ಶಿವರಾತ್ರಿಯ ಸಂಭ್ರಮ ಹೆಚ್ಚಿಸಿದ ಹಾಡು. ಅಶ್ವಿನಿ ಬಸವರಾಜು ಕಂಠದಲ್ಲಿ ದೇವ ದೇವ ಮಹದೇವ

Deva Deva Mahadeva in Ashwini Basavaraju Kantha

ಡಾ. ವಿ. ನಾಗೇಂದ್ರ ಪ್ರಸಾದ್ ಮೆಚ್ಚಿದ ಹಾಡು

ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ, ಬೆಂಗಳೂರಿನ ಸ್ಟ್ರಾಂಗೆಸ್ಟ್ ವುಮೆನ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದವರು, ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿ, ಮೆಡಲ್ ಗಳನ್ನು ಪಡೆದಿದ್ದವರು ಅಶ್ವಿನಿ ಬಸವರಾಜು. ಅಥ್ಲೆಟಿಕ್ ನಲ್ಲಿ ಸಾಧನೆಯ ಮೆಟ್ಟಿಲೇರುವ ಹೊತ್ತಿಗೆ ಅಶ್ವಿನಿ ಮನಸ್ಸಿನಲ್ಲಿ ತಾನು ಹಾಡುಗಾರ್ತಿಯಾಗಬೇಕು ಎನ್ನುವ ಬಯಕೆ ಚಿಗುರೊಡೆದಿತ್ತು. ಅಜ್ಜಿ ಯಶೋಧಾ ಜೊತೆ ಪೂಜಾ ಕಾರ್ಯಕ್ರಮಗಳಲ್ಲಿ ಕೂತು ಸಾಯಿಬಾಬಾ ಭಕ್ತಿಗೀತೆಗಳನ್ನು ಹಾಡುತ್ತಿದ್ದರು. ಕ್ರಮೇಣ ಸಂಗೀತದ ಗುಂಗು ಹತ್ತಿತ್ತು.Deva Deva Mahadeva in Ashwini Basavaraju Kantha

ತಮ್ಮದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿ ‘ಮರೆಯುವೆನು ನಿನಗಾಗಿ’ ಎನ್ನುವ ಆಲ್ಬಂ ಸಾಂಗ್ ಅನ್ನು ಹೊರತಂದಿದ್ದರು. ನಂತರ ಮತ್ತೊಂದು ಫೀಲಿಂಗ್ ಸಾಂಗ್ ಕೂಡಾ ಲೋಕಾರ್ಪಣೆಗೊಂಡಿತು. ಇವೆಲ್ಲದರ ಜೊತೆಗೆ ಸಂಗೀತ ಗುರು ಚಂದ್ರಕಾಂತ್ ಅವರ ಬಳಿ ಹಿಂದೂಸ್ತಾನಿ ಸಂಗೀತ ಕಲಿಯುತ್ತಿದ್ದ ಅಶ್ವಿನಿ ಬಸವರಾಜು ಈ ಬಾರಿ ಹೊಸದೊಂದು ಪ್ರಯತ್ನ ಮಾಡಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದರು. ಈ ನಿಟ್ಟಿನಲ್ಲಿ ಶುರುವಾಗಿದ್ದು ‘ದೇವ ದೇವ ಮಹದೇವ’ ಹಾಡು. ಜನಪದ ಶೈಲಿಯ ಈ ಹಾಡಿಗೆ ಮಯೂರ್ ಅಂಬೆಕಲ್ಲು ಸಂಗೀತ, ಮಯೂರ್ ನೈಗ ಸಾಹಿತ್ಯವಿದೆ. ಮಹದೇಶ್ವರ ಬೆಟ್ಟದಲ್ಲಿ ಈ ವಿಡಿಯೋ ಆಲ್ಬಂ ಅನ್ನು ಚಿತ್ರೀಕರಿಸಲಾಗಿದೆ. ಶಿವರಾತ್ರಿಯ ಈ ಸುಸಂದರ್ಭದಲ್ಲಿ ದೇವ ದೇವ ಮಹದೇವ ಹಾಡನ್ನು ಖ್ಯಾತ ಚಿತ್ರಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದ್ದಾರೆ.Deva Deva Mahadeva in Ashwini Basavaraju Kantha

‘ಭಕ್ತಿಗೀತೆ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ದೇವ ದೇವ ಮಹದೇವ ಹಾಡಿನ ಮೂಲಕ ಮಹದೇಶ್ವರನ ಖಂಡಕಾವ್ಯವನ್ನು, ಮಹಾಪುರುಷನ ಇತಿಹಾಸವನ್ನು ಒಂದೇ ಹಿಡಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಅಶ್ವಿನಿ ಅವರ ದನಿಯನ್ನು ಕೇಳುತ್ತಿದ್ದರೆ ಅವರಿಗೆ ಉತ್ತಮ ಭವಿಷ್ಯವಿದೆ ಅನ್ನೋದು ಗೊತ್ತಾಗುತ್ತದೆ’ ಎಂದಿದ್ದಾರೆ ನಾಗೇಂದ್ರ ಪ್ರಸಾದ್.Deva Deva Mahadeva in Ashwini Basavaraju Kantha

ಬೆಂಗಳೂರಿನ ರಾಮಸಂದ್ರ ಗ್ರಾಮದಲ್ಲಿ ಹುಟ್ಟಿ ಬೆಳೆದು, ಸೇಂಟ್ ಫಿಲೋಮಿನಾ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿ, ಶೇಷಾದ್ರಿಪುರಂ ವಿದ್ಯಾ ಸಂಸ್ಥೆಯಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರಸ್ತುತ ಹೆಸರಾಂತ ಐಟಿ ಕಂಪನಿಯಲ್ಲಿ ಉದ್ಯೋಗಕ್ಕಿರುವ ಅಶ್ವಿನಿ ಬಸವರಾಜು ಅವರಿಗೆ ಗಾಯಕಿಯಾಗಿಯೇ ಪೂರ್ಣ ಪ್ರಮಾಣದಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಬಯಕೆಯಿದೆ. ಬಹುಶಃ ದೇವ ದೇವ ಮಹದೇವ ಆಲ್ಬಂ ಸಾಂಗ್ ಇವರ ಅಪೇಕ್ಷೆಯನ್ನು ಈಡೇರಿಸಬಹುದು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…