ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರಕ್ಕೆ ಮಾತಿನ ಮರು ಜೋಡಣೆ(ಡಬ್ಬಿಂಗ್) ಮುಕ್ತಾಯ .

Pramod Shetty

“ಜಲಂಧರ” (Pramod Shetty Jalandhara) ಚಿತ್ರತಂಡ ಇತ್ತೀಚೆಗೆ ಪ್ರಮೋದ್ ಶೆಟ್ಟಿ ಅವರ ಹುಟ್ಟು ಹಬ್ಬದ ಉಡುಗೊರೆಯಾಗಿ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿತ್ತು. ಚಿತ್ರದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ  ಜನಪ್ರಿಯತೆ ಗಳಿಸಿದ ಬೆನ್ನಲ್ಲೆ  “ಜಲಂಧರ” ಚಿತ್ರತಂಡ, ಮಾತಿನ ಮರು ಜೋಡಣೆ ( ಡಬ್ಬಿಂಗ್ ) Dubbing ಅನ್ನು  ಯಶಸ್ವಿಯಾಗಿ  ಪೂರ್ಣಗೊಳಿಸಿದ ಖುಷಿಯಲ್ಲಿದ್ದಾರೆ.Pramod Shetty starrer Jalandhara.

ಸ್ಟೇಪ್ ಅಪ್ ಲೋಕೇಶ್ ನಟಿಸಿ, ಕತೆ ಬರೆದು ಸ್ಟೇಪ್ ಅಪ್ ಪಿಚ್ಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡುತ್ತಿರುವ “ಜಲಂಧರ” ಚಿತ್ರಕ್ಕೆ ಮದನ್ ಎಸ್, ಚಂದ್ರ ಮೋಹನ್ ಸಿ ಎಲ್, ರಮೇಶ್ ರಾಮಚಂದರ್ ಹಾಗೂ ಪದ್ಮನಾಭನ್ ಹಣ ಹಾಕಿ ಕೈ ಜೋಡಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿ ಮೊದಲ ಬಾರಿಗೆ ವಿಷ್ಣು ವಿ ಪ್ರಸನ್ನ ನಿರ್ದೇಶನ ಮಾಡಿದ್ದಾರೆ.

ರಶ್ಮಿತ್ ಕುಮಾರ್  ನಿರ್ಮಾಣ ನಿರ್ವಹಣೆಯ ಕಾರ್ಯವನ್ನು  ವಹಿಸಿಕೊಂಡಿದ್ದು ಇನ್ನು ಚಿತ್ರಕ್ಕೆ ನುರಿತ ಸಂಕಲನಕಾರ ವೆಂಕಿ UDV ಕತ್ತರಿ ಹಾಕಿದ್ದಾರೆ. ಕೇರಳ ಮೂಲದ ಛಾಯಾಗ್ರಹಕರಾದ ವಿದ್ಯಾಶಂಕರ್ ಮತ್ತು ಸರಿನ್ ರವೀಂದ್ರನ್ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಯುವ ಸಂಗೀತ ನಿರ್ದೇಶಕ ಜತಿನ್ ದರ್ಶನ್ ಸಂಗೀತ ನೀಡಿರುವ “ಜಲಂಧರ” ಚಿತ್ರದಲ್ಲಿ ಸಹ ನಿರ್ದೇಶಕನಾಗಿ ಅಕ್ಷಯ್ ಕುಮಾರ್ ಎಮ್, ಕಲಾ ನಿರ್ದೇಶನ ರಾಜು ವೈವಿಧ್ಯ, ಸಾಹಸ  ನಿರ್ದೇಶಕರಾದ ಕೌರವ ವೆಂಕಟೇಶ್, ಪತ್ರಿಕಾ ಸಂಪರ್ಕ ಸುದೀಂದ್ರ ವೆಂಕಟೇಶ್ ರವರು ಕೈ ಜೋಡಿಸಿದ್ದಾರೆ.Pramod Shetty starrer Jalandhara.

ಚಿತ್ರದ ಮುಖ್ಯ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ, ಟಗರು ಖ್ಯಾತಿಯ ರುಷಿಕಾ ರಾಜ್, ರಾಘು ರಾಮನಕೊಪ್ಪ, ಅರೋಹಿತಾ ಗೌಡ, ಬಲ ರಾಜ್ವಡಿ, ಆದಿ ಕೇಶವರೆಡ್ಡಿ, ಭೀಷ್ಮ ರಾಮಯ್ಯ, ಪ್ರತಾಪ ನೆನಪು, ನವೀನ್ ಸಾಗರ್, ವಿಶಾಲ್ ಪಾಟೀಲ್, ಪ್ರಸಾದ್ ಸೂರನಹಳ್ಳಿ, ಅಂಬು, ವಿಜಯ್ ರಾಜ್ ಮತ್ತು ನಂದಿನಿ ರಾಜ್ ಅಭಿನಯಿಸಿದ್ದಾರೆ.

“ಜಲಂಧರ” ಚಿತ್ರ ತಂಡವೂ ತಮ್ಮ ಚಿತ್ರದ ಪ್ರತಿ ಸಣ್ಣ ತುಣುಕುಗಳನ್ನು ವಿಭಿನ್ನವಾಗಿ ಪ್ರಚಾರ ಮಾಡುತ್ತಾ ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆ ಹುಟ್ಟಿಸುತ್ತಾ ಚಿತ್ರದ ಅಂತಿಮ ಘಟ್ಟದತ್ತ ಸಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…