ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”.

dhanvit-starrer-nanna-huduki-kodi-movie-muhurta

ಕನಕಪುರದ ಧನ್ವಿತ್ ಈ ಚಿತ್ರದ ನಾಯಕ.dhanvit-starrer-nanna-huduki-kodi-movie-muhurta

ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು. ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಆರಂಭ ಫಲಕ ತೋರಿದರು. ನಿರ್ದೇಶಕ ಮಹೇಶ್ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.
ಕನಕಪುರದ ಧನ್ವಿತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ, ಬಂಡವಾಳವನ್ನು ಹೂಡುತ್ತಿದ್ದಾರೆ.dhanvit-starrer-nanna-huduki-kodi-movie-muhurta

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಚಿತ್ರದ ನಾಯಕ ಹಾಗೂ ನಿರ್ಮಾಪಕ ಧನ್ವಿತ್ ಅವರ ಹುಟ್ಟುಹಬ್ಬದಂದು ಚಿತ್ರಕ್ಕೆ ಚಾಲನೆ ನೀಡಿದ್ದೀವಿ. ಇಂದು ಮುಹೂರ್ತ ಸಮಾರಂಭದೊಂದಿಗೆ ಧನ್ವಿತ್ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ನಿರ್ಮಾಣ ಸಂಸ್ಥೆಯ ಉದ್ಘಾಟನೆ ಸಹ ನೆರವೇರಿದೆ.dhanvit-starrer-nanna-huduki-kodi-movie-muhurta
ಮುಂದಿನವಾರದಿಂದ ಚಿತ್ರೀಕರಣ ಆರಂಭಿಸುತ್ತೇವೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ಮೀನಾಕ್ಷಿ ಜೈಸ್ವಾಲ್ ಹಾಗೂ ಸಾಯಿ ನಯನ ಈ ಚಿತ್ರದ ನಾಯಕಿಯರು. ಪೋಷಕಪಾತ್ರಗಳಲ್ಲಿ ಕನ್ನಡದ ಪ್ರಸಿದ್ದ ಕಲಾವಿದರು ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ಚಿತ್ರದ ಬಗ್ಗೆ ಮಾಹಿತಿ ನೀಡಿದರು.dhanvit-starrer-nanna-huduki-kodi-movie-muhurta

ನಾನು ಮೂಲತಃ ಕನಕಪುರದವನು. ಹಿಂದೆ ವೇಮಗಲ್ ಜಗನ್ನಾಥ ರಾವ್ ಅವರ ನಿರ್ದೇಶನದ “ಆವರ್ತ” ಚಿತ್ರದಲ್ಲಿ ಒಂದು ಪಾತ್ರ‌ ಮಾಡಿದ್ದೆ‌. ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಧನ್ವಿತ್ ಫಿಲಂ ಫ್ಯಾಕ್ಟರಿ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಾನೇ ನಿರ್ಮಾಣ ಮಾಡುತ್ತಿದ್ದೇನೆ. ವಾಸುಕಿ ಭುವನ್ ಅವರು ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ನಿರ್ದೇಶಕರು ಪೂರ್ತಿ ಕಥೆ ಹೇಳಿಲ್ಲ. ಒಂದೆಳೆ ಹೇಳಿದ್ದಾರೆ. ತುಂಬಾ ಚೆನ್ನಾಗಿದೆ ಎಂದರು ನಾಯಕ ಹಾಗೂ ನಿರ್ಮಾಪಕ ಧನ್ವಿತ್.dhanvit-starrer-nanna-huduki-kodi-movie-muhurta

ನಾಯಕಿಯರಾದ ಮೀನಾಕ್ಷಿ ಜೈಸ್ವಾಲ್, ಸಾಯಿ ನಯನ ಹಾಗೂ ಛಾಯಾಗ್ರಾಹಕ ಸೂರ್ಯಕಾಂತ್ “ನನ್ನ ಹುಡುಕಿ ಕೊಡಿ” ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…