ಡಿಸೆಂಬರ್ 2ರಂದು ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

dharani mandala madhyadolage release december 2

ಭರವಸೆಯ ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಪ್ರೇಕ್ಷಕರೆದುರು ಬರಲು ಡೇಟ್ ಫಿಕ್ಸ್ ಆಗಿದೆ. ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಡಿಸೆಂಬರ್ 2ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.dharani mandala madhyadolage release december 2

ಟೈಟಲ್ ಮೂಲಕವೇ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಶ್ರೀಧರ್ ಶಿಕಾರಿಪುರ ಅವರ ಮೊದಲ ಸಿನಿಮಾ ಕನಸು. ಈ ಚಿತ್ರದ ಮೂಲಕ ಶ್ರೀಧರ್ ಶಿಕಾರಿಪುರ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಅವರೊಂದಿಗೆ ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಶ್ರೀಧರ್ ಅವರಿಗಿದೆ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರ ಒಳಗೊಂಡ ಈ ಸಿನಿಮಾ ಪ್ರೇಕ್ಷಕರಿಗೆ ಥ್ರಿಲ್ ನೀಡುವುದರ ಜೊತೆಗೆ ಪ್ರೀತಿ, ಸೆಂಟಿಮೆಂಟ್ ಎಳೆಗಳನ್ನು ಉಣಬಡಿಸಲಿದೆ.dharani mandala madhyadolage release december 2

ಬಾಕ್ಸಿಂಗ್ ನಲ್ಲಿ ಆಸಕ್ತಿ ಇರುವ ಹುಡುಗನ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಬಾಕ್ಸಿಂಗ್ ಕನಸಿನ ಬೆನ್ನತ್ತಿದ ಹುಡುಗನ ಜೀವನದಲ್ಲಿ ನಡೆಯುವ ಘಟನೆ ಬದುಕಿಗೆ ಯಾವೆಲ್ಲ ತಿರುವು ನೀಡುತ್ತೆ ಅನ್ನೋದು ಚಿತ್ರದ ಒನ್ ಲೈನ್ ಕಹಾನಿ. ಚಿತ್ರದಲ್ಲಿ ಗುಳ್ಟು ಖ್ಯಾತಿಯ ನವೀನ್ ಶಂಕರ್, ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ.dharani mandala madhyadolage release december 2

ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ವೀರೇಂದ್ರ ಕಾಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ. ವಿಜಯ್ ಪ್ರಕಾಶ್, ಶರಣ್ ಹಾಡಿರುವ ಹಾಡುಗಳು ಸೂಪರ್ ಹಿಟ್ ಆಗಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ಡಿಸೆಂಬರ್ 2ರಂದು ಪ್ರೇಕ್ಷಕರ ಮನಗೆಲ್ಲಲು ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.dharani mandala madhyadolage release december 2

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…