‘ಡಂಕಿ’ ಡೈರೆಕ್ಟರ್ ಗಿಂದು ಹುಟ್ಟುಹಬ್ಬದ ಸಂಭ್ರಮ

'Dunky' director Rajkumar Hirani

ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವು ಹಿರಾನಿ ಡಂಕಿ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.'Dunky' director Rajkumar Hirani

ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್ ಗೆ ಡಂಕಿ ಎಂಬ ಸಿನಿಮಾ ಅನೌನ್ಸ್ ಮಾಡಿರುವುದು ಗೊತ್ತೇ ಇದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.'Dunky' director Rajkumar Hirani

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.'Dunky' director Rajkumar Hirani

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ನಾಯಕನಾಗಿ ಶಾರುಖ್ ಖಾನ್ ನಟಿಸಿದ್ದು, ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಅತೀ ದೊಡ್ಡ ತಾರಾಬಳಗದ `ಡಂಕಿ’ ಸಿನಿಮಾ ವಿಶ್ವದಾದ್ಯಂತ ಕಣಕ್ಕಿಳಿಯಲು ಸಜ್ಜಾಗಿದ್ದು, `ಸಲಾರ್’ ಎದುರು ಸ್ಪರ್ಧಿಸಲು ಸಿದ್ದವಾಗಿದೆ. ಇದೇ ಡಿಸೆಂಬರ್ 22ರಂದು ಮೋಸ್ಟ್ ಅವೈಟೆಡ್ ಡಂಕಿ ತೆರೆಗಪ್ಪಳಿಸಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…