ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ!

Chandan Shetty is an acting Vidyarthi Vidyarthiniyare

ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ Chandan Shetty is an acting Vidyarthi vidyarthiniyare ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥಾ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದದ್ದು ವಿಶೇಷ.Chandan Shetty is an acting Vidyarthi Vidyarthiniyare

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಅವರೆಲ್ಲರೂ ಸಿನಿಮಾದ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಕೊಳ್ಳುವಂತೆ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವೀಡಿಯೋ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸೋ ವೀಟಿಯನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಲಾಯಿತು.Chandan Shetty is an acting Vidyarthi Vidyarthiniyare

ನಿರ್ದೇಶಕ ಅರುಣ್ ಅಮುಕ್ತ ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ ಕಶ್ಯಪ್ ಮಾಹಿತಿ ನೀಡಿದರು. ಕುಂಬಳ ಕಾಯಿ ಒಡೆದಾದ ನಂತರದಲ್ಲೀಗ ಬಿರುಸಿನಿಂದ ಪೆÇೀಸ್ಟ್ ಪೆÇ್ರಡಕ್ಷನ್ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ಜೂನ್ ಹೊತ್ತಿಗೆಲ್ಲ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲಿಯೇ ಈ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ರ್ಯಾಪರ್ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳ ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ಚಂದನ್ ಅವರಲ್ಲಿದೆ. ಆ ಬಗ್ಗೆ ಚಿತ್ರತಂಡದಲ್ಲೂ ಒಂದು ಮೆಚ್ಚುಗೆ ಇದ್ದೇ ಇದೆ.Chandan Shetty is an acting Vidyarthi Vidyarthiniyare

ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…