“ಬುಲೆಟ್” ಏರಿ ಬರುತ್ತಿದ್ದಾರೆ ಧರ್ಮ ಕೀರ್ತಿರಾಜ್.

"Bullet" is rising Dharma Keerthiraj.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ..

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸುತ್ತಿರುವ “ಬುಲೆಟ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಎರಡನೇ ಹಂತದ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಬಂಗಲೆಯೊಂದರಲ್ಲಿ ಹಿರಿಯ ನಟಿ ಭವ್ಯ, ನಟ ಧರ್ಮ ಕೀರ್ತಿರಾಜ್ ಹಾಗೂ ಬೇಬಿ ಸಿದ್ ಟೈನ್ ಅಭಿನಯಿಸುತ್ತಿರುವ ಹಾಡೊಂದರ ಚಿತ್ರೀಕರಣ ನಡೆಯುತ್ತಿದೆ. ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿಯಿದೆ."Bullet" is rising Dharma Keerthiraj.

ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್‌, “ಬುಲೆಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರದಲ್ಲೂ ಸತ್ಯಜಿತ್ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಅವರಿಗೆ ಮೊದಲ ಚಿತ್ರ. ಇಸಾಕ್ ಕಾಜಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ."Bullet" is rising Dharma Keerthiraj.

ಧರ್ಮ ಕೀರ್ತಿರಾಜ್ ಅವರಿಗೆ ನಾಯಕಿಯಾಗಿ ಶ್ರೀಯಾ ಶುಕ್ಲ ಅಭಿನಯಿಸುತ್ತಿದ್ದಾರೆ. ಅಜಿತಾ ಜಾ ದ್ವಿತೀಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟಿ ಭವ್ಯ ಸಹ ಮುಖ್ಯಪಾತ್ರದಲ್ಲಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಮೀರ್ ಖಾನ್ ಮುಂತಾದವರ ಚಿತ್ರಗಳಲ್ಲಿ ನಟಿಸಿರುವ ಶಿವ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರೆ. ಇಸಾಕ್ ಕಾಜಿ, ಸತ್ಯಜಿತ್, ಬೇಬಿ ಸಿದ್ ಟೈನ್, ಶಿವ, ರಾಜ ದೀಪ್, ಕಿಲ್ಲರ್ ವೆಂಕಟೇಶ್, ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ."Bullet" is rising Dharma Keerthiraj.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣವಿದೆ. ಮೂರು ಹಾಡುಗಳಿದ್ದು ರಾಜ್ ಭಾಸ್ಕರ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ಸಂಕಲನ ಹಾಗೂ ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ."Bullet" is rising Dharma Keerthiraj.

“ಬುಲೆಟ್” ಚಿತ್ರದ ಚಿತ್ರೀಕರಣ ಗೋವಾದ ಬೀಚ್ ವೊಂದರಲ್ಲಿ ನಡೆಯುತ್ತಿದ್ದಾಗ ನಾಯಕಿ ಶ್ರೀಯಾ ಶುಕ್ಲ ಅವರ ಕಾಲಿಗೆ ಪೆಟ್ಡು ಬಿತ್ತು. ನಂತರ ನೆರೆಯ ವೈದ್ಯರ ಸಹಕಾರದಿಂದ ಚಿಕಿತ್ಸೆ ನೀಡಲಾಯಿತು. ಬೇಗ ಗುಣಮುಖರಾದರು ಎಂಬ ವಿಷಯವನ್ನು ಸಹ ನಿರ್ದೇಶಕ ಇಸಾಕ್ ಕಾಜಿ ತಿಳಿಸಿದ್ದಾರೆ."Bullet" is rising Dharma Keerthiraj.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…