ನಿರ್ದೇಶನ ನಿರ್ಮಾಣವಾಯ್ತು ನಟನೆಗೂ ಸೈ ಎನ್ನುತ್ತಿದ್ದಾರೆ ನಿರ್ದೇಶಕ ಸತ್ಯ ಪ್ರಕಾಶ್

Director Satya Prakash has directed, produced and acted

‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಸಿನಿಮಾ ಖ್ಯಾತಿಯ ಪ್ರತಿಭಾವಂತ ನಿರ್ದೇಶಕ ಸತ್ಯ ಪ್ರಕಾಶ್. ಎರಡು ಅಪರೂಪದ ಸಿನಿಮಾಗಳ ಮೂಲಕ ಜನಮೆಚ್ಚುಗೆ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವ ಸತ್ಯ ಪ್ರಕಾಶ್ ಹೊಸದೊಂದು ಸಾಹಸಕ್ಕೆ ಹೊರಳಿದ್ದಾರೆ. ನಿರ್ದೇಶಕ, ನಿರ್ಮಾಪಕನಾಗಿ ಯಶಸ್ವಿಯಾಗಿರುವ ಸತ್ಯ ಪ್ರಕಾಶ್ ನಟನಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.Director Satya Prakash has directed, produced and acted

ಈ ನಡುವೆ ನಿರ್ದೇಶಕರು ನಟನಾಗುತ್ತಿರೋದು ಕಾಮನ್ ವಿಚಾರವಾಗಿದೆ. ಜೊತೆಗೆ ತಾವೇ ಬರೆದ ಕಥೆಗೆ ನಿರ್ದೇಶನ ಮಾಡಿ ನಿರ್ಮಾಣ ಮಾಡಿ ನಟನಾಗುವುದು ಒಂದು ರೀತಿ ಟ್ರೆಂಡ್ ಆಗಿದೆ. ಅಂತಹದ್ದೇ ಒಂದು ಪ್ರಯತ್ನಕ್ಕೆ ಸತ್ಯ ಪ್ರಕಾಶ್ ಕೈ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸತ್ಯ ಪ್ರಕಾಶ್ ಇದೊಂದು ಹೊಸ ರೀತಿಯ ಕಥೆ. ಒಬ್ಬೊಬ್ಬರ ಜೀವನದಲ್ಲಿ ಒಂದೊಂದು ಘಟನೆ ನಡೆದಿರುತ್ತೆ. ನನ್ನ ಬದುಕಿನಲ್ಲೂ ಒಂದಷ್ಟು ಘಟನೆಗಳು ನಡೆದಿವೆ. ಅವೆಲ್ಲವನ್ನು ಆಧರಿಸಿ ಕಥೆ ಹೆಣೆದಿದ್ದೇನೆ. ಈ ಕಥೆಯಲ್ಲಿ ಒಬ್ಬ ಹೊಸ ನಾಯಕ ನನಗೆ ಕಾಣುತ್ತಿದ್ದಾನೆ ಆದ್ರಿಂದ ನಾನೇ ನಟಿಸುತ್ತಿದ್ದೇನೆ. ನಾಯಕ ನಟ ಅನ್ನೋದಕ್ಕಿಂತ ಮುಖ್ಯ ಪಾತ್ರ ಎಂದಷ್ಟೇ ಹೇಳಬಹುದು ಎನ್ನುತ್ತಾರೆ ನಿರ್ದೇಶಕ ಸತ್ಯ ಪ್ರಕಾಶ್.

Director Satya Prakash has directed, produced and actedಈ ಚಿತ್ರ ಸಾಮಾನ್ಯ ಮನುಷ್ಯನ ಬದುಕಿಗೆ ಸಂಬಂಧಿಸಿದ ಕಥೆ ಒಳಗೊಂಡಿದೆ. ಸಾಮಾನ್ಯ ವ್ಯಕ್ತಿ ಬದುಕಲ್ಲಿ ಹಾಸ್ಯ, ಎಮೋಷನ್ಸ್, ರಾಜಕೀಯ ಎಲ್ಲವೂ ಇರುತ್ತೆ ಈ ಚಿತ್ರದಲ್ಲೂ ಅವೆಲ್ಲವೂ ಇದೆ. ಕಥಾನಾಯಕನಿಗೆ ಎಲ್ಲರಿಗೂ ಒಳ್ಳೆಯದನ್ನು ಬಯಸುವ ಗುಣವಿರುತ್ತೆ ಆದ್ರೆ ಆತನ ಒಳ್ಳೆಯ ಗುಣದಿಂದ ಅವನಿಗಾಗುವ ಪ್ರಯೋಜನ ಹಾಗೂ ತೊಂದರೆಗಳೇನು ಎಂಬುದನ್ನು ಹಾಸ್ಯದ ಮೂಲಕ ಹೇಳ ಹೊರಟಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಸತ್ಯ ಪ್ರಕಾಶ್.

Director Satya Prakash has directed, produced and actedನಾನು ಯಾವಾಗಲೂ ಯೂನಿವರ್ಸಲ್ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುತ್ತೇನೆ. ನನ್ನ ಸಿನಿಮಾವನ್ನು ಎಲ್ಲಾ ವರ್ಗದ ಜನರು ನೋಡಬೇಕು ಎನ್ನುವುದು ನನ್ನ ಆಸೆ. ಈ ಚಿತ್ರದ ಕಥೆಯೂ ಹಾಗೆ ಇದೆ. ಸಿನಿಮಾ ಚಿತ್ರೀಕರಣ ಜನವರಿಯಲ್ಲಿ ಆರಂಭವಾಗಲಿದೆ .ರಾಮಾ ರಾಮಾ ರೇ ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಈ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ ಎಂದು ಮಾಹಿತಿ ನೀಡಿರುವ ಸತ್ಯ ಪ್ರಕಾಶ್ ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…