ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

Crazystar Ravichandran The Judgment

ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ( Crazystar Ravichandran The Judgment ) ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ ಮತ್ತು ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.Crazystar Ravichandran The Judgment

ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ, ಅನುಭವಿ ಪಿ ಕೆ ಹೆಚ್ ದಾಸ್ ಮೂರು ಕ್ಯಾಮರಾಗಳನ್ನು ಬಳಸಿಕೊಂಡು ಕ್ಲೈಮ್ಯಾಕ್ಸ್ ಭಾಗವನ್ನು ಚಿತ್ರಿಸಿಕೊಂಡರು. ವಿಶ್ವನಾಥ ಗುಪ್ತಾ, ರಾಮು ರಾಯಚೂರು ಮತ್ತು ರಾಜಶೇಖರ ಪಾಟೀಲ್ ಈ ಚಿತ್ರದ ನಿರ್ಮಾಪಕರು.Crazystar Ravichandran The Judgment

“ದ ಜಡ್ಜ್ ಮೆಂಟ್” ಕಥೆ ಲೀಗಲ್ ಥ್ರಿಲ್ಲರ್ ಶೈಲಿಯದಾಗಿದ್ದು, ರಾಜ್ಯಾಂಗ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಈ ಸಿನೆಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ತಿಳಿಸಿದ್ದಾರೆ.Crazystar Ravichandran The Judgment

ಕ್ರೇಜಿ ಸ್ಟಾರ್ ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್ ಮತ್ತು ಜಗದೀಶ್ ಮಲ್ನಾಡ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.Crazystar Ravichandran The Judgment

ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ॥ ರವಿ ವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ “ದ ಜಡ್ಜ್ ಮೆಂಟ್” ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…