ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ.

Chief Minister Siddaramaiah released the trailer of "Dove Master"

ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವು ಗಣ್ಯರು ಬಿಡುಗಡೆಗೊಳಿಸಿದರು.

“ಡವ್ ಮಾಸ್ಟರ್” ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. “ರಾಕಿ” ಎಂಬ ಹೆಸರಿನ ನಾಯಿ ಈ ಚಿತ್ರದಲ್ಲಿ ಅಭಿನಯಿಸಿದೆ. ತಬಲನಾಣಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.Chief Minister Siddaramaiah released the trailer of "Dove Master"

ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ಚಾಂದ್ ಪಾಷಾ.

ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಆರ್ಯ.Chief Minister Siddaramaiah released the trailer of "Dove Master"

ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ತಬಲನಾಣಿ ತಿಳಿಸಿದರು.

ನಿರ್ಮಾಪಕ ಸಿ.ರೋಷನ್, ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್, ಛಾಯಾಗ್ರಾಹಕ ಕಿರಣ್ ಕುಮಾರ್, ನಟಿ ಪಂಕಜ ಹಾಗೂ ಹಾಡು ಬರೆದಿರುವ ಸೌಮ್ಯ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಬಲ ನಾಣಿ, ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿ(ನಾಯಿ) ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…