ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ `ಚೋಳ’ ಟೀಸರ್!

'Chola' teaser will be released on August 20!

ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದ ತುಂಬೆಲ್ಲ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ಬಹುಶಃ ಬರೀ ಅಂಜನ್ ಅಂದರೆ ಗುರುತು ಹತ್ತೋದು ಕಷ್ಟ. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ಕಣ್ಣರಳಿಸುತ್ತಾರೆ. ಹೀಗೆ ಸೀಮಿತ ಚೌಕಟ್ಟಿನಲ್ಲಿ ಒಂದಷ್ಟು ಹೆಸರಾಗಿರುವ ಅಂಜನ್ ಇದೀಗ `ಚೋಳ’ ಎಂಬ ಚಿತ್ರದ ಮೂಲಕ ಮಾಸ್ ಲುಕ್ಕಿನಲ್ಲಿ ಎಂಟ್ರಿ ಕೊಡಲು ಎಡಿಯಾಗಿದ್ದಾರೆ. ವಿಶೇಷವೆಂದರೆ, ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಸುರೇಶ್ ಡಿ.ಎಂ ಅವರು `ಚೋಳ’ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಈ ಸಿನಿಮಾದ ಟೀಸರ್ ಇದೇ ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ.'Chola' teaser will be released on August 20!

ತನ್ನ ಸೃಷ್ಟಿ ಎಂಟರ್‍ಪ್ರೈಸಸ್ ಬ್ಯಾನರಿನಡಿಯಲ್ಲಿ ಸುರೇಶ್ ಡಿ.ಎಂ `ಪ್ರಯಾಣಿಕರ ಗಮನಕ್ಕೆ’ `ರಣಹೇಡಿ’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಭಿನ್ನ ಕಥಾನಕದೊಂದಿಗೆ ಚೋಳ ಚಿತ್ರದ ಸಾರಥ್ಯ ವಹಿಸಿಕೊಂಡಿದ್ದಾರೆ. ಇದರಲ್ಲಿ ಗ್ರಾಮೀಣ ಪ್ರತಿಭೆಯಾದ ರೂರಲ್ ಸ್ಟಾರ್ ಅಂಜನ್‍ರನ್ನು ನಾಯಕನನ್ನಾಗಿಸುವ ಮೂಲಕ, ಅವರ ಕನಸುಗಳಿಗೆ ಜೊತೆಯಾಗಿದ್ದಾರೆ. ಅಂದಹಾಗೆ, ಚೋಳ ಎಂಬ ಟೈಟಲ್ಲು ಕೇಳಿದಾಕ್ಷಣವೇ ಇದೊಂದು ಐತಿಹಾಸಿಕ ಕಥಾ ಹಂದರದ ಚಿತ್ರವಾ ಎಂಬಂಥಾ ಅನುಮಾನ ಕಾಡುತ್ತದೆ. ಆದರೆ, ಇದು ಪಕ್ಕಾ ಆಧುನಿಕ ಕಥನ. ಪ್ರೀತಿ, ರೌಡಿಸಂ ಸೇರಿದಂತೆ ಎಲ್ಲವೂ ಬೆರೆತಿರುವ ಚಿತ್ರವೆಂಬ ಸ್ಪಷ್ಟನೆ ನಿರ್ದೇಶಕರ ಕಡೆಯಿದ ಸಿಗುತ್ತದೆ.'Chola' teaser will be released on August 20!

ಯರ್ರಾಬಿರ್ರಿ ಅಂತೊಂದು ಸಿನಿಮಾ ಮಾಡಿದ್ದ ರೂರಲ್ ಸ್ಟಾರ್ ಅಂಜನ್‍ರ ಪ್ರತಿಭೆಯನ್ನು ಗಮನಿಸಿದ್ದ ನಿರ್ದೇಶಕ ಸುರೇಶ್ ಈ ಚಿತ್ರಕ್ಕೆ ನಾಯಕನನ್ನಾಗಿಸಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ದಿಶಾ ಪಾಂಡೆ ಮತ್ತು ಪ್ರತತಿಭಾ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ದಿನೇಶ್ ಮಂಗಳೂರು ಮತ್ತು ರಾಜ ಬಲವಾಡಿ ವಿಲನ್ನುಗಳಾಗಿ ನಟಿಸಿದ್ದಾರೆ ಮನಮೋಹನ್ ರಾಯ್ ರಂಥ ಹಿರಿಯ ನಟರು ವಿಶೇಷಪಾತ್ರಗಳನ್ನು ನಿಭಾಯಿಸಿದ್ದಾರೆ. ಮಜಾ ಭಾರತ ಖ್ಯಾತಿಯ ಜಗಪ್ಪ, ಮಿಂಚು, ವರ್ಧನ್ ತೀರ್ಥಹಳ್ಳಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.chola-teaser-will-be-released-on-august-20

ಸಂದೀಪ್ ಹೊನ್ನಾಳ್ಳಿ ಛಾಯಾಗ್ರಹಣ, ಶಿವಶಂಕರ್ ಸಂಕಲನ ಈ ಚಿತ್ರಕ್ಕಿದೆ. ಸಾಕಷ್ಟು ತಯಾರಿ ನಡೆಸಿಕೊಂಡು ಅಖಾಡಕ್ಕಿಳಿದಿರುವ ಸುರೇಶ್ ಅವರು ಸ್ವತಃ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಈಗಾಗಲೇ ಭರದಿಂದ ಒಂದಷ್ಟು ಚಿತ್ರೀಕರಣ ನಡೆದಿದೆ. ಮುಖ್ಯ ಭಾಗಗಳ ಇನೊಂದಿಷ್ಟು ಚಿತ್ರೀಕರಣ ಬಾಕಿ ಇದೆ. ಅದು ಮುಗಿದಾಕ್ಷಣವೇ ಆಡಿಯೋ ರಿಲೀಸ್ ಮಾಡಿ, ಅದರ ಬೆನ್ನಲ್ಲಿಯೇ ಟ್ರೈಲರ್ ಅನ್ನೂ ಬಿಡುಗಡೆಗೊಳಿಸುವ ಯೋಜನೆ ಚಿತ್ರತಂಡದ್ದಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…