ನೈಜ ಘಟನೆಗಳ ಸುತ್ತಲಿನ ಕಾಲ್ಪನಿಕ ಕಥಾಹಂದರ “ಡಿಸೆಂಬರ್ 24”

december 24 movie review

December 24 4/5

ಸೈನ್ಸ್ ಫಿಕ್ಷನ್ ಸಿನಿಮಾಗಳು ಕನ್ನಡದಲ್ಲಿ ತೀರಾ ಕಡಿಮೆಯಾಗುತ್ತಿವೆ. ವಿಜ್ಞಾನದ ಜೊತೆಗೆ ಕಲ್ಪನೆಯನ್ನು ಬೆಸುಗೆ ಹಾಕಿ ದೃಶ್ಯದ ಮೂಲಕಗ ತೆರೆಗೆ ಬಂದಿರುವ ಚಿತ್ರ ಡಿಸೆಂಬರ್ 24. ʻನವಜಾತ ಶಿಶುಗಳ ಮರಣʼ ಎನ್ನುವ ಸುದ್ದಿಗಳನ್ನು ಆಗಾಗ ನೋಡುತ್ತಿರುತ್ತೇವಲ್ಲಾ? ಒಂದೇ ಏಟಿಗೆ ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಎರಡನ್ನೂ ಹುಡುಕುವ ಪ್ರಯತ್ನ ಮಾಡಿರುವ ಸಿನಿಮಾ ಇದು. 2015 ರಿಂದ 2019ರ ನಡುವೆ ಹುಲಿಯೂರು ದುರ್ಗ ಸುತ್ತಮುತ್ತ ಹಲವಾರು ಮಕ್ಕಳು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪುವ ನೈಜ ಘಟನೆಯನ್ನು ಇಟ್ಟುಕೊಂಡು ತಯಾರಾದ ಹಾರರ್, ಥ್ರಿಲ್ಲರ್ ಚಿತ್ರ ಡಿಸೆಂಬರ್ 24december 24 movie reviewಆಗತಾನೆ ಹುಟ್ಟಿದ ಮಕ್ಕಳು ಉಸಿರಾಟದ ಸಮಸ್ಯೆಯಿಂದ ಇದ್ದಕ್ಕಿದ್ದಹಾಗೆ ಸಾವನ್ನಪ್ಪುತ್ತಿರುವ ಘಟನೆಗೆ ಸಂಬಂಧಿಸಿದಂತೆ ನಡೆಯುವ ಘಟನೆಗಳನ್ನಿಟ್ಟುಕೊಂಡು ನಾಗರಾಜ್ ಎಂಜಿ ಗೌಡ ಅವರು ಡಿಸೆಂಬರ್ ೨೪ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಪಕ್ಕಾ ಥ್ರಿಲ್ಲರ್ ಜಾನರ್ನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ನಾಯಕ ಅಜಯ್(ಅಪ್ಪು ಬಡಿಗೇರ್) ತನ್ನ ಅಕ್ಕನ ಮಗು ಹುಟ್ಟಿದ ಕೂಡಲೇ ಉಸಿರಾಟ ನಿಲ್ಲಿಸಿದ ಘಟನೆಯಿಂದ ವಿಚಲಿತನಾದಾಗ ಆತನ ಸ್ನೇಹಿತರೆಲ್ಲ ದೈರ್ಯ ತುಂಬುತ್ತಾರೆ. ಅವರೆಲ್ಲ ಮೆಡಿಕಲ್ ಓದುತ್ತಿರುವ ಗೆಳೆಯರು. ಹೇಗಾದರೂ ಮಾಡಿ ಈ ಸಮಸ್ಯೆಗೆ ಒಂದು ಪರಿಹಾರ ಕಂಡುಹಿಡಿಯಬೇಕೆಂದು ಸಾಕಷ್ಟು ಸರ್ಚ್ ಮಾಡಿದಾಗ ಉಡದ ಮೊಟ್ಟೆ, ಅದರಲ್ಲೂ ಅದು ಕಾವು ಕೊಟ್ಟಿರುವ ಮೊಟ್ಟೆಯಿಂದ ಈ ಸಮಸ್ಯೆಗೆ ಔಷಧವನ್ನು ತಯಾರಿಸಬಹುದೆಂದು ತಿಳಿಯುತ್ತದೆ. ಅದನ್ನು ನಂಬಿದ ಈ ಎಂಟು ಜನ ವಿದ್ಯಾರ್ಥಿಗಳು ಉಡದ ಮೊಟ್ಟೆಯನ್ನರಸಿಕೊಂಡು ಕಾಡಿಗೆ ಬರುತ್ತಾರೆ.december 24 kannada movie trailer

ಇಲ್ಲಿ ‘ಡಿಸೆಂಬರ್ ೨೪’ ಉಡ ತಾನಿಟ್ಟ ಮೊಟ್ಟೆಗೆ ಕಾವು ಕೊಡುವ ದಿನ. ಅದೇ ಚಿತ್ರದ ಶೀರ್ಷಿಕೆಯಾಗಿದೆ. ಅಜಯ್, ಕಾವ್ಯ(ಭೂಮಿಕಾ ರಮೇಶ್) ಸೇರಿದಂತೆ ಗೆಳೆಯರೆಲ್ಲ ಒಂದು ದಟ್ಟ ಕಾಡಿಗೆ ಬಂದು ಅಲ್ಲಿ ಮಾದಕ ವಸ್ತುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದ ಗ್ಯಾಂಗ್ ಲೀಡರ್(ಅನಿಲ್ ಗೌಡ್ರು) ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಆ ಗ್ಯಾಂಗ್ನೊಂದಿಗೆ ಹೊಡೆದಾಟ ನಡೆಸಿ ಹೇಗೋ ತಪ್ಪಿಸಿಕೊಂಡು ಬಂದ ಈ ಸ್ನೇಹಿತರಿಗೆ ತಾವು ಹುಡುಕುತ್ತಿದ್ದ ಮೊಟ್ಟೆಗಳು ಕೊನೆಗೂ ಸಿಗುತ್ತವೆ, ಮೊಟ್ಟೆ ಸಿಕ್ಕ ಖುಷಿಯಲ್ಲೆ ಆ ಕಾಡಿಂದ ಹೊರಹೋಗಬೇಕೆನ್ನುವ ಹೊತ್ತಿಗೆ ಕತ್ತಲಾಗಿ ಒಂದು ಹಾಳು ಮನೆಯೊಳಗೆ ಸೇರಿಕೊಳ್ಳುತ್ತಾರೆ.december 24 kannada movie trailer

ಆ ಮನೆ ಭೂತಬಂಗ್ಲೆ ಎಂದೇ ಆ ಭಾಗದಲ್ಲಿ ಹೆಸರುವಾಸಿಯಾಗಿರುತ್ತದೆ, ಆ ಮನೆಯೊಳಗೆ ಹೋದ ಯಾರೊಬ್ಬರೂ ಇದುವರೆಗೆ ಬದುಕಿಬಂದ ಉದಾಹರಣೆಗಳಿಲ್ಲ, ಅಂಥಾ ಸಾವಿನ ಮನೆಯೊಳಗೆ ಹೋದ ಇವರನ್ನು ಆರಂಭದಿಂದಲೂ ಗಮನಿಸುತ್ತಿದ್ದ ಸ್ಥಳೀಯ ಫಾರೆಸ್ಟ್ ಆಫೀಸರ್(ಆನಂದ್ ಪಟೇಲ್ ಹುಲಿಕಟ್ಟೆ) ಆ ವಿದ್ಯಾರ್ಥಿಗಳನ್ನು ಅಲ್ಲಿಂದ ರಕ್ಷಿಸಿ ಹೊರತರುತ್ತಾರೆ. ಆ ಮನೆಯಲ್ಲಿ ಅಂಥಾದ್ದೇನಿದೆ, ಅಲ್ಲಿ ಹೋದವರು ಯಾಕೆ ಬದುಕಿ ಬರೋದಿಲ್ಲ, ಇದಕ್ಕೆಲ್ಲ ಉತ್ತರ ಬೇಕೆಂದರೆ ನೀವೆಲ್ಲ ಒಮ್ಮೆ ಥೇಟರ್ಗೆ ಹೋಗಿ ಡಿಸೆಂಬರ್ ೨೪ ಚಿತ್ರವನ್ನು ವೀಕ್ಷಿಸಲೇಬೇಕು. ಇಲ್ಲಿ ಭಾಗ್ಯಲಕ್ಷ್ಮಿ ಖ್ಯಾತಿಯ ಭೂಮಿಕಾ ರಮೇಶ್ ನಾಯಕಿಯಾಗಿ ತನ್ನ ಮುಗ್ಧ ಅಭಿನಯದ ಮೂಲಕ ನೋಡುಗರಿಗೆ ಇಷ್ಟವಾಗುತ್ತಾರೆ.december 24 kannada movie trailer

ನಾಯಕನಾಗಿ ಅಪ್ಪು ಬಡಿಗೇರ್ ತನ್ನ ಸಹಜಾಭಿನಯದಿಂದಲೇ ಗಮನ ಸೆಳೆಯುತ್ತಾರೆ. ಉಳಿದಂತೆ ರವಿ ಕೆ.ಆರ್. ಪೇಟೆ, ಜಗದೀಶ್, ದಿವ್ಯಆಚಾರ್, ಸಾಗರ್ ಸೇರಿದಂತೆ ಎಲ್ಲರೂ ತಂತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಛಾಯಾಗ್ರಾಹಕ ವಿನಯ್ಗೌಡ ಅವರ ಕ್ಯಾಮೆರಾದಲ್ಲಿ ದಾಂಡೇಲಿ ಫಾರೆಸ್ಟ್ ಅತ್ಯದ್ಭುತವಾಗಿ ಸೆರೆಯಾಗಿದೆ. ಫ್ರೆಂಡ್ಷಿಪ್ಗೆ ಹೆಚ್ಚು ಪ್ರಾಮುಖ್ಯತೆ ಇರುವ ಕಥೆ ಇದಾಗಿದ್ದು, ಇದೇ ಕಾರಣಕ್ಕೆ ಚಿತ್ರ ನೋಡುಗರಿಗೂ ಇಷ್ಟವಾಗುತ್ತದೆ.december 24 kannada movie trailer

ಪ್ರವೀಣ್ ನಿಕೇತನ್ ಹಾಗೂ ವಿಶಾಲ್ ಆಲಾಪ್ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಒಮ್ಮೆ ಕೇಳಲು ಅಡ್ಡಿಯೇನಿಲ್ಲ, ಹಿನ್ನೆಲೆ ಸಂಗೀತ ಇನ್ನಷ್ಟು ಪರಿಣಾಮಕಾರಿಯಾಗಿರಬೇಕಿತ್ತು. ನಿರ್ದೇಶಕ ನಾಗರಾಜ್ ಎಂಜಿ. ಗೌಡ ಅವರ ಮೊದಲ ಪ್ರಯತ್ನ ಎಂಬ ಕಾರಣಕ್ಕೆ, ಮೊದಲ ಚಿತ್ರದಲ್ಲೇ ಹೊಸತನದ ಕಥೆ ಹೇಳಿರುವ ಶೈಲಿಯನ್ನು ಮೆಚ್ಚಬೇಕು, ಇನ್ನು ಈ ಚಿತ್ರಕ್ಕೆ ರಘು ಎಸ್, ಮಂಜು ಡಿ.ಟಿ, ಸಿದ್ದಮ್ಮ ಕಂಬಾರ್, ಮಹಂತೇಶ್ ನೀಲಪ್ಪ ಚೌಹಾಣ್ ಹಾಗೂ ವಿ.ಬೆಟ್ಟೇಗೌಡ ಇವರೆಲ್ಲ ಸೇರಿ ಬಂಡವಾಳ ಹಾಕಿದ್ದು, ಇವರೆಲ್ಲರೂ ರೈತರೆನ್ನುವುದು ಇಲ್ಲಿ ವಿಶೇಷ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…