ ರಾಜ್‌ ಉಪಸ್ಥಿತರಿದ್ದರು. ಇವರ ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದರು.Beginning of ʻAthiʼ Lokendra Surya-Shravya Rao Jodi!

ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ, ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ʻಅಥಿ ಐ ಲವ್‌ ಯೂʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಉತ್ತಮ ಹೆಸರು ಪಡೆದಿರುವ ಎನ್.‌ ಓಂ ಪ್ರಕಾಶ್‌ ರಾವ್‌ ಅವರ ಪುತ್ರಿ ಶ್ರಾವ್ಯಾ ರಾವ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.Beginning of ʻAthiʼ Lokendra Surya-Shravya Rao Jodi!

ʻʻಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕತೆ ʻಅಥಿ ಐ ಲವ್‌ ಯೂʼ ಪ್ರಧಾನ ಎಳೆಯಾಗಿದೆ. ಎರಡು ಪಾತ್ರಳನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರಕತೆ ರೂಪಿಸಲಾಗಿದೆ. ಗಂಡ ಕೆಲಸಕ್ಕೆಂದು ಹೊರ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಸಲಾಗುತ್ತದೆʼ ಎಂದು ಲೋಕೇಂದ್ರ ಸೂರ್ಯ ಹೇಳಿಕೊಂಡಿದ್ದಾರೆ. ʻʻಇತ್ತೀಚೆಗೆ ಹಲವಾರು ಸಿನಿಮಾಗಳ ಕತೆ ಕೇಳಿದ್ದೇನೆ. ಆದರೆ ʻಅಥಿʼ ಚಿತ್ರದ ಕತೆ ನನಗೆ ಅಪಾರವಾಗಿ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದಾಗಿದೆ. ಇಡೀ ಚಿತ್ರ ನನ್ನ ಪಾತ್ರದ ಮೇಲೇ ಹೆಚ್ಚು ಕ್ಯಾರಿ ಆಗುತ್ತಿರುವುದು ನನಗೆ ಖುಷಿ ಕೊಟ್ಟಿದೆʼʼ ಎಂದು ನಾಯಕಿ ಶ್ರಾವ್ಯ ರಾವ್‌ ಹೇಳಿದ್ದಾರೆ.Beginning of ʻAthiʼ Lokendra Surya-Shravya Rao Jodi!

ಸದ್ಯ ʻಅಥಿ ಐ ಲವ್‌ ಯೂʼ ಚಿತ್ರದ ಮುಹೂರ್ತ ನೆರವೇರಿದ್ದು, ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ.Beginning of ʻAthiʼ Lokendra Surya-Shravya Rao Jodi!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…