ರಕ್ಷಿತ್‌ ಶೆಟ್ಟಿ ನಟನೆಯ ಚಾರ್ಲಿಗೆ UFO ಬಲ; ಹಿಂದಿಯಲ್ಲಿ ವಿತರಣೆ ಮಾಡಲಿದೆ ಈ ಸಂಸ್ಥೆ

ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಇನ್ನೇನು ಜೂನ್‌ 10ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಅದಕ್ಕೂ ಮುನ್ನ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿರುವ ತಂಡ, ನಿತ್ಯ ಒಂದಲ್ಲ ಒಂದು ಅಪ್‌ಡೇಟ್‌ ಮಾಹಿತಿಯನ್ನು ಹಂಚಿಕೊಳ್ಳುತ್ತಿದೆ. ಇದೀಗ ಹಿಂದಿಯಲ್ಲಿ ಈ ಚಿತ್ರವನ್ನು ವಿತರಣೆ ಮಾಡುವವರು ಯಾರು ಎಂಬ ವಿಚಾರವನ್ನು ಹೊರಗೆಡವಿದೆ.88152505

ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷಿಕ ಆಡಿಯನ್ಸ್‌ ಅನ್ನು ಟೀಸರ್‌ ಮೂಲಕ ಸೆಳೆದಿದೆ. ಅದರಂತೆ ಅಲ್ಲಿನ ಸ್ಟಾರ್‌ ನಟರೂ ಈ ಸಿನಿಮಾ ನೋಡಿ ಮೆಚ್ಚಿ ಅರ್ಪಿಸಲು ಮುಂದೆ ಬಂದಿದ್ದಾರೆ.80648316

ತೆಲುಗಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲಯಾಳಂನಲ್ಲಿ ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ. ಅದೇ ರೀತಿ ಹಿಂದಿಯಲ್ಲಿ ಖ್ಯಾತ ಸಂಸ್ಥೆ ಯೂಎಫ್‌ಒ (UFO) ವಿತರಣೆ ಮಾಡಲಿದೆ.charlie characters

ಶ್ವಾನದ ಹಿನ್ನೆಲೆಯಲ್ಲಿಯೇ ಸಾಗುವ ಈ ಸಿನಿಮಾದಲ್ಲಿ ನಾಯಕನಾಗಿ ರಕ್ಷಿತ್‌ ಶೆಟ್ಟಿ ನಟಿಸಿದರೆ, ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿ ಹಲವರಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರ ನಿರ್ದೇಶಿಸಿದರೆ, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದಾರೆ.777 charlie 2 e1622955344731

ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ.MV5BN2RlNzBhNDktYmJhNC00YTEzLTg0NmUtYWNlNjk2YTZmNTMwXkEyXkFqcGdeQXVyODk4NTI4NDA@. V1

ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ಒದಗಿಸಿದ್ದಾರೆ. ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ಒದಗಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…