ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಗೌರಿ” ಚಿತ್ರಕ್ಕೆ ಚಾಲನೆ.

Crazystar Ravichandran starrer "Gauri"

ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಎನ್.ಎಸ್.ರಾಜಕುಮಾರ್ – ವಿ.ಎಸ್ ರಾಜಕುಮಾರ್ ನಿರ್ಮಾಣದ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಶೇಷಾದ್ರಿಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭ ಕೋರಿದರು. ಮೂವತ್ತಕ್ಕೂ ಅಧಿಕ ವರ್ಷಗಳ ಕಾಲ ಡಾ||ರಾಜಕುಮಾರ್ ಅವರ ಬಳಿ ಸಹಾಯಕರಾಗಿ ಕಾರ್ಯ ನಿರ್ವಹಿಸಿರುವ ಚನ್ನ ಅವರು ಕ್ಯಾಮೆರಾ ಚಾಲನೆ ಮಾಡಿದರು.Crazystar Ravichandran starrer "Gauri"

ಕನ್ನಡ ಚಿತ್ರರಂಗಕ್ಕೆ ಈಗ ಒಳ್ಳೆಯ ಕಾಲ. ವಿಶ್ವದಾದ್ಯಂತ ಕನ್ನಡ ಸಿನಿಮಾಗಳು ಹೆಸರು ಮಾಡುತ್ತಿದೆ. ಅದರಲ್ಲೂ ವಿಭಿನ್ನ ಕಥೆಯಿರುವ ಚಿತ್ರಗಳನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. “ಗೌರಿ” ಸಹ ವಿಭಿನ್ನ ಕಥೆಯ ಚಿತ್ರ. ಇಡೀ ಸಿನಿಮಾ ಪೂರ್ತಿ ಕೇವಲ ಮೂರೇ ಪಾತ್ರಗಳಿರುತ್ತದೆ. ಕೆಲವು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದಾಗಿ ನಿರ್ದೇಶಕರು ಹೇಳಿದ್ದಾರೆ. ದಾಂಡೇಲಿಯಲ್ಲಿ ಬಹುಭಾಗದ ಚಿತ್ರೀಕರಣ ನಡೆಯಲಿದೆ. ಹೊಸವರ್ಷಕ್ಕೆ ಹೊಸತರಹದ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇನ್ನು ರಾಜಕುಮಾರ್ ಎಂಬ ಹೆಸರು ಸದಾ ನನ್ನ ಜೊತೆ ಇರುತ್ತದೆ ಎಂಬುದಕ್ಕೆ ಈ ಚಿತ್ರದ ನಿರ್ಮಾಪಕರು ಸಹ ರಾಜಕುಮಾರ್ ಅವರೆ ಎಂದು ನಾಯಕ ರವಿಚಂದ್ರನ್ ಚಿತ್ರದ ಬಗ್ಗೆ ಮಾತನಾಡಿದರು.Crazystar Ravichandran starrer "Gauri"

ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಖ್ಯಾತ ನಟರಾದ ರವಿಚಂದ್ರನ್ ಅವರು ನನ್ನ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕರಾಗಿರುವುದು ಸಂತೋಷವಾಗಿದೆ. ಮುಂಬೈನ ಬರ್ಕಾ ಬಿಷ್ಟ್ ಈ ಚಿತ್ರದ ನಾಯಕಿ. ಗ್ರೀಷ್ಮಾ ಎಂಬ ಬಾಲ ಕಲಾವಿದೆ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಒಟ್ಟು ಮೂರೇ ಪಾತ್ರಗಳು.ಇದೊಂದು ಕೌಟುಂಬಿಕ ಚಿತ್ರ. ಇದುವರೆಗೂ ಸಾಕಷ್ಟು ಫ್ಯಾಮಿಲಿ ಚಿತ್ರಗಳು ಬಂದಿವೆ. ಈ ಚಿತ್ರದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ಯಾಕೆ ಸಮಸ್ಯೆಗಳು ಬರುತ್ತವೆ ಎಂಬುದನ್ನು ತೋರಿಸುತ್ತಿದ್ದೇವೆ. ಅವರಿಬ್ಬರ ನಡುವಿನ ಪ್ರೀತಿಗೆ ಯಾಕೆ ಸಮಸ್ಯೆ ಎದುರಾಗುತ್ತವೆ ಮತ್ತು ಅವರು ಅದನ್ನು ಹೇಗೆ ಪರಿಹರಿಸಿಕೊಳ್ಳುತ್ತಾರೆ ಎಂದು ಹೇಳುವುದಕ್ಕೆ ಹೊರಟಿದ್ದೇವೆ. “ಗೌರಿ” ಚಿತ್ರಕ್ಕೆ “ಶಂಕರ B/H ” ಎಂಬ ಅಡಿಬರಹವಿದೆ. ಇದೊಂದು ವಿಭಿನ್ನವಾದ ಚಿತ್ರಕಥೆ ಎನ್ನಬಹುದು. ಕೌಟುಂಬಿಕ ಚಿತ್ರವಾದರೂ, ಕಥೆ ಕಾಡಿನಲ್ಲಿ ನಡೆಯುತ್ತದೆ. ದಾಂಡೇಲಿ, ಯಲ್ಲಾಪುರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶಕ ಅನೀಸ್.Crazystar Ravichandran starrer "Gauri"

ನನಗೆ ಕನ್ನಡದಲ್ಲಿ‌ ಇದು ಮೊದಲನೆಯ ಚಿತ್ರ. ಅದರಲ್ಲೂ ದಕ್ಷಿಣ ಭಾರತದಲ್ಲೇ ಮೊದಲು ಎನ್ನಬಹುದು. ರವಿಚಂದ್ರನ್ ಸರ್ ಜೊತೆ ನಟಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ನಾಯಕಿ ಬರ್ಕಾ ಬಿಷ್ಟ್.

ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಹದಿನೈದನೇ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎನ್ ಎಸ್ ರಾಜಕುಮಾರ್. ಛಾಯಾಗ್ರಾಹಕ ಸತೀಶ್ ಸಹ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.Crazystar Ravichandran starrer "Gauri"

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…