ಕನ್ನಡ ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ಡೊಳ್ಳುಗೆ ಕನ್ನಡದ ಅತ್ಯುತ್ತಮ ಚಿತ್ರ ,

dollu kannada movie

ತಲೆ ದಂಡಕ್ಕೆ ಪರಿಸರ ಕಾಳಜಿ ಪ್ರಶಸ್ತಿ ನಾನದ ನವನೀತಕ್ಕೆ ಕಲಾತ್ಮಕ‌ ಪ್ರಶಸ್ತಿಯ ಗರಿ

ನಿರ್ದೇಶಕ ಪವನ್‌‌ ಒಡೆಯಾರ್ ‌ನಿರ್ಮಾಣ ಹಾಗು ನಿರ್ದೇಶಕ ಸಾಗರ್ ಪುರಾಣಿಕ್ ನಿರ್ದೇಶನ‌ದ ಕನ್ನಡದ ಚಿತ್ರ ” ಡೊಳ್ಳು” ಗೆ ಅತ್ಯುತ್ತಮ‌ ಕನ್ನಡ ಚಿತ್ರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.dollu kannada movie

ಕನ್ನಡದ ಡೊಳ್ಳು ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಅಲ್ಲದೇ ಗಿರೀಶ್ ಕಾಸರವಳ್ಳಿ ನಿರ್ದೇಶನದ ” ನಾದದ ನವನೀತ” ಅತ್ಯುತ್ತಮ ಕಲಾತ್ಮಕ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಸಂಚಾರಿ ವಿಜಯ್ ಅಭಿನಯದ ತಲೆದಂಡ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ಪ್ರಶಸ್ತಿ ಪಡೆದಿದೆ.

ನಿರ್ದೇಶಕ ಪವನ್ ಒಡೆಯರ್ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದರು. ಅತ್ಯುತ್ತಮ ಚಿತ್ರ ಪ್ರಶಸ್ತಿ ಜೊತೆಗೆ ಅತ್ಯುತ್ತಮ‌ ದ್ವನಿ ಮುದ್ರಣಕ್ಕೂ ಡೊಳ್ಳುಗೆ ಪ್ರಶಸ್ತಿ ಬಂದಿದೆ.dollu kannada movie

30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ.

ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದು, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

ಚಿತ್ರರಂಗಕ್ಕೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ಮೂಲಕ ಪತ್ನಿ ಅಪೇಕ್ಷಾ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ಟೀಸರ್ ಭಾರೀ ಸದ್ದು ಮಾಡಿತ್ತು ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಇರುವ ಈ ಚಿತ್ರ ಶೀರ್ಘದಲ್ಲಿಯೇ ತೆರೆಗೆ ಬರಲಿದೆ.

ತಲೆ ದಂಡಕ್ಕೂ ಪ್ರಶಸ್ತಿ:

ದಿವಂಗತ ನಟ ರಾಷ್ಟ್ರಪ್ರಶಸ್ತಿ ವಿಜೇಯ ನಟ ಸಂಚಾರಿ ವಿಜಯ್ ಅಭಿನಯದ ಚಿತ್ರ ತಲೆ‌ ದಂಡಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಅತ್ಯುತ್ತಮ ಕಲಾತ್ಮಕ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…