ಕಮರ್ಷಿಯಲ್ – ಲವ್ ಕಥಾಹಂದರ ಹೊಂದಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

Commercial - "Santhosha Sangeet" with a love story will hit the screens soon.

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರ “ಸಂತೋಷ ಸಂಗೀತ”. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಾನು ಮೂಲತಃ ಎಂ.ಸಿ.ಎ ಪದವಿಧರ. ಮಹಾ ಸಿನಿಮಾ ಪ್ರೇಮಿ. ವಾರಕ್ಕೊಂದು ಸಿನಿಮಾ ನೋಡುವವನು. ಚೆನ್ನಾಗಿರುವ ಸಿನಿಮಾ ನೋಡಿದರೆ, ನಾನು ಈ ರೀತಿ ಸಿನಿಮಾ ಮಾಡಬೇಕೆಂದು ಆಸೆ ಪಡುತ್ತಿದ್ದವನು. ಆ ಆಸೆ ಈಗ ಈಡೇರಿದೆ. ಲಾಕ್ ಡೌನ್ ಸಮಯದಲ್ಲಿ ಕಥೆ ಬರೆದಿದ್ದೆ.Commercial - "Santhosha Sangeet" with a love story will hit the screens soon.

ಅದನ್ನು ಈಗ ಸಿನಿಮಾ ರೂಪದಲ್ಲಿ ತಂದಿದ್ದೀನಿ. ನಾನೇ ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದಲ್ಲಿ ಲವ್, ಕಾಮಿಡಿ, ವ್ಯಾಪಾರ ಹೀಗೆ ಎಲ್ಲಾ ತರಹದ ಕಮರ್ಷಿಯಲ್ ಅಂಶಗಳು ಈ ಚಿತ್ರದಲ್ಲಿದೆ. ಇದನ್ನು ಕಮರ್ಷಿಯಲ್ ಲವ್ ಜಾನರ್ ನ ಸಿನಿಮಾ ಎನ್ನಬಹುದು. ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ಈ ಚಿತ್ರದ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ನಿಜಜೀವನದಲ್ಲೂ ಪತಿ -ಪತ್ನಿಯಾಗಿರುವ ಅರ್ನವ್ ಹಾಗೂ ರಾಣಿ ತೆರೆಯ ಮೇಲೂ ನಾಯಕ-ನಾಯಕಿಯಾಗಿ ನಟಿಸಿರುವುದು ಈ ಚಿತ್ರದ ವಿಶೇಷ. ದೊಡ್ಡಣ್ಣ, ಅವಿನಾಶ್, ಲಯ ಕೋಕಿಲ, ಕವನ, ಅಮಿತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ
ಲೋಕೇಶ್ ಸೂರ್ಯ ಮಡೆನೂರು ಮನು, ಹನೀಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ‌ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಹಾಗೂ ನಿರ್ದೇಶಕ ಸಿದ್ದು ಎಸ್ ತಿಳಿಸಿದರು.Commercial - "Santhosha Sangeet" with a love story will hit the screens soon.

” ಹೊಂಬಣ್ಣ”, “ಪ್ರೇಮಂ” ಚಿತ್ರಗಳಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಅರ್ನವ್ ವಿನ್ಯಾಸ್, ಈ ಚಿತ್ರದಲ್ಲಿ ನನ್ನದು ಉದ್ಯಮಿಯ ಪಾತ್ರವೆಂದು ಹೇಳಿದರು. ಗಂಡ – ಹೆಂಡತಿ ಇಬ್ಬರು ಒಂದೇ ಉದ್ಯಮದಲ್ಲಿದ್ದಾಗ ಯಾವೆಲ್ಲಾ ಸವಾಲು ಎದುರಾಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದರು ನಾಯಕಿ ರಾಣಿ ವರದ್.

ಕವನ ಹಾಗೂ ಫಸ್ಟ್ rank ರಾಜು ಖ್ಯಾತಿಯ ಅಮಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಜೆ.ಪಿ ನಗರದ ಮಾಜಿ ಕಾರ್ಪೋರೇಟರ್ ಚಂದ್ರಶೇಖರ್ ರಾಜು ಅವರು “ಸಂತೋಷ ಸಂಗೀತ” ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಗೂ ಮುನ್ನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ಚಿತ್ರದ ಮೇಕಿಂಗ್ ವೀಡಿಯೋ ಪ್ರದರ್ಶಿಸಲಾಯಿತು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…