ಸೆಪ್ಟೆಂಬರ್ ನಲ್ಲಿ ತೆರೆಯಲಿದೆ “ಕಾಟನ್ ಪೇಟೆ ಗೇಟ್”.

cottonpet gate kannada movie

ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.

ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ‌. ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ “ಯುವರಾಜ” ಚಿತ್ರ ನಿರ್ದೇಶನ ಮಾಡಿದ್ದರು. ಈಗ ಅವರ ಬಳಿ ಕೆಲಸ ಮಾಡಿರುವ ವೈ ರಾಜಕುಮಾರ್ ನಿರ್ದೇಶನದಲ್ಲಿ “ಕಾಟನ್ ಪೇಟೆ ಗೇಟ್” ಚಿತ್ರ ನಿರ್ಮಾಣ ಮಾಡಿದ್ದೇನೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಇಂದು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 9 ರಂದು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಆರ್ ಎಸ್ ಶ್ರೀನಿವಾಸ್.cottonpet gate kannada movie

ಅವಕಾಶ ನೀಡಿರುವ ನಿರ್ಮಾಪಕರಿಗೆ ಧನ್ಯವಾದ. “ಕಾಟನ್ ಪೇಟೆ ಗೇಟ್” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ ಅಂದರೆ ಅದಕ್ಕೆ ನಾನೊಬ್ಬ ಕಾರಣ ಅಲ್ಲ ನನ್ನ ಇಡೀ ಚಿತ್ರತಂಡದ ಶ್ರಮ ಎಂದರು ನಿರ್ದೇಶಕ ವೈ ರಾಜಕುಮಾರ್.

ಈ ಚಿತ್ರ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಆದರೆ ಮೊದಲು ಆರಂಭವಾಗಿದ್ದು ಕನ್ನಡದಲ್ಲಿ . ಇಲ್ಲಿನ ಅರಣ್ಯ ಪ್ರದೇಶ, ಸುಂದರವಾದ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್, ಕಾಮಿಡಿ, ಸಸ್ಪೆನ್ಸ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಕಮರ್ಷಿಯಲ್ ಚಿತ್ರ. ರಾಜಕುಮಾರ್ ಬಹಳ ಚೆನ್ನಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನನಗೆ ತುಂಬಾ ಖುಷಿಯಾಗಿದೆ ಎನ್ನುತ್ತಾರೆ ನಾಯಕ ವೇಣುಗೋಪಾಲ್.cottonpet gate kannada movie

ಸಂಗೀತ ನಿರ್ದೇಶಕ ಪ್ರಸು, ಛಾಯಾಗ್ರಹಕ ಯೋಗಿ ರೆಡ್ಡಿ, ಚಿತ್ರದಲ್ಲಿ ನಟಿಸಿರುವ 8pm ಸಾಯಿಕುಮಾರ್, ಕಟ್ಟಪ್ಪ, ರಘು ಮುಂತಾದ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್, ಗೌರವ ಕಾರ್ಯದರ್ಶಿ ಸುಂದರರಾಜ್, ಮಮತಾ ದೇವರಾಜ್, ನಿರ್ದೇಶಕ ವಿ.ಸಮುದ್ರ ಹಾಗೂ ನಟ ಜೈ ಸಿದ್ಧಾರ್ಥ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.cottonpet gate kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…