ಸದ್ಯದಲ್ಲೇ ಆರಂಭವಾಗಲಿದೆ ಶಿವಣ್ಣನ ಹೊಸಚಿತ್ರ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೊಟ್ರೇಶ್ ನಿರ್ದೇಶನ.

ಅರವತ್ತನೇ ವಯಸ್ಸಿನಲ್ಲೂ ಹದಿಹರೆಯದವರನ್ನು ನಾಚಿಸುವಂತಹ ಉತ್ಸಾಹವಿರುವ ನಟ ಶಿವರಾಜಕುಮಾರ್. ಇತ್ತೀಚೆಗೆ ಬಿಡುಗಡೆಯಾದ ಶಿವಣ್ಣ ಅಭಿನಯದ “ಬೈರಾಗಿ” ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.Shivanna

ಜುಲೈ 12 ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಕೊಟ್ರೇಶ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಶಿವಣ್ಣ ಅಭಿನಯದ “ವಜ್ರಕಾಯ”, ” ಬಂಗಾರ s\o ಬಂಗಾರದ ಮನುಷ್ಯ” ಮುಂತಾದ ಚಿತ್ರಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿದ್ದ ಕೊಟ್ರೇಶ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.WhatsApp Image 2022 07 09 at 7.50.15 PM

ಮೊದಲು ನಾನು ಶಿವಣ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳುಸುತ್ತೇನೆ. ಅವರು ನೂರುವರ್ಷ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ. ಅವರ ಅಭಿನಯದ ಕೆಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಈಗ ಅಂತಹ ಅದ್ಭುತ ನಟನ ಚಿತ್ರ ನಿರ್ದೇಶಿಸುತ್ತಿರುವುದು ನಿಜಕ್ಕೂ ನನ್ನ ಅದೃಷ್ಟ. ನನಗೆ ನಿರ್ದೇಶನ ಮಾಡಲು ಅವಕಾಶ ನೀಡಿರುವ ಶಿವಣ್ಣ ಹಾಗೂ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಾಕಷ್ಟು ಶ್ರಮವಹಿಸುತ್ತೇನೆ. ಈಗ ಚಿತ್ರೀಕರಣ ನಡೆಸುವ ಸ್ಥಳಗಳ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರ ಆರಂಭವಾಗುತ್ತದೆ ಎಂದು ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.WhatsApp Image 2022 06 03 at 12.51.35 PM 3

ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಉತ್ಸುಕನಾಗಿದ್ದೇನೆ. ನಾನು ನಟಿಸಿರುವ ಮೂರು ಚಿತ್ರಗಳಲ್ಲಿ ಕೊಟ್ರೇಶ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಕೊಟ್ರೇಶ್ ಅವರಿಗೆ ಶುಭವಾಗಲಿ ಎಂದು ಶಿವಣ್ಣ ಹಾರೈಸಿದ್ದಾರೆ.WhatsApp Image 2022 06 03 at 12.51.35 PM 2 1

ಎ ಆರ್ ಕೆ ಪ್ರೊಡಕ್ಷನ್ ಮತ್ತು ರುಬಿನ್ ರಾಜ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಮಾಸ್ತಿ, ಕೊಟ್ರೇಶ್ ಹಾಗೂ ಅಭಿ ಚಿತ್ರಕಥೆ ಬರೆದಿರುವ ಈ ನೂತನ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ಸೋಹಿತ್ ನೀಲಮ್ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಸಹ ಈ ಚಿತ್ರಕ್ಕಿರಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…