ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ…ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಅರ್ಪಿಸಿದ ಚಿತ್ರತಂಡ

ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇಷ್ಟೆಲ್ಲಾ ಯಶಸ್ಸಿಗೆ ಕಾರಣದವರಿಗೆ ಇಡೀ ಚಿತ್ರತಂಡ ಧನ್ಯವಾದ ಅರ್ಪಿಸಿದೆ.WhatsApp Image 2022 06 07 at 2.16.03 PM

ಒಡೆಯರ್ ಮೂವೀಸ್ ನಡಿ ನಿರ್ಮಾಣದ ಮಾಡಿರುವ ಮೊದಲ ಸಿನಿಮಾವಾಗಿದ್ದು, ನಾನು ನನ್ನ ಪತ್ನಿ, ಸ್ನೇಹಿತರಾದ ಹರೀಶ್ ನಾರಾ, ಸಚಿನ್ ತಪಶೆಟ್ಟಿ, ನರಸಿಂಹ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಇದು ನಿಜವಾದ ಸಿನಿಮಾ. ಇಡೀ ತಂಡ ಸೇರಿಕೊಂಡು ತುಂಬಾ ಅದ್ಭುತ ಸಿನಿಮಾ ಮಾಡಿದ್ದಾರೆ. ನಿರ್ಮಾಪಕನಾಗಿ ನನಗೂ ಇದು ಹೊಸ ಅನುಭವ. ಸಿನಿಮಾದ ವಿಶೇಷ ಅಂದ್ರೆ ಇಡೀ ಡೊಳ್ಳು ಕಲಾವಿದರು ಅಭಿನಯಿಸಿರುವ ಚಿತ್ರ ಇದಾಗಿದೆ ಎಂದು ನಿರ್ಮಾಪಕ ಪವನ್ ಒಡೆಯರ್ ಅಭಿಪ್ರಾಯ ಹಂಚಿಕೊಂಡರು.WhatsApp Image 2022 06 07 at 2.16.01 PM

ಇಂತಹ ಅವಕಾಶ ಮಾಡಿಕೊಟ್ಟಿದ್ದಕ್ಕೆ ಪವನ್ ಸರ್ ಗೆ ಧನ್ಯವಾದ. ಕಿರುಚಿತ್ರಗಳನ್ನು ನಿರ್ದೇಶನ ಮಾಡಿದವರಿಗೆ ಸಿನಿಮಾ ಮಾಡುವುದು ದೊಡ್ದ ಸಾಹಸ. ಆ ಸಾಹಸ ಮಾಡುವುದಕ್ಕೆ ಇಡೀ ತಂಡ ಸಪೋರ್ಟ್ ಮಾಡಿದೆ. ಈ ಯಶಸ್ಸಿಗೆ ಕಾರಣವರಾದ ಎಲ್ಲರಿಗೂ ಧನ್ಯವಾದ ಎಂದು ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಅನಿಸಿಕೆ ಹಂಚಿಕೊಂಡರು.WhatsApp Image 2022 06 07 at 2.16.04 PM

ಸಾಗರ್ ಪುರಾಣಿಕ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿರುವ ಡೊಳ್ಳು ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ನಾಯಕ-ನಾಯಕಿಯಾಗಿ ನಟಿಸಿದ್ದು, ಬಾಬು ಹಿರಣಯ್ಯ, ಚಂದ್ರ ಮಯೂರ್ ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾವಿರುವ ಡೊಳ್ಳು ಸಿನಿಮಾ ಸದ್ಯದಲ್ಲಿಯೇ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲಿದೆ.WhatsApp Image 2022 06 07 at 2.16.06 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…