ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ‘ತೂತು ಮಡಿಕೆ’ ಖ್ಯಾತಿಯ ಚಂದ್ರ ಕೀರ್ತಿ

Chandra Keerthy of Thoothu Madike fame is gearing up to direct another movie

‘ತೂತು ಮಡಿಕೆ’ ಸಿನಿಮಾ ಮೂಲಕ ಗಮನ ಸೆಳೆದಿರೊ ಯುವ ನಿರ್ದೇಶಕ ಕಂ ನಟ ಚಂದ್ರ ಕೀರ್ತಿ ಮತ್ತೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಬಾರಿ ಲವ್ ಹಾಗೂ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಚಂದ್ರ ಕೀರ್ತಿ.Chandra Keerthy of Thoothu Madike fame is gearing up to direct another movie

‘ಸಿಲಿಕಾನ್ ಸಿಟಿ’, ‘ಕಿಸ್’, ‘ಮೂಕವಿಸ್ಮಿತ’, ‘ಬೆಂಕಿ’ ಸಿನಿಮಾದಲ್ಲಿ ನಟಿಸಿರುವ ಚಂದ್ರ ಕೀರ್ತಿ ಹಲವು ಕಿರುಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ತೂತು ಮಡಿಕೆ ಮೂಲಕ ನಿರ್ದೇಶಕ ಕಂ ನಟನಾಗಿ ಹೊಸ ಜರ್ನಿ ಆರಂಭಿಸಿ ಭರವಸೆ ಮೂಡಿಸಿರುವ ಚಂದ್ರ ಕೀರ್ತಿ ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ.Chandra Keerthy of Thoothu Madike fame is gearing up to direct another movie

‘ತೂತು ಮಡಿಕೆ’ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಸ್ಪೂರ್ತಿಯಿಂದಲೇ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದೇನೆ. ಈ ಚಿತ್ರದಲ್ಲಿ ನಾಯಕ ನಟನಾಗಿ ನಾನೇ ನಟಿಸುತ್ತಿದ್ದೇನೆ. ಕೊನೆಯ ಹಂತದ ಸ್ಕ್ರಿಪ್ಟ್ ಕೆಲಸದಲ್ಲಿ ನಾನು ಹಾಗೂ ತಂಡ ನಿರತರಾಗಿದ್ದೇವೆ. ಇದು ಲವ್ ಹಾಗೂ ಆಕ್ಷನ್ ಸಬ್ಜೆಕ್ಟ್ ಸಿನಿಮಾ. ಹಳ್ಳಿ ಹಾಗೂ ಕಾಡಿನ ಹಿನ್ನೆಲೆಯಲ್ಲಿ ಸಿನಿಮಾ ಸಾಗುತ್ತದೆ. ಚಿತ್ರದ ನಾಯಕಿ ಹಾಗೂ ತಾರಾಬಳಗದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ. ಫೆಬ್ರವರಿಯಲ್ಲಿ ಸಿನಿಮಾ ಚಿತ್ರೀಕರಣ ಆರಂಭಿಸಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ತೂತು ಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್ ಮಧುಸೂಧನ್ ರಾವ್ ಈ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ ಎಂದು ಚಂದ್ರ ಕೀರ್ತಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.Chandra Keerthy of Thoothu Madike fame is gearing up to direct another movie

ಸ್ವಾಮಿನಾಥನ್ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಸ್ಕ್ರಿಪ್ಟ್ ಕೆಲಸಗಳು ಮುಗಿಯುತ್ತಿದ್ದಂತೆ ಪ್ರಿ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿದ್ದು, ಟೈಟಲ್, ಸಿನಿಮಾ ತಾರಾಬಳಗ ಹಾಗೂ ತಂತ್ರಜ್ಞರ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳೋದಾಗಿ ಚಂದ್ರ ಕೀರ್ತಿ ತಿಳಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…