ಅರಳಿದ ಹೂವುಗಳು ಟೀಸರ್ ಬಿಡುಗಡೆ

Blooming Flowers Teaser Released

ಸೋನು ಫಿಲಂಸ್ ಲಾಂಛನದಲ್ಲಿ ಕೆ ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ ಅರಳಿದ ಹೂವುಗಳು. ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.Blooming Flowers Teaser Released

ಹೆಣ್ಣು ಅಬಲೆಯಲ್ಲ ಸಬಲೆ, ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬ ಸಂದೇಶ ಹೊತ್ತು ಬರುತ್ತಿರುವ ಈ ಚಿತ್ರದ ಚಿತ್ರಕಥೆ , ಸಂಭಾಷಣೆ, ಹಾಡುಗಳಿಗೆ ಸಾಹಿತ್ಯ ಬರೆದು ನಿರ್ದೇಶನ ಮಾಡಿರುವವರು ಬಿ.ಎ. ಪುರುಷೋತ್ತಮ್ ಓಂಕಾರ್. ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಮಂಜುನಾಥ್ ಈ ಹಿಂದೆ ಸೀತಮ್ಮನ ಮಗ ಚಿತ್ರ ನಿರ್ಮಿಸಿದ್ದೆ. ೧೦೦ ಸಿನಿಮಾ ಮಾಡಿದ ಅನುಭವವನ್ನು ಅದೊಂದೇ ಸಿನಿಮಾ ನೀಡಿತು. ಕಳೆದ ವರ್ಷ ನಾನೇ ಬರೆದ ಕಾದಂಬರಿಯನ್ನು ಇಟ್ಟುಕೊಂಡು ಸಿನಿಮಾ ಮಾಡಬೇಕೆಂದು ನಿರ್ಧರಿಸಿ ಈ ಚಿತ್ರಕ್ಕೆ ‌ಕೈ ಹಾಕಿದೆ. ಅಲ್ಲದೆ ಪುರುಷೋತ್ತಮ್ ಅವರ ಪ್ಲಾನ್ ನನಗೆ ಇಷ್ಟವಾಯಿತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಸಮಾಜಕ್ಕೆ ಒಂದು ಸಂದೇಶ ಕೊಡಬೇಕು ಎಂಬುದು ನನ್ನ ಉದ್ದೇಶ. ಚಿತ್ರದ ೬೩ ಸೀನ್ ಗಳಲ್ಲೂ ಒಂದೊಂದು ಸಂದೇಶ ಹೇಳಿದ್ದೇವೆ. ಪುರುಷೋತ್ತಮ್ ಅವರ ಕಾರಣದಿಂದಲೇ ನಿಂತುಹೋಗಬೇಕಿದ್ದ ಈ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದೆ. ಜೂನ್ ೯ಕ್ಕೆ ಬಿಡುಗಡೆ ಮಾಡಬೇಕು ಅಂದುಕೊಂಡಿದ್ದೇವೆ. ಇಡೀ ಚಿತ್ರವನ್ನು ಚಿತ್ರದುರ್ಗದ ಚಂದವಳ್ಳಿಯ ತೋಟ, ಕಾಲೇಜು, ಕೋಟೆಯ ಸುತ್ತಮುತ್ತ ೩೦ ದಿನಗಳ ಕಾಲ ಚಿತ್ರೀಕರಿಸಿದ್ದೇವೆ ಎಂದರು.Blooming Flowers Teaser Released

ನಿರ್ದೇಶಕ ಪುರುಷೋತ್ತಮ್ ಮಾತನಾಡಿ, ಹೆಣ್ಣು ಅಬಲೆಯಲ್ಲ ಸಬಲೆ, ಅವಮಾನ ಮಾಡಿದವರ, ಆಡಿಕೊಂಡವರ ಮುಂದೆ ಗೆದ್ದು ಸಾಧನೆ ಮಾಡಿ ಎಲ್ಲರೆದುರು ತಲೆಯೆತ್ತಿ ನಿಲ್ಲಬೇಕು,ಸಾವೇ ಕೊನೆಹಂತ ಎಂದು ನಿರ್ಧರಿಸಬಾರದು. ಕಷ್ಟ ಬಂದಿದೆ, ಮೋಸ ಹೋಗಿದ್ದೇನೆಂದು ಹೆದರಿ ಕುಳಿತರೆ ಏನನ್ನು ಸಾಧಿಸಲು ಸಾಧ್ಯವಿಲ್ಲ, ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಬೇಕು. ಎಲ್ಲವನ್ನು ಸವಾಲಾಗಿ ಸ್ವೀಕರಿಸಿ ಛಲದಿಂದ ಗೆಲ್ಲುವುದೇ ಸಾಧನೆ, ಆಗಲೇ ನಮ್ಮ ಜೀವನ ಅರಳಿದ ಹೂವುಗಳು ಆಗುತ್ತದೆ ಎನ್ನುವುದೇ ಈ ಚಿತ್ರದ ಕಥೆ ಎಂದು ಹೇಳಿದರು.

ಇನ್ನು ಈ ಚಿತ್ರದ ನಾಲ್ಕು ಹಾಡುಗಳಿಗೆ ರಾಜ್ ಭಾಸ್ಕರ್ ಅವರ ಸಂಗೀತ ಸಂಯೋಜನೆ ಇದ್ದು, ಮುತ್ತುರಾಜ್ ಅವರ ಛಾಯಾಗ್ರಹಣ, ಕವಿತಾ ಭಂಡಾರಿ ಅವರ ಸಂಕಲನವಿದೆ. ಚಿತ್ರದ ಸಹ ನಿರ್ಮಾಪಕರಾಗಿ ಸುಮೀತ್ ಕುಮಾರ್ ಕಾರ್ಯ ನಿರ್ವಹಿಸಿದ್ದಾರೆ.Blooming Flowers Teaser Released

ನಿರ್ಮಾಪಕ ಕೆ ಮಂಜುನಾಥ್ ನಾಯಕ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧನಲಕ್ಷ್ಮಿ ಭಾಗ್ಯಶ್ರೀ, ಶಶಿಕಲಾ, ಸುಲೋಚನ, ರಂಜಿತ್, ಗಂಚು ಕುಮಾರ್, ಅಪ್ಪು ಮಂಜುಳಾ, ವಿಶ್ವ ಡುಮ್ಮು ಉಳಿದ ಪಾತ್ರವರ್ಗದಲ್ಲಿದ್ದಾರೆ. ಜಯಲಕ್ಷ್ಮಿ ಫಿಲಂಸ್ ನ ರಾಜು ಅವರು ಈ ಚಿತ್ರದ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…