‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ನಿರ್ದೇಶಕನ ಸಿನಿಮಾದಲ್ಲಿ ಕೆಜಿಎಫ್ ತಾತ…ರಿಲೀಸ್ ಆಯ್ತು ‘ನ್ಯಾನೋ ನಾರಾಯಣಪ್ಪ’ ಫಸ್ಟ್ ಲುಕ್!

ಕೆಜಿಎಫ್ ಸರಣಿ ಸಿನಿಮಾದಲ್ಲಿ ದೃಷ್ಟಿಹೀನಾ ಮುದುಕನ ಪಾತ್ರದಲ್ಲಿ ಕಾಣಿಸಿಕೊಂಡು ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಕೆಜಿಎಫ್ ತಾತ ಅಂತಾನೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ನ್ಯಾನೋ ನಾರಾಯಣಪ್ಪ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.WhatsApp Image 2022 06 27 at 4.59.45 PM 1

ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ.WhatsApp Image 2022 06 27 at 4.59.45 PM

ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಉಣಬಡಿಸಿದ್ದ ನಿರ್ದೇಶಕ ಕುಮಾರ್ ಕ್ರಿಟಿಕಲ್ ಕೀರ್ತನೆಗಳು ಸಿನಿಮಾದಲ್ಲಿ ಬೆಟ್ಟಿಂಗ್ ಧಂದೆಯ ಕರಾಳತೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದರು. ಇದೀಗ ನ್ಯಾನೋ ನಾರಾಯಣಪ್ಪ ಸಿನಿಮಾದ ಮೂಲಕ ಮತ್ತೊಮ್ಮೆ ಚಿತ್ರಪ್ರೇಮಿಗಳನ್ನು ಎಂಟರ್ ಟೈನ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ಕುಮಾರ್ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಕೂಡ ಹಾಕಿದ್ದಾರೆ. ಇದೊಂದು ಕಾಮಿಡಿ ಎಮೋಷನಲ್ ಡ್ರಾಮ್ ಸಿನಿಮಾವಾಗಿದ್ದು, ತುಂಬ ಕಾಡುವ ಕಥೆ, ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಅಂತಾರೇ ಕುಮಾರ್.WhatsApp Image 2022 06 27 at 4.59.46 PM

ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾವನ್ನು ತೆರೆಗೆ ಯೋಜನೆ ಹಾಕಿಕೊಂಡಿದೆ. ಕುಮಾರ್ ನಿರ್ಮಾಣದ ನ್ಯಾನೋ‌ ನಾರಾಯಣಪ್ಪ ಸಿನಿಮಾಗೆ ರಾಜಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ಸಿದ್ದು ಸಂಕಲನವಿದೆ. ಸದ್ಯ ಫಸ್ಟ್ ಲುಕ್ ರಿವೀಲ್ ಮಾಡಿರುವ ಚಿತ್ರತಂಡ ಶೀರ್ಘದಲ್ಲಿ ಟೀಸರ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.maxresdefault 1 e1656387896471

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…