‘ಧಮಾಕ’ ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್…ಇದು ಸಿದ್ದು ಮೂಲಿಮನಿ-ಪ್ರಿಯಾ ಆಚಾರ್ ಡ್ಯಾನ್ಸಿಂಗ್ ನಂಬರ್

Dhamaka | Naanu Hogoku Modlu Video Song

ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಹಾಸ್ಯನಟ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ನಾಯಕರಾಗಿ ನಟಿಸುತ್ತಿರುವ ಧಮಾಕ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ತುಕಾಲಿ ಸಿಂಗಿಂಗ್ ಗೆ ಬೇಜಾನ್ ರೆಸ್ಪಾನ್ಸ್ ಸಿಕ್ಕಿತ್ತು, ಇದೀಗ ಸಿದ್ದು ಮೂಲಿಮನಿ ಹಾಗೂ ಪ್ರಿಯಾ ಆಚಾರ್ ಭರ್ಜರಿ ಸ್ಟೆಪ್ಸ್ ಹಾಕಿರುವ ನಾನು ಹೋಗೋಕು ಮೊದ್ಲು ಎಂಬ ಹಾಡು ಬಿಡುಗಡೆಯಾಗಿದೆ.Dhamaka | Naanu Hogoku Modlu Video Song

ನಿರ್ದೇಶಕ ಲಕ್ಷ್ಮೀ ರಮೇಶ್ ಸಾಹಿತ್ಯದ ಮೆಲೋಡಿ ಹಾಡಿಗೆ ಕಂಚಿನ ಕಂಠದ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾನಸ ಹೊಳ್ಳ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ. ಅದ್ಭುತ ಸಾಹಿತ್ಯ, ಸಂಗೀತ, ಕೊರಿಯೋಗ್ರಾಫಿ ಇರುವ ಹಾಡಿಗೆ ಸಿನಿರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.Dhamaka | Naanu Hogoku Modlu Video Song

ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮೀ ರಮೇಶ್ ಧಮಾಕಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಕಾಮಿಡಿ ಕಿಲಾಡಿ ಶೋ ಮೂಲಕವೇ ಗುರುತಿಸಿಕೊಂಡಿರುವ ನಯನಾ ಶರತ್ ‘ಧಮಾಕ’ ಸಿನಿಮಾದಲ್ಲಿ ಶಿವರಾಜ್ ಕೆ.ಆರ್ ಪೇಟೆ ಜೊತೆ ನಟಿಸ್ತಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಪ್ರಕಾಶ್‌ ತುಂಬಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ.Dhamaka | Naanu Hogoku Modlu Video Song

ಎಸ್‌ಆರ್ ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಹಾಲೇಶ್ ಸಿನಿಮೆಟೊಗ್ರಫಿ, ವಿನಯ್ ಕೂರ್ಗ್ ಸಂಕಲನ ಧಮಾಕಾ ಸಿನಿಮಾದಲ್ಲಿದೆ.Dhamaka | Naanu Hogoku Modlu Video Song

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…