ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

dollu kannada movie release 26 August 2022

ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು ಜನಪದ ಕಲೆ‌ ಡೊಳ್ಳು ಸುತ್ತ ಸಾಗುವ ಕಥೆಯಾಗಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಪವನ್ ಒಡೆಯರ್ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.dollu kannada movie watching siddaramaiah

ರಿಲೀಸ್ ಹೊಸ್ತಿಲಿನಲ್ಲಿರುವ ಸಿನಿಮಾದ ಶಾಶ್ವತ ಯಾವುದು ಎಂಬ ಹಾಡನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫ್ಯಾನ್ಸ್ ರಿಲೀಸ್ ಮಾಡಿದ್ದಾರೆ. ಬದುಕಿನ ಅರ್ಥ ತಿಳಿಸುವ ಈ ಹಾಡಿಗೆ ಪವನ್ ಒಡೆಯರು ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಧ್ವನಿಯಲ್ಲಿ ಹಾಡು ಮೂಡಿಬಂದಿದೆ. ಈ ಬಗ್ಗೆ  ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.dollu kannada movie watching siddaramaiah


ನಿರ್ಮಾಪಕ ಪವನ್ ಒಡೆಯರ್ ಮಾತನಾಡಿ, ಉತ್ತರ ಕರ್ನಾಟಕದ ಕಡೆ ಸಾಕಷ್ಟು ರೆಸ್ಪಾನ್ಸ್ ಬರ್ತಿದೆ. ಮಾಲ್ ಗಳಲ್ಲಿ ರಿಲೀಸ್ ಆಗ್ತಿದೆ. ಸಿದ್ದರಾಮಯ್ಯ ಸರ್ ಅವರ ರಾಜಕೀಯ ಒತ್ತಡದ ನಡುವೆ ಬಿಡುವು ಮಾಡಿಕೊಂಡು ಬಂದು ಸಿನಿಮಾ ನೋಡಿರುವುದು ಖುಷಿ ಕೊಟ್ಟಿದೆ. ಇದೇ 26ಕ್ಕೆ ಸಿನಿಮಾ ಚಿತ್ರ ತೆರೆಗೆ ಬರ್ತಿದ್ದು, ಇದು ನನ್ನ ಅಪೇಕ್ಷಾ ಮೊದಲ ಕನಸು ನೋಡಿ ಹರಸಿ ಎಂದರು.dollu kannada movie watching siddaramaiah

ನಿರ್ಮಾಪಕಿ ಅಪೇಕ್ಷಾ ಮಾತನಾಡಿ, ಡೊಳ್ಳು ಸಿನಿಮಾವನ್ನು ರಿಸ್ಕ್ ತೆಗೆದುಕೊಂಡು ರಿಲೀಸ್ ಮಾಡುತ್ತಿದ್ದೇವೆ. ಈ ರೀತಿ ಸಿನಿಮಾನ ಜನರಿಗೆ ತೋರಿಸಬೇಕು ಎಂಬುವುದು ನಮ್ಮ ಪ್ರಯತ್ನ. ಸಿನಿಮಾ ಅವಾರ್ಡ್ ಯಾಕೆ ಗೆದ್ದಿದೆ ಅನ್ನೋದಕ್ಕೆ ಸಿನಿಮಾ ನೋಡಿ. ಈ ಸಿನಿಮಾದಲ್ಲಿ ಬೇರೆ ಕಂಟೆಂಟೇ ಇದೆ. ಆಗಸ್ಟ್ 26ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎಂದರು.dollu kannada movie watching siddaramaiah

ಸಾಗರ್ ಪುರಾಣಿಕ್ ನಿರ್ದೇಶನ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ನಟಿಸಿದ್ದಾರೆ. ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್, ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಆಗಸ್ಟ್​ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…