‘ಥಗ್ಸ್ ಆಫ್ ರಾಮಘಡ’ ಟ್ರೇಲರ್ ಬಿಡುಗಡೆ ಮಾಡಿ ಸಾಥ್ ನೀಡಿದ ಡಾಲಿ ಧನಂಜಯ – ಜನವರಿ 6ಕ್ಕೆ ಸಿನಿಮಾ ತೆರೆಗೆ

Dolly Dhananjaya supported the release of 'Thugs of Ramghada' trailer

ಫಸ್ಟ್ ಲುಕ್ ಹಾಡಿನ ಮೂಲಕ ಗಮನ ಸೆಳೆದ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಭರವಸೆ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಕಾರ್ತಿಕ್ ಮಾರಲಭಾವಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದ ಟ್ರೇಲರ್ ನಟರಾಕ್ಷಸ ಡಾಲಿ ಧನಂಜಯ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.Dolly Dhananjaya supported the release of 'Thugs of Ramghada' trailer

ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯ ಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಾಲಿ ಧನಂಜಯ ಇಡೀ ತಂಡವನ್ನು ನೋಡಿ ತುಂಬಾ ಖುಷಿ ಆಯ್ತು. ನಿರ್ದೇಶಕ ಕಾರ್ತಿಕ್ ತುಂಬಾ ಒಳ್ಳೆ ಟೀಂ ಕಟ್ಟಿಕೊಂಡು, ಒಳ್ಳೆ ಒಳ್ಳೆ ಕಲಾವಿದರನ್ನು ಇಟ್ಟುಕೊಂಡು ನೈಜ ಘಟನೆ ಆಧರಿಸಿದ ಸಿನಿಮಾ ಮಾಡಿದ್ದಾರೆ. ಚಿತ್ರದ ಪ್ರಮೋಷನ್ ಕೂಡ ತುಂಬಾ ಕ್ರಿಯೇಟಿವ್ ಆಗಿ ಮಾಡ್ತಿದ್ದಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಜನವರಿ 6ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ಈ ಚಿತ್ರ ವರ್ಷದ ಮೊದಲ ಹಿಟ್ ಸಿನಿಮಾ ಆಗಲಿ. ಉತ್ತರ ಕರ್ನಾಟಕ ಭಾಗದಿಂದ ಇನ್ನಷ್ಟು ನಿರ್ದೇಶಕರು, ಕಲಾವಿದರು ಚಿತ್ರರಂಗಕ್ಕೆ ಬರಲಿ. ಆ ಭಾಗದ ಕಥೆಗಳನ್ನು ಹೇಳಲಿ ಎಂದು ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.Dolly Dhananjaya supported the release of 'Thugs of Ramghada' trailer

ನಿರ್ದೇಶಕ ಕಾರ್ತಿಕ್ ಮಾರಲಭಾವಿ ಮಾತನಾಡಿ ಈ ಚಿತ್ರಕ್ಕಾಗಿ ಒಂದೂವರೆ ವರ್ಷದಿಂದ ಇಡೀ ತಂಡ ಕಷ್ಟ ಪಟ್ಟಿದ್ದೀವಿ. ಸಿನಿಮಾ ಜನವರಿ 6ಕ್ಕೆ ಬಿಡುಗಡೆಯಾಗುತ್ತಿದೆ, ಟ್ರೇಲರ್ ನೋಡಿ ಯಾಕಿಷ್ಟು ವೈಲೆನ್ಸ್ ಎನ್ನೋರಿಗೆ ಸಿನಿಮಾ ನೋಡಿದ ಮೇಲೆ ವೈಲೆನ್ಸ್ ಯಾಕೆ ಎಂದು ಅರ್ಥವಾಗುತ್ತೆ. ನಾನು ಯಾದಗಿರಿಯ ಪುಟ್ಟ ಹಳ್ಳಿಯಿಂದ ಬಂದವನು. ಧನಂಜಯ್ ಅವರ ಜಯನಗರ 4th ಬ್ಲಾಕ್ ಕಿರುಚಿತ್ರ ನೋಡಿ ಸ್ಪೂರ್ತಿ ಪಡೆದು ಚಿತ್ರರಂಗಕ್ಕೆ ಬಂದೆ. ನಾನು ಕಿರುಚಿತ್ರ ನಿರ್ದೇಶನ ಮಾಡೋಕೆ ಆರಂಭಿಸಿದೆ. ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ಟ್ರೇಲರ್ ಧನಂಜಯ್ ಸರ್ ಬಿಡುಗಡೆ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡ್ರು. ಊರಿನಲ್ಲಿ ನಮ್ಮ ಹಿರಿಯರು ಹಿಂದೆ ನಡೆದ ಘಟನೆ ಬಗ್ಗೆ ಕಥೆ ಹೇಳುತ್ತಿದ್ರು ಆ ಘಟನೆ ಆಧಾರವಾಗಿಟ್ಟುಕೊಂಡು ಕಥೆ ಹೆಣೆದು ಅದಕ್ಕೊಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟಿದ್ದೇನೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದ್ರು.Dolly Dhananjaya supported the release of 'Thugs of Ramghada' trailer

ನಾಯಕ ಚಂದನ್ ರಾಜ್ ಮಾತನಾಡಿ ಧನಂಜಯ್ ಸರ್ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ತುಂಬಾ ಖುಷಿ ಆಯ್ತು. ಈ ಚಿತ್ರದ ಹಿಂದೆ ಇಡೀ ಚಿತ್ರತಂಡದ ಪರಿಶ್ರಮವಿದೆ, ನೈಜ ಘಟನೆ ಆಧರಿಸಿದ ಸಿನಿಮಾವಿದು ಆದ್ರಿಂದ ವೈಲೆನ್ಸ್ ಇದೆ. ಜನವರಿ 6ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ, ಸಿನಿಮಾ ಗೆದ್ರೆ ನಮ್ಮೆಲ್ಲರ ಕನಸು ನನಸಾಗುತ್ತೆ ಎಂದ್ರು.

ಇನ್ನೊಬ್ಬ ನಾಯಕ ನಟ ಅಶ್ವಿನ್ ಹಾಸನ್ ಮಾತನಾಡಿ ಲಾಕ್ ಡೌನ್ ನಲ್ಲಿ ಕೇಳಿದ ಕಥೆ ಇದು. ಯಾವುದೇ ಸಿನಿಮಾವಿರಲಿ, ಪುಟ್ಟ ಪಾತ್ರವಿರಲಿ ದೊಡ್ಡದಿರಲಿ ಎಲ್ಲಾ ಪಾತ್ರಗಳನ್ನು ಇಲ್ಲಿವರೆಗೆ ಮಾಡಿಕೊಂಡು ಬಂದಿದ್ದೇನೆ. ಇದರಲ್ಲಿ ಲೀಡ್ ರೋಲ್ ನಲ್ಲಿ ನಟಿಸಿದ್ದೇನೆ. ಸ್ಯಾಮ್ಯುಯಲ್ ಪಾತ್ರಕ್ಕೆ ಬಣ್ಣ ಹಚ್ಚಿದ್ದೇನೆ. ಲೀಡ್ ರೋಲ್ ಅಷ್ಟು ಈಸಿ ಅಲ್ಲ. ನಿರ್ದೇಶಕರು ನನ್ನ ಮೇಲೆ ನಂಬಿಕೆ ಇಟ್ಟು ಪಾತ್ರ ನೀಡಿದ್ದಾರೆ ಅವರಿಗೆ ತೃಪ್ತಿ ಆಗೋ ಹಾಗೆ ನಟಿಸಿದ್ದೇನೆ. ಈ ಸಿನಿಮಾ ನಮ್ಮೆಲ್ಲರ ಕನಸು, ಗೆಲ್ಲಲೇ ಬೇಕು ಎಂದು ಚಿತ್ರವನ್ನು ಮಾಡಿದ್ದೀವಿ ಎಂದು ಭರವಸೆಯ ಮಾತುಗಳನ್ನಾಡಿದ್ರು.Dolly Dhananjaya supported the release of 'Thugs of Ramghada' trailer

ಈ ಚಿತ್ರವನ್ನು ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಸೂರ್ಯ ಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ಸೂರ್ಯಕಿರಣ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ .

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…