ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

dhamaka kannada movie trailer

ಪ್ರತಿ ಚಿತ್ರರಸಿಕರು ಸಿನಿಮಾ ನೋಡುವ ಪ್ರಮುಖ ಉದ್ದೇಶ ಮನರಂಜನೆ. ಅದರಲ್ಲಿಯೂ ಹಾಸ್ಯ ಸನ್ನಿವೇಶಗಳಿಗೆ ಮನಸೋಲದವರೇ ಇಲ್ಲ. ಹೀಗಿರುವಾಗ ಒಂದಿಡೀ ಚಿತ್ರವೇ ಕಾಮಿಡಿಮಯವಾಗಿದ್ದರೆ ಅದರತ್ತ ಪ್ರೇಕ್ಷಕರು ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಈ ಕಾರಣದಿಂದಲೇ ಅಗಾಧ ನಿರೀಕ್ಷೆ ಮೂಡಿಸಿರುವ ಧಮಾಕ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ.dhamaka kannada movie trailer

ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಗಮನಸೆಳೆದಿರುವ ಧಮಾಕ ಟ್ರೇಲರ್ ನೋಡುಗರಿಗೆ ಕಚಗುಳಿ ಇಡ್ತಿದೆ. ಮಧ್ಯಮ ವರ್ಗದ ಕುಟುಂಬದಲ್ಲಿ ನಡೆಯುವ ಕಥೆಯ ಎಳೆಯನ್ನು ಒಳಗೊಂಡ ಟ್ರೇಲರ್ ರಿವೀಲ್ ಆಗಿದ್ದು, ಹಾಸ್ಯನಟ ಚಿಕ್ಕಣ್ಣ ನಿರೂಪಣೆಯಿಂದ ಶುರುವಾಗ ಟ್ರೇಲರ್ ಝಲಕ್ ಭರಪೂರ ನಗುವಿನ ಮ್ಯಾಜಿಕ್ಕನ್ನು ನಿರ್ದೇಶಕ ಲಕ್ಷ್ಮಿ ರಮೇಶ್ ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ.dhamaka kannada movie trailer

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆ ನಾಯಕನಾಗಿ ನೋಡುಗರನ್ನು ನಕ್ಕು ನಲಿಸ್ತಾರೆ. ಇವರಿಗೆ ಜೋಡಿಯಾಗಿ ನಯನಾ ಮಿಂಚಿದ್ದಾರೆ. ಮನರಂಜನೆಯೇ ಪ್ರಧಾನವಾಗಿರುವ ಕಥೆ, ಅದಕ್ಕೆ ಪೂರಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ನಗೆಯುಕ್ಕಿಸುವಂತೆ ಪೋಣಿಸಿರುವ ಹಾಸ್ಯ ಸನ್ನಿವೇಶಗಳೊಂದಿಗೆ ಧಮಾಕ ಟ್ರೇಲರ್ ನೋಡುಗರನ್ನು ಆವರಿಸಿಕೊಳ್ಳುತ್ತಿದೆ. ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮಿಮಿಕ್ರಿ ಗೋಪಾಲ್, ಅರುಣಾ ಬಾಲರಾಜ್ ಮುಂತಾದ ಕಲಾಬಳಗ ಚಿತ್ರದಲ್ಲಿದೆ.dhamaka kannada movie trailer

ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಧಮಾಕ ಚಿತ್ರವನ್ನು ಎಸ್ ಆರ್ ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ನಡಿ ಸುನೀಲ್ ಎಸ್ ರಾಜ್ ಮತ್ತು ಅನ್ನಪೂರ್ಣ ಪಾಟೀಲ ನಿರ್ಮಾಣ ಮಾಡಿದ್ದು, ಒಂದಷ್ಟು ನಿರ್ದೇಶಕರ ಗರಡಿಯಲ್ಲಿ ಪಳಗಿರುವ ಲಕ್ಷ್ಮೀ ರಮೇಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಹಾಲೇಶ್ ಎಸ್ ಛಾಯಾಗ್ರಹಣ, ವಿಕಾಸ್ ವಸಿಷ್ಠ ಸಂಗೀತ, ರಘು ಆರ್ ಜೆ ನೃತ್ಯ ನಿರ್ದೇಶನ ಮತ್ತು ವಿನಯ್ ಕೂರ್ಗ್ ಸಂಕಲನ ಸಿನಿಮಾಕ್ಕಿದೆ‌. ಟ್ರೇಲರ್ ಬಿಡುಗಡೆ ಮಾಡಿರುವ ಚಿತ್ರತಂಡ ಶೀಘ್ರದಲ್ಲಿ ತೆರೆಗೆ ಬರುವ ತಯಾರಿಯಲ್ಲಿದೆ.dhamaka kannada movie trailer

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…