ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ ,ಈ ಬಾರಿ ಒಂದಿಷ್ಟು ಹೆಸರುಗಳು ಬಹಿರಂಗಗೊಂಡಿವೆ.

bigg boss srinivas gowda

‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ರಾತ್ರಿ 7ಕ್ಕೆ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಾಲನೆ ಸಿಗಲಿದೆ. ಸುದೀಪ್ ಎಲ್ಲ ಸ್ಪರ್ಧಿಗಳನ್ನು ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಿದ್ದಾರೆ.bigg boss

ಇನ್ನು, ಈ ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸಬಹುದು ಎಂಬ ಪ್ರಶ್ನೆ ಸಹಜ. ಕಾರ್ಯಕ್ರಮ ಶುರುವಾದರೂ ಕುತೂಹಲವನ್ನು ಸಾಮಾನ್ಯವಾಗಿ ಕಾಯ್ದುಕೊಳ್ಳಲಾಗುತ್ತದೆ. ಆದರೆ, ಈ ಬಾರಿ ಒಂದಿಷ್ಟು ಹೆಸರುಗಳು ಬಹಿರಂಗಗೊಂಡಿವೆ. ಅಷ್ಟೇ ಅಲ್ಲ, ಆ ವ್ಯಕ್ತಿ ಈಗಾಗಲೇ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟಿರುವುದರಿಂದ, ಈ ಪಟ್ಟಿಯನ್ನು ನಂಬಬಹುದಾಗಿದೆ.bigg boss

ಅಂದಹಾಗೆ, ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವವರ ಸ್ಪರ್ಧಿಗಳ ಪಟ್ಟಿ ಈ ರೀತಿ ಇದೆ. ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್, ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ, ಸ್ಫೂರ್ತಿ ಗೌಡ, ಸಾನಿಯಾ ಅಯ್ಯರ್, ಲೋಕೇಶ್, ಕಿರಣ್ ಯೋಗೇಶ್ವರ್, ರಾಕೇಶ್ ಅಡಿಗ, ಅಕ್ಷತಾ ಕುಕಿ, ಚೈತ್ರಾ, ಉದಯ್ ಸೂರ್ಯ, ಜಯಶ್ರೀ, ಅರ್ಜುನ್ ರಮೇಶ್, ಜಸ್ವಂತ್-ನಂದಿನಿ ಮತ್ತು ಸೋಮಣ್ಣ ಮಾಚಿಮಾಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಮೊದಲ ಹಂತವಾಗಿ, ಸಂಖ್ಯಾಶಾಸ್ತ್ರ್ರಜ್ಱ ಆರ್ಯವರ್ಧನ್ ಈಗಾಗಲೇ ‘ಬಿಗ್ ಬಾಸ್’ ಮನೆಗೆ ಎಂಟ್ರಿ ಕೊಟ್ಟಿದ್ದಾಗಿದೆ.bigg boss

ಈ ಬಾರಿ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಯಕಾಮ್ 18 ಕನ್ನಡ ಕ್ಲಸ್ಟರ್ ಹೆಡ್ ಆದ ಪರಮೇಶ್ವರ್ ಗುಂಡ್ಕಲ್ ಹೇಳಿದ್ದರು. ಅದರಂತೆ ಈ ಪಟ್ಟಿಯಲ್ಲಿರುವ ಸೋನು ಶ್ರೀನಿವಾಸ್ ಗೌಡ, ಕಿರಣ್ ಯೋಗೇಶ್ವರ್, ಅಕ್ಷತಾ ಕುಕಿ, ಜಸ್ವಂತ್-ನಂದಿನಿ ಸೇರಿದಂತೆ ಬಹಳಷ್ಟು ಮಂದಿ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳಾಗಿರುವುದು ವಿಶೇಷ.bigg boss

ಈಗಾಗಲೇ ಶುಕ್ರವಾರದಿಂದಲೇ, ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಿತ್ರೀಕರಣ ಪ್ರಾರಂಭವಾಗಿದ್ದು, ಕಾರ್ಯಕ್ರಮದ ನಿರೂಪಕ ಸುದೀಪ್ ಮನೆಗೆ ಭೇಟಿ ಕೊಟ್ಟು ಬಂದಿದ್ದಾರೆ. ಅವರ ಜೊತೆಗೆ ಗಾಯಕ-ನಟ ವಾಸುಕಿ ವೈಭವ್ ಸಹ ಮನೆಗೆ ಹೋಗಿ ಒಂದು ಸುತ್ತು ಹೊಡೆದು ಬಂದಿದ್ದಾರೆ.bigg boss

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…