ಕಿರಣ್ ರಾಜ್ ಅಭಿನಯದ “ಬಡ್ಡೀಸ್” ಜೂನ್ 24 ರಂದು ತೆರೆಗೆ.

“ಕನ್ನಡತಿ” ಧಾರಾವಾಹಿಯ ಮೂಲಕ ಹರ್ಷ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕಿರಣ್ ರಾಜ್ ಅಭಿನಯದ “ಬಡ್ಡೀಸ್” ಚಿತ್ರ ಜೂನ್ 24 ರಂದು ಬಿಡುಗಡೆಯಾಗುತ್ತಿದೆ.WhatsApp Image 2022 05 17 at 1.21.42 PM 2

ಬಿಡುಗಡೆ ದಿನಾಂಕ ಘೋಷಣೆ ಹಾಗೂ ಲಿರಿಕಲ್ ಸಾಂಗ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಿರಣ್ ರಾಜ್ ಅವರ ತಂದೆ, ತಾಯಿ ಹಾಗೂ ಅಭಿಮಾನಿ ಸಮರ್ಥ್ ಲಿರಿಕಲ್ ಸಾಂಗ್ ಬಿಡುಗಡೆ ಮಾಡಿದರು. ಆನಂತರ ಚಿತ್ರತಂಡ ಮಾಧ್ಯಮದ ಬಳಿ “ಬಡ್ಡೀಸ್” ಬಗ್ಗೆ ಮಾತನಾಡಿದರು.

ಕಥೆ ಸಿದ್ದಮಾಡಿಕೊಂಡು, ನಿರ್ಮಾಪಕರ ಹುಡುಕಾಟದಲ್ಲಿದ್ದಾಗ, ಸ್ನೇಹಿತರ ಮೂಲಕ ದುಬೈ ನಿವಾಸಿ ಭಾರತಿ ಶೆಟ್ಟಿ ಅವರ ಪರಿಚಯವಾಯಿತು. ಕಥೆ ಮೆಚ್ಚಿದ ಅವರು ನಿರ್ಮಾಣಕ್ಕೆ ಮುಂದಾದರು.ಇದೊಂದು ಸ್ನೇಹದ ಮಹತ್ವ ಸಾರುವ ಚಿತ್ರ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ಕಥಾಹಂದರ. “ಬಡ್ಡೀಸ್” ಎಂದರೆ ಕಾಲೇಜಿನಲ್ಲಿ ಈಗಿನ ಹುಡುಗರು ಸ್ನೇಹಿತರನ್ನು ಕರೆಯುವ ಪದ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಎಲ್ಲಾ ತಂದೆ ಸಾಮಾನ್ಯವಾಗಿ ಮಗನಿಗೆ ಕಾರು, ಬೈಕು ಮುಂತಾದವುಗಳನ್ನು ನೀಡುತ್ತಾರೆ. ಆದರೆ ನಮ್ಮ ಚಿತ್ರದಲ್ಲಿ ಶ್ರೀಮಂತ ತಂದೆ, ಮಗನಿಗೆ ಸ್ನೇಹಿತರನ್ನೇ ಉಡುಗೊರೆ ನೀಡುತ್ತಾನೆ. ನಾಯಕ ಹಾಗೂ ಮೂವರು ಸ್ನೇಹಿತರ ಜೊತೆ ನಡೆಯುವ ಕಥಾಹಂದರವಿದು.WhatsApp Image 2022 05 17 at 1.21.42 PM

ಪ್ರೇಮಕಥೆಯೊಂದಿಗೆ, ಸೆಂಟಿಮೆಂಟ್ ಸನ್ನಿವೇಶಗಳು ಸಹ ನಮ್ಮ ಚಿತ್ರದಲ್ಲಿ ನೋಡುಗರ ಮನಸ್ಸಿಗೆ ಹತ್ತಿರವಾಗಲಿದೆ. ಜೂನ್ 24 ರಂದು ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದರು ನಿರ್ದೇಶಕ ಗುರುತೇಜ್ ಶೆಟ್ಟಿ.WhatsApp Image 2022 05 17 at 1.21.42 PM 1

ನಾನು ಮೂಲತಃ ಬೆಂಗಳೂರಿನವಳು. ಕಳೆದ ಕೆಲವು ವರ್ಷಗಳಿಂದ ದುಬೈನಲ್ಲಿದ್ದೀನಿ. ಜಾಹೀರಾತು ಸಂಸ್ಥೆ ನಡೆಸುತ್ತಿದ್ದೇನೆ. ಚಿಕ್ಕಂದಿನಿಂದಲೇ ಸಿನಿಮಾ ಮಾಡಬೇಕೆಂಬ ಹಂಬಲ. ಅಪ್ಪ, ಅಮ್ಮ ರಾಜಕುಮಾರ್ ಮುಂತಾದವರ ಚಿತ್ರಗಳನ್ನು ‌ನೋಡಿಕೊಂಡು ಬಂದು ಕಥೆ ಹೇಳುತ್ತಿದ್ದರು. ಆಗಿನಿಂದಲೂ ನನಗೆ ಸಿನಿಮಾ ಆಸಕ್ತಿ. ಗುರುತೇಜ್ ಶೆಟ್ಟಿ ಗೆಳೆಯರೊಬ್ಬರ ಮೂಲಕ ಪರಿಚಯವಾಗಿ, ಕಥೆ ಕಳುಹಿಸಿದ್ದರು. ಕಥೆ ಹಿಡಿಸಿತು. ಸಿನಿಮಾ ನಿರ್ಮಾಣಕ್ಕೆ ಮುಂದಾದೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಾಯದಿಂದ ಚಿತ್ರ ಉತ್ತಮವಾಗಿ ಬಂದಿದೆ. ಮುಂದಿನ ತಿಂಗಳು 24 ಬಿಡುಗಡೆಯಾಗುತ್ತಿದೆ. ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕಿ ಭಾರತಿ ಶೆಟ್ಟಿ.WhatsApp Image 2022 05 17 at 1.21.41 PM

ನಾನು ಈ ಹಿಂದೆ ಸಾಕಷ್ಟು ಧಾರಾವಾಹಿಗಳಲ್ಲಿ ಅಭಿನಯಿಸಿದ್ದೇನೆ. ಆದರೆ ನನಗೆ ಹೆಸರು ತಂದುಕೊಟ್ಟದ್ದು “ಕನ್ನಡತಿ”. ಆನಂತರ ಒಳ್ಳೆಯ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿದ್ದ ನನಗೆ ಗುರುತೇಜ್ ಶೆಟ್ಟಿ ಅವರು ಹೇಳಿದ್ದ ಕಥೆ ಹಿಡಿಸಿತು. ಹಿಂದೆ “ಮಾರ್ಚ್ 22″ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ನಾಯಕನಾಗಿ ಇದು ಮೊದಲ ಚಿತ್ರ. ಸ್ನೇಹದ ಮಹತ್ವ ಸಾರುವ ಈ ಚಿತ್ರದಲ್ಲಿ ಮನೋರಂಜನೆಗೆ ಬೇಕಾದ ಎಲ್ಲಾ ಅಂಶಗಳು ಇದೆ. ನನ್ನ ಅಭಿಮಾನಿ ಸಮರ್ಥ್ ಮತ್ತು ನನ್ನ ತಂದೆ, ತಾಯಿ ಹಾಡು ಬಿಡುಗಡೆ ಮಾಡಿದ್ದು ಸಂತಸ ತಂದಿದೆ ಎಂದರು ನಾಯಕ ಕಿರಣ್ ರಾಜ್.

ತಮ್ಮ ಅಭಿನಯದ ಬಗ್ಗೆ ನಟ ಗೋಪಾಲ್ ದೇಶಪಾಂಡೆ ಮಾಹಿತಿ ನೀಡಿದರು. ಒಂದೇ ಟೇಕ್ ನಲ್ಲಿ ಈ ಚಿತ್ರದ ಹಾಡೊಂದರ ನೃತ್ಯ ನಿರ್ದೇಶನ ಮಾಡಿರುವುದಾಗಿ ನೃತ್ಯ ನಿರ್ದೇಶ ಧನಂಜಯ್ ತಿಳಿಸಿದರು. ಜ್ಯೂಡಿ ಸ್ಯಾಂಡಿ ” ಬಡ್ಡೀಸ್ ” ಹಾಡುಗಳಿಗೆ ಸಂಗೀತ ನೀಡಿದ್ದು, ಯು ಎಸ್ ಎ ನಿವಾಸಿ ನಿಭಾ ಶೆಟ್ಟಿ ಛಾಯಾಗ್ರಹಣ ಮಾಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…