“ಭರ್ಜರಿ ಗಂಡು” ಹಾಡಿಗೆ ಭರ್ಜರಿ ರೆಸ್ಪಾನ್ಸ್

ಪ್ರಸಿದ್ಧ್ ಸಿನೆಮಾಸ್ ಲಾಂಛನದಡಿ ಮೂಡಿ ಬರುತ್ತಿರುವ ಭರ್ಜರಿ ಗಂಡು ಚಿತ್ರದ “ಸುಕ್ಕಾ ಸಾರಾಯಿಗಿಂತ ಡೇಂಜರ್ರು ಹುಡ್ಗಿರು” ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಬರುತ್ತಿವೆ.. ಈಗಾಗಲೇ ಟ್ರೇಲರ್ಗೆ ಸಕ್ಕತ್ ರೆಸ್ಪಾನ್ಸ್ ಸಿಗುತ್ತಿದ್ದು.IMG 2944 1 scaled

ಫೈಟ್ಸ್ ಹಾಗು ದೃಶ್ಯಗಳು ಜನರ ಮನಸ್ಸನ್ನು ಗೆದ್ದಿದೆ. ಇನ್ನೂ ಹಾಡಿನಲ್ಲಿ ಬರುವ, “ಸಕ್ಕರೆ ಸಕ್ಕರೆ ಬೊಂಬೆಯು ಸಿಕ್ಕರೆ ಬಿಡೋದು ಹೆಂಗಮ್ಮಿ, ನಕ್ಕರೆ ನಕ್ಕರೆ ನನ್ನ ನೋಡಿ ನಕ್ಕರೆ ಬದ್ಕೋದು ಹೆಂಗಮ್ಮಿ” ಎಂಬ ಪಂಚಿಂಗ್ ಸಾಲುಗಳನ್ನು ಪ್ರೇಕ್ಷಕರು ಮನಸಾರೆ ಮೆಚ್ಚಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ.IMG 3293 1 scaled

ಸೂಪರ್ ಹಿಟ್ ಹಾಡುಗಳ ಸರದಾರ, ಸಾಹಿತಿ-ನಿರ್ದೇಶಕ ಭರ್ಜರಿ ಚೇತನ್ ಕುಮಾರ್ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಕನ್ನಡಿಗರಿಗೆ ಸುಕ್ಕಾ ಕಂಠ ಎಂದೇ ಪ್ರಸಿದ್ಧಿಯಾಗಿರುವ ನವೀನ್ ಸಜ್ಜು ಹಾಗೂ ಅನಿರುದ್ದ್ ಶಾಸ್ತ್ರಿ ಅದ್ಭುತವಾಗಿ ಹಾಡಿದ್ದಾರೆ.IMG 3446 1 scaled

ಭಜರಂಗಿ ಖ್ಯಾತಿಯ ಮೋಹನ್ ನೃತ್ಯವನ್ನು ಸಂಯೋಜಿಸಿದ್ದಾರೆ. ಚಿತ್ರಕ್ಕೆ ಗಮ್ಮಿನೇನಿ ವಿಜಯ್ ಸಂಗೀತ ನೀಡಿದ್ದು, ಈ ಹಿಂದೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಗೆ ಸಹಾಯಕರಾಗಿದ್ದರು. ಚಿತ್ರಕ್ಕೆ ಛಾಯಾಗ್ರಾಹಕರಾಗಿರುವ ಕಿಟ್ಟಿ ಕೌಶಿಕ್ ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.JE3A4601 1 scaled

ಈ ಹಿಂದೆ ರತ್ನ ಮಂಜರಿ ಎಂಬ ವಿಭಿನ್ನ ಚಿತ್ರವನ್ನು ನಿರ್ದೇಶಿಸಿ ಯಶಸ್ಸು ಗಳಿಸಿದ್ದ ಪ್ರಸಿದ್ಧ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸೊಗಸಾದ ಸಂಭಾಷಣೆ ಬರೆದಿದ್ದಾರೆ. ತಾರಾಗಣದಲ್ಲಿ ಕಿರಣ್ ರಾಜ್(ಕನ್ನಡತಿ ಧಾರಾವಾಹಿ ಖ್ಯಾತಿಯ), ಯಶ ಶಿವಕುಮಾರ್ ಹಾಗು ಇನ್ನಿತರು ಇದ್ದಾರೆ. ಚಿತ್ರಕ್ಕೆ ಪ್ರಸಿದ್ಧ್ ಸಿನಿಮಾಸ್, ಮದನ್ ಗೌಡ.ಜೆ.ಎಸ್. ಅನಿಲ್ ಕುಮಾರ್. ಡಿ ಬಂಡವಾಳ ಹಾಕಿದ್ದಾರೆ. ಜೊತೆಗೆ ರಮೇಶ್ ರೆಡ್ಡಿ, ಸುದರ್ಶನ್ ಸುಂದರ್ ರಾಜ್ ಸಹ ನಿರ್ಮಾಪಕರಾಗಿದ್ದಾರೆ.JE3A4951 1 scaled

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…