ಮತ್ತೆ ಶುರು ಡಾ.ರಾಜ್ ಕಪ್..ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6 ಹರಾಜು ಪ್ರಕ್ರಿಯೆ.

Dr.Raj Cup starts again..Raj Cup season-6 auction process will be held in Dubai

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಆಯೋಜರಾದ ರಾಜೇಶ್ ಬ್ರಹ್ಮಾವರ, ಅನಿರುದ್, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.Dr.Raj Cup starts again..Raj Cup season-6 auction process will be held in Dubai


ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ. 1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ. ದುಬೈನಲ್ಲಿ ನಡೆಯುವ ಆಟಗಾರರ ಹರಾಜಿನಲ್ಲಿ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.Dr.Raj Cup starts again..Raj Cup season-6 auction process will be held in Dubai


ನಟ ಅನಿರುದ್ಧ್ ಮಾತನಾಡಿ, ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವ್ರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನು ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದು, ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ನಮ್ಮ ಕನ್ನಡ ಚಿತ್ರರಂಗದ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.Dr.Raj Cup starts again..Raj Cup season-6 auction process will be held in Dubai

ಡಾ. ರಾಜ್ ಕಪ್ ಸೀಸನ್ 6 ನಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್ ಗಳು ನಡೆಯಲಿದೆ. ಡಾಲಿ ಧನಂಜಯ್, ಅನಿರುದ್ದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್ ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.Dr.Raj Cup starts again..Raj Cup season-6 auction process will be held in Dubai

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…