ಸಮಾಜಕ್ಕೆ ಕನ್ನಡಿ ಹಿಡಿಯಲು ಹೊರಟಿರುವ ಡಿಯರ್ ವಿಕ್ರಮ್

ಸ್ಟಾರ್‌ ನಟರ ಚಿತ್ರಗಳು ನೇರವಾಗಿ ಓಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗುವ ಸಂಪ್ರದಾಯ ಕಡಿಮೆಯೇ. ಕಳೆದ ವರ್ಷ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಚಿತ್ರವು ಅಮೇಜಾನ್ ಪ್ರೈಮ್ನಲ್ಲಿ ನೇರವಾಗಿ ಬಿಡುಗಡೆಯಾಗಿತ್ತು. ಈಗ ಎರಡನೆಯ ಚಿತ್ರವಾಗಿ ಸತೀಶ್ ನೀನಾಸಂ ಅಭಿನಯದ ಡಿಯರ್ ವಿಕ್ರಮ್ ವೂಟ್ ಸೆಲೆಕ್ಟ್ನಲ್ಲಿ ನೇರವಾಗಿ ಜೂನ್ 30ಕ್ಕೆ ಬಿಡುಗಡೆಯಾಗಲಿದೆ.ಡಿಯರ್ ವಿಕ್ರಮ್ ಲಾಕ್ಡೌನ್ಗೂ ಮುಂಚೆಯೇ ಪ್ರಾರಂಭವಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ತಡವಾಗಿ ಇದೀಗ ಬಿಡುಗಡೆಯಾಗುತ್ತಿದೆ. ಚಿತ್ರ ತಡವಾಗಿದ್ದಕ್ಕೆ ಕಾರಣ ವಿವರಿಸುವ ಸತೀಶ್, ಚಿತ್ರದಲ್ಲಿ ನನಗೆ ಎರಡು ಗೆಟಪ್ಗಳಿವೆ. ಹಲವು ಲೊಕೇಶನ್ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಲೊಕೇಶನ್ಗಳಲ್ಲಿ ಚಿತ್ರೀಕರಣ ಮಾಡಿದ್ದು ಸವಾಲಾಗಿತ್ತು. ಚಿತ್ರದಲ್ಲಿ ಕಾಡು ಮತ್ತು ಮಳೆ ಪ್ರಧಾನ ಪಾತ್ರ ವಹಿಸುತ್ತದೆ. ಮೊದಲು ಮಳೆ, ಆ ನಂತರ ಇನ್ನಷ್ಟು ಸಮಯ ಕಾದು ಬೇಸಿಗೆಯಲ್ಲಿ ಚಿತ್ರೀಕರಣ ಮಾಡಿದೆವು. ಇನ್ನು, ನಮ್ಮ ಚಿತ್ರದಲ್ಲಿ ನಟಿಸಿದ ಅಚ್ಯುತ್ ಕುಮಾರ್, ಶ್ರದ್ಧಾ ಶ್ರೀನಾಥ್, ವಸಿಷ್ಠ ಸಿಂಹ ಎಲ್ಲರೂ ಬ್ಯುಸಿ ಕಲಾವಿದರೇ. ಅವರೆಲ್ಲರ ಡೇಟ್ಗಳನ್ನು ಹೊಂದಿಸಿ ಚಿತ್ರೀಕರಣ ಮಾಡುವುದು ಸುಲಭವಾಗಿರಲಿಲ್ಲ. ಅಷ್ಟರಲ್ಲಿ ಎರಡು ವರ್ಷ ಆಗಿತ್ತು. ಆ ನಂತರ ಲಾಕ್ಡೌನ್ನಿಂದ ಎರಡು ವರ್ಷ ನಿಧಾನವಾಯಿತು ಎನ್ನುತ್ತಾರೆ ಸತೀಶ್.16x9 1654862544225ಈ ಚಿತ್ರವು ಸಮಾಜಕ್ಕೆ ಕನ್ನಡಿ ಹಿಡಿಯುತ್ತದೆ ಎನ್ನುತ್ತಾರೆ ಸತೀಶ್. ಡಿಯರ್ ವಿಕ್ರಮ್ ಮೂಲಕ ನಾವು ಸಮಾಜದ ತಪ್ಪುಗಳನ್ನು ಎತ್ತಿ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮನರಂಜನೆಯ ಚಿತ್ರಗಳನ್ನು ಮಾಡುವುದು ಸುಲಭ. ಆದರೆ, ಈ ತರಹದ ಪ್ರಯತ್ನಗಳು ಕಷ್ಟ. ಟ್ರೇಲರ್ ನೋಡಿದವರು, ಈ ಚಿತ್ರವನ್ನು ಒಂದು ವರ್ಗಕ್ಕೆ ಸೇರಿಸಬಹುದು. ಆದರೆ, ಇಲ್ಲಿ ಎಡ ಅಥವಾ ಬಲ ಎನ್ನುವುದಿಲ್ಲ. ಇದೊಂದು ಪ್ರೇಮ ಕಥೆ. ಇಲ್ಲಿ ಪ್ರೀತಿಯ ಜೊತೆಗೆ ರಾಜಕೀಯ, ಆಕ್ಷನ್ ಎಲ್ಲವೂ ಇದೆ. ಇಂಥದ್ದೊಂದು ಚಿತ್ರ ನೋಡಿ, ಕಲರ್ಸ್ ಮತ್ತು ವೂಟ್ನವರು ಹಕ್ಕು ಪಡೆಯಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ. ಆದರೆ, ಒಂದೊಳ್ಳೆಯ ಮೊತ್ತಕ್ಕೆ ಚಿತ್ರದ ಹಕ್ಕುಗಳು ಮಾರಾಟವಾಗಿವೆ ಮತ್ತು ನಿರ್ಮಾಪಕರು ಸೇಫ್ ಆಗಿದ್ದಾರೆ ಎನ್ನುತ್ತಾರೆ ಸತೀಶ್.Dear Vikramಈ ಚಿತ್ರದ ಕಥೆ ಕೇಳಿದಾಗ ಅದೆಷ್ಟು ಖುಷಿ ಇತ್ತೋ, ಈಗಲೂ ಅದೇ ಖುಷಿ ಮತ್ತು ಉತ್ಸಾಹ ಇದೆ ಎನ್ನುತ್ತಾರೆ ಶ್ರದ್ಧಾ ಶ್ರೀನಾಥ್. ಸತೀಶ್ ಅವರ ಅಭಿನಯ ಅದ್ಭುತವಾಗಿ ಮೂಡಿಬಂದಿದೆ. ನನಗೂ ಈ ಚಿತ್ರದಲ್ಲೊಂದು ಒಳ್ಳಯ ಪಾತ್ರ ಸಿಕ್ಕಿದೆ ಎನ್ನುತ್ತಾರೆ.
ಡಿಯರ್ ವಿಕ್ರಮ್ ಚಿತ್ರವನ್ನು ನಂದೀಶ್ ನಿರ್ದೇಶಿಸಿದ್ದಾರೆ. ಕಥೆ-ಚಿತ್ರಕಥೆ ಸಹ ಅವರದ್ದೇ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…