ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್…ಶೀಘ್ರದಲ್ಲೇ ಥಿಯೇಟರ್ ನಲ್ಲಿ ದಿಗಂತ್ ದರ್ಬಾರ್

edagy apagathakke karana new poster

ಎಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್‌ ಕಡಕೋಳ್‌ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಟೇಬಲ್ ಹಿಂಬದಿಯಲ್ಲಿ ಬಚ್ಚಿಟ್ಟುಕೊಂಡು ಕುಳಿತಿರುವ ನಾಯಕ ಹಾಗೂ ನಾಯಕಿ..ಅವರ ಬೆನ್ನಿಂದೆ ವ್ಯಕ್ತಿಯೋರ್ವ ನಿಂತಿದ್ದಾರೆ. ಅವರು ಯಾರು ಅನ್ನೋದನ್ನು ರಿವೀಲ್ ಮಾಡದೇ ಚಿತ್ರತಂಡ ಕುತೂಹಲ ಕಾಯ್ದುಕೊಂಡಿದೆ.edagy apagathakke karana

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ ಸದ್ಯ ರಿಲೀಸ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ‘ಅನಾವರಣ’ ಸಿನಿಮಾದ ಒಂದು ಹಾಡನ್ನು ಬಿಡುಗಡೆ ಮಾಡಲಾಗಿದೆ.

edagy apagathakke karana

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಮತ್ತು ಗುರುದತ್ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಒಂದಷ್ಟು ಪೋಸ್ಟರ್, ಝಲಕ್ ಮೂಲಕ ಗಮನಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ MALAVIKA MOHANAN ಕೇರಳ ಬ್ಯೂಟಿಯ ಗ್ಲಾಮರ್ ಲುಕ್‌ಗೆ ಮನಸೋಲದವರು ಯಾರು?

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…