“ಕಾಕ್ಟೈಲ್” ಹೀರೋ ವಿರೇನ್ ಕೇಶವ್‍ಗೆ ಮೊದಲ ಚಿತ್ರದಲ್ಲೇ ” ಅತ್ಯುತ್ತಮ ನಾಯಕ ನಟ ಪ್ರಶಸ್ತಿ “

"Cocktail" hero Viren Keshav won "Best Actor Award" in his first film.

ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಧಾರವಾಡ ಇವರು ಆಯೋಜಿಸಿರುವ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2022ರಲ್ಲಿ, ಡಾ. ಶಿವಪ್ಪ ನಿರ್ಮಾಣದಲ್ಲಿ ತಯಾರಾದ “ಕಾಕ್ಟೈಲ್” ಚಲನಚಿತ್ರವನ್ನು ವೀಕ್ಷಿಸಿ, ಈ ಚಲನಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿರುವ ವಿರೇನ್ ಕೇಶವ್ ಅವರಿಗೆ ಮೊಟ್ಟ ಮೊದಲ ಬಾರಿಗೆ ” ಅತ್ಯುತ್ತಮ ನಾಯಕ ನಟ ” ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ."Cocktail" hero Viren Keshav won "Best Actor Award" in his first film.

ವಿರೇನ್ ಕೇಶವ್ ಅವರಿಗೆ ಬಾಲ್ಯದಿಂದಲೂ ಕಲೆ, ಸಾಹಿತ್ಯ, ನಾಟಕ ಅಭಿನಯದಲ್ಲಿ ಆಸಕ್ತಿ ಇದ್ದುದರಿಂದ ತಮ್ಮ ಎಂ.ಬಿ.ಎ ಶಿಕ್ಷಣವನ್ನು ಮುಗಿಸಿ ಮುಂಬೈನಲ್ಲಿರುವ ಅನುಪಮ್ ಖೇರ್ ಅವರ ನಟನಾ ಸಂಸ್ಥೆಯಲ್ಲಿ ನಟನೆಯಲ್ಲಿ ತರಬೇತಿಯನ್ನು ಪಡೆದು, ಒಬ್ಬ ಪರಿಪೂರ್ಣ ನಟನಾಗಲು ಬೇಕಾಗಿರುವ ಎಲ್ಲಾ ಕಲೆಗಳನ್ನು ಸಿದ್ಧಿಸಿಕೊಂಡಿರುವ ಒಬ್ಬ ಸುಂದರ ಸ್ತುರದ್ರೂಪಿ ಕಲಾವಿದ ವಿರೇನ್ ಕೇಶವ್.


ಖ್ಯಾತ ಚಲನಚಿತ್ರ ನಟಿ ಪ್ರಿಯಾಂಕ ಉಪೇಂದ್ರ ಈ ಪ್ರಶಸ್ತಿಯನ್ನು ನೀಡಿ ಶುಭ ಹಾರೈಸಿದ್ದಾರೆ."Cocktail" hero Viren Keshav won "Best Actor Award" in his first film.

ಭಾರೀ ಕುತೂಹಲ ಕೆರಳಿಸಿರುವ ” ಕಾಕ್ಟೈಲ್ ” ಚಲನಚಿತ್ರವು ದಿ. 06. 01. 2023 ರಂದು ಕರ್ನಾಟಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಪ್ರಸ್ತುತ ಚಲನಚಿತ್ರವನ್ನು ವಿಜಯಲಕ್ಷ್ಮಿ ಕಂಬೈನ್ಸ್‍ನಲ್ಲಿ ಡಾ. ಶಿವಪ್ಪ ನಿರ್ಮಾಣ ಮಾಡಿದ್ದು, ಶ್ರೀರಾಮ್ ನಿರ್ದೇಶನ ಮಾಡಿದ್ದಾರೆ. ನಾಯಕನಟನಾಗಿ ಪ್ರತಿಭಾವಂತ ಹುಡುಗ ವಿರೇನ್ ಕೇಶವ್, ನಾಯಕಿಯಾಗಿ ಚರಿಷ್ಮಾ ನಟಿಸಿದ್ದಾರೆ. ಮುಖ್ಯ ತಾರಾಗಣದಲ್ಲಿ ಶೋಭರಾಜ್, ರಮೇಶ್ ಪಂಡಿತ್, ಮಹಾಂತೇಶ್ , ಶಿವಮಣಿ, ಕರಿಸುಬ್ಬು, ಚಂದ್ರಕಲಾ ಮೋಹನ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿದ್ದಾರೆ. ಈ ಚಲನಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋಸ್ ಇವರು ಬಿಡುಗಡೆ ಮಾಡುತ್ತಿದ್ದು, ಎ2 ಮ್ಯೂಸಿಕ್‍ನಲ್ಲಿ ಹಾಡುಗಳು ಪ್ರಸಾರವಾಗುತ್ತಿದೆ.

ಮುಂಬೈನ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಅವರು ಹಾಡಿರುವ ಹಾಡು ಈಗಾಗಲೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿರೇನ್ ಕೇಶವ್ ಅಭಿಮಾನಿ ಬಳಗ ಮತ್ತು ಹಿತೈಷಿಗಳು ತುಂಬು ಹೃದಯದಿಂದ ಶುಭಾಶಯ ಕೋರಿ ಅಭಿನಂದಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…