“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

Elra Kaaleliyatte Kaala | Gold Factory |Chandan Shetty|

ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್ ವಿಜೇತ ಮಂಜು ಪಾವಗಡ ಮುಂತಾದವರು ಹಾಜರಿದ್ದರು.elra kalleriyatte kaala movie

ನಮ್ಮ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಇಂದಿನಿಂದ ಪ್ರಚಾರ ಕಾರ್ಯ ಶುರುವಾಗಲಿದೆ. ಇಂದು ನಮ್ಮ ಚಿತ್ರದ ಮೊದಲ ಹಾಡು (ಗೋಲ್ಡ್ ಫ್ಯಾಕ್ಟರಿ) ಬಿಡುಗಡೆಯಾಗಿದೆ. ಅದೊಂದು ಮದುವೆಯ ಆರತಕ್ಷತೆಯ ಹಾಡು. ಇದೇ ಕಲ್ಯಾಣ ಮಂಟಪದಲ್ಲಿ ಆ ಹಾಡಿನ ಚಿತ್ರೀಕರಣ ನಡೆದಿದ್ದರಿಂದ, ಅದರ ನೆನಪಿನಲ್ಲಿ ಇಲ್ಲೇ ಪತ್ರಿಕಾಗೋಷ್ಠಿ ಮಾಡುತ್ತಿದ್ದೇವೆ. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್ – ಪ್ರದೀಪ್ ಹಾಡಿದ್ದಾರೆ. ಇಂದಿನಿಂದ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ. ಇದೊಂದು 80ರ ದಶಕದ ಕಥೆ. elra kalleriyatte kaala movieಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಲ್ಲಿ ಚಂದನ್ ಮತ್ತು ಅರ್ಚನಾ ಅವರ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿದೆ. ಅವರು ನಟಿಸಬಾರದು. ಸಹಜವಾಗಿ ವರ್ತಿಸಬೇಕು ಎಂಬುದು ನನ್ನ ಆಸೆ ಆಗಿತ್ತು. ಹಾಗಾಗಿ, ವರ್ಕ್ ಶಾಪ್ ಮಾಡಿದೆ. ಇಬ್ಬರೂ ಬಹಳ ಸಹಜವಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಮತ್ತು ಚಿತ್ರತಂಡದವರ ಸಹಕಾರವಿಲ್ಲದಿದ್ದರೆ, ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ. ಪ್ರತಿಯೊಬ್ಬರಿಗೂ ನಾನು ಚಿರ ಋಣಿ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.elra kalleriyatte kaala movie

ಇಂದು ನಮ್ಮ ಚಿತ್ರದ ಗೋಲ್ಡ್ ಫ್ಯಾಕ್ಟರಿ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ. ಅವರು ನನ್ನನ್ನು ಚೆನ್ನಾಗಿ ಮೌಲ್ಡ್ ಮಾಡಿದ್ದಾರೆ ಎಂದರು ನಾಯಕ ಚಂದನ್ ಶೆಟ್ಟಿ.elra kalleriyatte kaala movie

ನಟಿಯಾಗಿ ಒಂದು ಕಾಮಿಡಿ ಚಿತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಬಹಳ ಆಸೆ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಚಿತ್ರದಲ್ಲಿ ಅದ್ಭುತವಾದ ತಾರಾಗಣವಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಅಭಿನಯಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…