ವಿಜ್ಘಾನ ಮತ್ತು ಪುರಾಣ ಮಿಶ್ರಣದ ’ಧ್ರುವ 369’

dhruva 369 kannada new movie

ವಿನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್‌ಭಟ್ ಕ್ಲಾಪ್ ಮಾಡಿದರೆ, ‘ಟಕ್ಕರ್’ ಖ್ಯಾತಿಯ ನಟ ಮನೋಜ್‌ಕುಮಾರ್ ಕ್ಯಾಮಾರ ಆನ್ ಮಾಡಿದರು.dhruva 369 kannada new movie

ಅಚಿಂತ್ಯ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್‌ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ರಾಘವೇಂದ್ರರಾಜ್‌ಕುಮಾರ್ ಶುಭ ಸಂದೇಶವನ್ನು ವಿಡಿಯೋ ಮೂಲಕ ರವಾನಿಸಿದ್ದರು.dhruva 369 kannada new movie

ವಿಜ್ಘಾನ ಮತ್ತು ಪುರಾಣ ಮಿಶ್ರಣಗೊಂಡ ಅಂಶಗಳು ಇರಲಿದೆ. ಭೂಮಿಯಿಂದ ತುಂಬಾ ಚೆನ್ನಾಗಿ ಪರಿಪೂರ್ಣವಾಗಿ ಕಾಣಿಸುವುದು ಧ್ರುವ ನಕ್ಷತ್ರ. 369 ಸಂಖ್ಯೆ ಎಂಬುದು ಸಾರ್ವತ್ರಿಕವಾಗಿದೆ. ಅದಕ್ಕೆ ಆದಂತ ಆಯಾಮವಿದೆ. ಮತ್ತೋಂದು ಕಡೆ ಮ್ಯಾಜಿಕ್ ನಂಬರ್ ಅಂತಲೂ ಕರೆಯಬಹುದು. ಕಥೆಯಲ್ಲಿ ಇವರೆಡು ಸೇರಿದರೆ ಏನು ಆಗುತ್ತದೆ ಎಂಬುದನ್ನು ಹೇಳಲಾಗುತ್ತಿದೆ. ಸಾಧನೆ ಮಾಡಬೇಕು ಅಂದುಕೊಂಡರೆ ಏನು ಬೇಕಾದರೂ ಮಾಡಬಹುದು. ದೂರದ ಲೋಕಕ್ಕೆ ಹೋಗಿ ಹನುಮಂತ ಹಣ್ಣು ತೆಗೆದುಕೊಂಡು ಬಂದಿದ್ದ ಅಂತ ಹೇಳಲಾಗಿದೆ. ಅದೇ ರೀತಿ ಚಿತ್ರವು ಫ್ಯಾಂಟಸಿ ತರಹ ಸಾಗುತ್ತದೆ. ಪುರಾತನ ಕಾಲದ ಕಥೆಗಳೆ ನಿರ್ದೇಶಕರಿಗೆ ಕಥೆ ಬರೆಯಲು ಪ್ರೇರಣೆಯಾಗಿದೆ. ಸನ್ನಿವೇಶಕ್ಕೆ ಅನುಗುಣವಾಗಿ ಸಂಸ್ಕ್ರತ ಶ್ಲೋಕಗಳು ಬರಲಿದೆ.dhruva 369 kannada new movie

ಪ್ರಥಮಬಾರಿ ರಾಜ್ಯಪಾಲರಾಗಿ ರಾಘವೇಂದ್ರರಾಜ್‌ಕುಮಾರ್ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ತಾರಗಣದಲ್ಲಿ ರಮೇಶ್‌ಭಟ್, ಪ್ರತಿಭಾ, ಅತೀಶ್.ಎಸ್.ಶೆಟ್ಟಿ, ಪ್ರೇಮ್ ಕನ್ನಡರಾಜು, ಅರವಿಂದ್‌ಸಾಗರ್, ರೋಹನ್ ಮೂಡಬಿದ್ರೆ, ದೀಪಕ್‌ಶೆಟ್ಟಿ, ಕೆ.ಸುಬ್ಬಣ್ಣಭಟ್, ಚಂದನ, ರಮ್ಯಾ, ಚಂದ್ರಿಕಾ, ಭಾಸ್ಕರ್‌ಮಣಿಪಾಲ್ ನಟಿಸುತ್ತಿದ್ದಾರೆ.

ಮೂರು ಹಾಡುಗಳಿಗೆ ಸತೀಶ್‌ಬಾಬು ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ಹರ್ಷಪದ್ಯಾಣ ಚಿತ್ರಕ್ಕಿದೆ. ಶೇಕಡ ನಲವತ್ತರಷ್ಟು ಸಿಜಿ ಕೆಲಸ ಇರಲಿದೆ. ಬೆಂಗಳೂರು, ಮಂಗಳೂರು, ಉಡುಪಿ, ಮುಡೆಶ್ವರ, ಕೋಲಾರ, ಚಿಕ್ಕಬಳ್ಳಾಪುರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…