ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು

ekam kannada movie

ಆಷಾಡ ಮಾಸದಲ್ಲಿ ಹೊಸಬರ ತಂಡವೊಂದು ಒಟ್ಟಿಗೆ ಎರಡು ಸಿನಿಮಾಗಳ ಮುಹೂರ್ತವನ್ನು ಆಚರಿಸಿಕೊಂಡಿದೆ. ಮೊದಲನೆಯದಾಗಿ ’ಬಾಲಿ’ ಚಿತ್ರದ ಕ್ರೀಡೆ ಕುರಿತ ಕಥೆಯಲ್ಲಿ ಹದಿಹರೆಯದ ಹಳ್ಳಿಯ ಬಡ ಕುಟುಂಬದ ಹುಡುಗಿಯೊಬ್ಬಳು ಓಟಗಾರ್ತಿಯಾಗಿ ಗುರಿ ಸಾಧಿಸಲು ಹೋಗುತ್ತಾಳೆ. ಅವಳ ಹಾದಿಯಲ್ಲಿ ಸಪಲ ಆಗುತ್ತಾಳಾ ಎನ್ನುವುದು ಒಂದು ಏಳೆಯ ಸಾರಾಂಶವಾಗಿದೆ.ekam kannada movie

ಜೊತೆಗೆ ಶಾಲೆಯ ಅಂಶಗಳು ಇರಲಿದೆ. ಕುಮಾರಿ ಹರಿಣಿಜಯರಾಜ್ ಮೂಲತ: ಅಥ್ಲೇಟ್ ಆಗಿದ್ದು, ಅದಕ್ಕೆ ತಕ್ಕಂತೆ ಪಾತ್ತ ಸಿಕ್ಕಿರುವುದರಿಂದ ಸಹಜವಾಗಿ ಖುಷಿಯಾಗಿದೆ. ಕ್ರೀಡಾ ಮಾರ್ಗದರ್ಶಿಯಾಗಿ ಉತ್ತರಭಾರತದ ನೀರಜ್‌ಕುಮಾರ್, ತಾಯಿಯಾಗಿ ಮೀನಾಕಿರಣ್, ಸಂದೀಪ್‌ಮಲಾನಿ, ಪ್ರಶಾಂತ್ ಮುಂತಾದವರು ಅಭಿನಯಿಸುತ್ತಿದ್ದಾರೆ. ರಚನೆ,ಚಿತ್ರಕಥೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡುತ್ತಿರುವ ಗನಿದೇವ್‌ಕಾರ್ಕಳ ಅವರು ಅಕ್ಷರ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ.ekam kannada movie

ಜಯಕುಮಾರ್‌ಭಕ್ತವತ್ಚಲಂ-ಯೋಗಿತಬಾಲಿ ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ. ಸಂಗೀತ ಅಮೋಘ್‌ಕೊಡಂಗಾಲ ಅವರದಾಗಿದೆ. ಕುಂದಾಪುರ, ಮಂಗಳೂರು, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.ekam kannada movie

ಎರಡನೆಯದಾಗಿ ’ಏಕಮ್’ ಚಿತ್ರವು ಬಹುಕಥಾ ಹೊಂದಿದೆ. ಅಕ್ಷರಾ ಪ್ರೊಡಕ್ಷನ್ ಮೂಲಕ ಗಣಿದೇವ್ ಕಾರ್ಕಳ ನಿರ್ಮಾಣ ಮಾಡುತ್ತಿದ್ದಾರೆ. ಧಾರವಾಹಿ ಮತ್ತು ಒಂದಷ್ಟು ಚಿತ್ರಗಳಿಗೆ ಕೆಲಸ ಮಾಡಿದ ಅನುಭವ ಇರುವ ವಿದ್ಯತ್‌ಶಿವ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಹಾಲಿವುಡ್‌ನ ಅಲೆಜಾಂಡ್ರೆ ಇನರುತು ನಿರ್ದೇಶನದ ’ಬೆಬಲ್’ ಚಿತ್ರದ ಪ್ರೇರಣೆಯಿಂದ ನಿರ್ದೇಶಕರು ಕಥೆಯನ್ನು ರಚಿಸಿದ್ದಾರೆ. ಐದು ಜನರ ಜೀವನದ ಕಥೆಯಲ್ಲಿ ಒಬ್ಬ ವ್ಯಕ್ತಿಯಿಂದ ಆಗುವಂತ ಅನಾಹುತಗಳು ಇನ್ನೊಬ್ಬ ವ್ಯಕ್ತಿಗೆ ಬರುವಂತ ಘರ್ಷಣೆಗಳು ಒಂದಕ್ಕೊಂದು ಪ್ರಾರಂಭದಿಂದಲೇ ಲಿಂಕ್ ಆಗುತ್ತಾ ಹೋಗುತ್ತದೆ. ಜೊತೆಗೆ ಸುಂದರ ಪ್ರೀತಿ ಕಥೆಯಲ್ಲಿ ತೊಂದರೆಗಳು ಬರುತ್ತವೆ. ಅದರಿಂದ ಹೇಗೆ ಹೊರಗೆ ಬರುತ್ತಾರೆ. ಇಂತಹುದೇ ಜಾನರ್ ಅಂಥ ಹೇಳಲಿಕ್ಕ ಆಗುವುದಿಲ್ಲ. ಪ್ರೀತಿ, ರಕ್ತಪಾತ, ಫ್ಯಾಂಟಸಿ ಹೀಗೆ ತರಹೇವಾರಿ ಕಥೆಗಳು ಇರಲಿದೆ.ekam kannada movie

ಸಂಗೀತ ಸಂಯೋಜಿಸುತ್ತಿರುವ ಅಮೋಘ್‌ಕೊಡಂಗಾಲ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಉಳಿದಂತೆ ಶಹನ, ಹರೀಶ್‌ರಾಮ್, ಮೀನಾಕಿರಣ್, ಹರೀಶ್‌ರಾಮ್, ಐಶ್ವರ್ಯ ಮುಂತಾದವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ಅಲನ್‌ಭರತ್, ಸಂಕಲನ ಸ್ಟೀಫೆನ್ ಅವರದಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…