“ದೀಪು ಗೆಳೆಯರ ಬಳಗ” ಸ್ಟೀಫನ್ ಪ್ರಯೋಗ್ ಅವರ ನೂತನ ಪ್ರಯೋಗ.

deepu geleyara balaga

ಸ್ಟೀಫನ್ ಪ್ರಯೋಗ್ ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜಕರಾಗಿ ಪರಿಚಿತ. “ದೀಪು ಗೆಳೆಯರ ಬಳಗ” ಎಂಬ ಕಿರುಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ಟೀಫನ್ ಪ್ರಯೋಗ್ ನಿರ್ದೇಶಕನ ಪಟ್ಟ ಅಲಂಕರಿಸಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.deepu geleyara balaga

ನಾನು ಸಂಗೀತ ವಿಭಾಗದಲ್ಲಿ ಹಲವು ಸಿನಿಮಾಗಳಿಗೆ ಕಾರ್ಯ ನಿರ್ವಹಿಸಿದ್ದೇನೆ. “ಪ್ಯಾರಿಸ್ ಪ್ರಣಯ” ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ರಾಜ್ಯ ಪ್ರಶಸ್ತಿ ಸಹ ಬಂದಿದೆ. ತಮಿಳಿನಲ್ಲೂ ಕೆಲವು ಚಿತ್ರಗಳಿಗೆ ಸಂಗೀತ ನೀಡಿದ್ದೀನಿ.
ಕೊರೋನ ಸಮಯದಲ್ಲಿ ನನಗೆ ನಿರ್ದೇಶನದತ್ತ ಒಲವಾಯಿತು. ಆದರೆ ನನಗೆ ನಿರ್ದೇಶನದ ಬಗ್ಗೆ ಹೆಚ್ಚು ತಿಳಿದಿಲ್ಲ. ಹಾಗಾಗಿ ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ಆನ್ ಲೈನ್ ಮೂಲಕ ನಿರ್ದೇಶನದ ಕಾರ್ಯವೈಖರಿ ಕಲಿತೆ. ಅತ್ಯುತ್ತಮ ಕೋರ್ಸ್ ಅದು. ನನಗೆ ತುಂಬಾ ಉಪಕಾರವಾಯಿತು. ಆನಂತರ ನಾಲ್ಕೈದು ಕಥೆ ಸಿದ್ದಮಾಡಿಕೊಂಡು ನನ್ನ ಆಪ್ತ ಸ್ನೇಹಿತರ ಬಳಿ‌ ಚರ್ಚಿಸಿದೆ. ಎಲ್ಲರೂ ಈ ಕಥೆಯನ್ನೇ ಆಯ್ಕೆ ಮಾಡಿದರು. ರಂಗಭೂಮಿಯ ಸಾಕಷ್ಟು ಕಲಾವಿದರು “ದೀಪು ಗೆಳೆಯರ ಬಳಗ”ದಲ್ಲಿ ಅಭಿನಯಿಸಿದ್ದಾರೆ. ನಾನೇ ಸಂಗೀತವನ್ನು ನೀಡಿದ್ದೀನಿ. ಇದರಲ್ಲಿ ಬರುವ ಕೆಲವು ಸನ್ನಿವೇಶಗಳನ್ನು ನಾನು, ನಿಜಜೀವನದಲ್ಲಿ ಅನುಭವಿಸಿದ್ದೀನಿ ಅಂದರೆ ತಪ್ಪಾಗಲಾರದು. ಹಿರಿತೆರೆಯಲ್ಲೂ ಎರಡು ಚಿತ್ರಗಳನ್ನು ನಿರ್ದೇಶಿಸಲಿದ್ದೇನೆ.‌ ಸದ್ಯದಲ್ಲೇ ಆ ಕುರಿತು ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದರು ನಿರ್ದೇಶಕ ಸ್ಟೀಫನ್ ಪ್ರಯೋಗ್.deepu geleyara balaga

ದೀಪು ಪಾತ್ರ ಮಾಡಿರುವ ರೂಪಾಂತರ ತಂಡದ ವರುಣ್ ಕುಮಾರ್ ಅವಕಾಶ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ತಿಳಿಸಿದರು. ಕಿರುಚಿತ್ರದಲ್ಲಿ ಅಭಿನಯಿಸಿರುವ ಪ್ರಶಾಂತ್, ಭರತ್ ಕುಮಾರ್, ಉಮಾ ಹಾಗೂ ಸತೀಶ್ ಚೌಹಾನ್ ತಮ್ಮ ಪಾತ್ರ ಹಾಗೂ ಕಿರುಚಿತ್ರದ ಬಗ್ಗೆ ಮಾಹಿತಿ ನೀಡಿದರು.deepu geleyara balaga

ಸ್ಟೀಫನ್ ಪ್ರಯೋಗ್ ಕಥೆ, ಚಿತ್ರಕಥೆ ಬರೆದು, ಸಂಗೀತ ನೀಡಿ ನಿರ್ದೇಶಿಸಿರುವ ಈ ಕಿರುಚಿತ್ರಕ್ಕೆ ಗಂಗಾಧರ್ ತಲಕಾಡ್ ಹಾಗೂ ಪ್ರಶಾಂತ್ ತಲಕಾಡ್ ಅವರ ಛಾಯಾಗ್ರಹಣವಿದೆ.
ವರುಣ್ ಕುಮಾರ್, ವಿಸ್ಮಿತ್ ರಾಜ್, ಪ್ರಾಶಾಂತ್, ಉಮಾ, ಸತೀಶ್ ಚೌಹಾನ್, ಭರತ್, ಕೆ.ಎಸ್.ಡಿ.ಎಲ್ ಚಂದ್ರು, ಭರತ್ ಕುಮಾರ್, ವೆಂಕಟಾಚಲ, ರಾಜಕುಮಾರ್ ಅಸ್ಕಿ ಹಾಗೂ ದೇಸಿ ಮೋಹನ್ ಮುಂತಾದವರು ಅಭಿನಯಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…