ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ’…ಎರಡನೇ ವಾರ ಸಕ್ಸಸ್ ಫುಲ್ ಪ್ರದರ್ಶನ

'Dare Devil Mustafa' won the hearts of Kannadigas...successful performance in the second week

ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ ಡೆವಿಲ್ ಮುಸ್ತಾಫ್ ಅಮೋಘ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ. ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಜನ ಥಿಯೇಟರ್ ಗೆ ಬರೋದಿಕ್ಕೆ ಹಿಂದೇಟು ಹಾಕುತ್ತಿರುವ ಈ ಕಾಲಘಟ್ಟದಲ್ಲಿ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ.‌'Dare Devil Mustafa' won the hearts of Kannadigas...successful performance in the second week

ಕಳೆದ ಆರೇಳು ತಿಂಗಳಿನಿಂದ ಥಿಯೇಟರ್ ನಲ್ಲಿ ಯಾವ ಸಿನಿಮಾಗೂ‌ ಸಿಗದ ರೆಸ್ಪಾನ್ಸ್ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್ ಸೆಂಟರ್ ಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಪೂಚಂತೇ ಪ್ರಪಂಚದಲ್ಲಿ ಪಯಣಿಸಿರುವ ಪ್ರೇಕ್ಷಕಪ್ರಭು ಇದು ಹೃದಯ ಬೆಸೆಯುವ ಕಥೆ..ಪ್ರತಿಯೊಬ್ಬರು ಇಂತಹ ಚಿತ್ರ ಮಿಸ್ ಮಾಡದೇ ನೋಡಬೇಕು ಎನ್ನುತ್ತಿದ್ದಾರೆ.Daredevil Mustafa Premiere Show Ticket for Rs 1 only

ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ಡೇರ್ ಡೆವಿಲ್ ಮುಸ್ತಾಫಾನ ದರ್ಶನಕ್ಕೆ ಚಿತ್ರತಂಡ ಸಜ್ಜಾಗಿದೆ. ಈ ವಾರ ಅಮೆರಿಕಾ ಹಾಗೂ ಯುರೋಪ್ ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.Daredevil Mustafa Premiere Show Ticket for Rs 1 only

ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…