ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’

Fight in the song 'Unlock Raghava'

ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ “ಅನ್‌ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ.Fight in the song 'Unlock Raghava'
“ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ ಅರ್ಧ ಫೈಟ್ ಒಂದು ಹಾಡಿನ ನಡುವೆ ಬರುತ್ತದೆ.. ಚಿತ್ರಕತೆಯ ಹಂತದಲ್ಲಿ ಈ ಹಾಡನ್ನು ನಾವು ಸೇರಿಸಿರಲಿಲ್ಲ. ಬಳಿಕ, ಆ ಸೀಕ್ವೆನ್ಸ್ ನಲ್ಲಿ ಒಂದು ಹಾಡಿದ್ದರೆ ಹೇಗೆ ಎಂಬ ಆಲೋಚನೆ ಬಂತು. ಅದನ್ನು ಇನ್ ಕಾರ್ಪೋರೇಟ್ ಮಾಡಿದಾಗ ಈ ಸೀಕ್ವೆನ್ಸ್ ತುಂಬಾ ಬ್ಯೂಟಿಫುಲ್ ಆಗಿ ಮೂಡಿಬಂದಿದೆ. ನಮ್ಮ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಡಬ್ಬಿಂಗ್ ಸಮಯದಲ್ಲಿ ಆ ಹಾಡನ್ನು ನೋಡಿ, ಬಹಳ ಮೆಚ್ಚಿದ್ದಾರೆ. ಜೊತೆಗೆ ಆ ಹಾಡು, ಸಿನಿಮಾದ ಟ್ರಂಪ್ ಕಾರ್ಡ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಈ ಆಲೋಚನೆಗೆ ಸಾಥ್ ಕೊಟ್ಟ ನಿರ್ಮಾಪಕರಾದ ಮಂಜುನಾಥ ಡಿ ಅವರು, ಸಂಗೀತ ನಿರ್ದೇಶಕರಾದ ಅನೂಪ್ ಸೀಳಿನ್, ಡಿಒಪಿ ಲವಿತ್, ಸಾಹಸ ನಿರ್ದೇಶಕರಾದ ಅರ್ಜುನ್ ಮಾಸ್ಟರ್, ನೃತ್ಯ ನಿರ್ದೇಶಕರಾದ ಮುರುಳಿ ಮಾಸ್ಟರ್, ಎಡಿಟರ್ ಅಜಯ್ ಎಲ್ಲರಿಗೂ ತುಂಬಾ ಥ್ಯಾಂಕ್ಸ್.. ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ಹಾಡಿರುವ ಸಾಯಿ ವಿಘ್ನೇಶ್ ಈ ಹಾಡನ್ನು ಹಾಡಿರುವುದು ಮತ್ತೊಂದು ವಿಶೇಷ” ಎಂದಿದ್ದಾರೆ ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ.Fight in the song 'Unlock Raghava'

ಎಡಿಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗುವ ಮುನ್ನ ಅನ್‌ಲಾಕ್ ರಾಘವ ಸಿನಿಮಾವನ್ನು ನೋಡಿರುವ ಚಲನಚಿತ್ರ ನಿರ್ಮಾಪಕರು ಹಾಗೂ ಚಿತ್ರ ತಂಡ ಸಂತೋಷ ಪಟ್ಟಿದ್ದಾರೆ. “ಈ ವರ್ಷದ ನಿರೀಕ್ಷಿತ ಚಲನಚಿತ್ರಗಳಲ್ಲಿ, ನಮ್ಮ “ಅನ್‌ಲಾಕ್ ರಾಘವ” ಸಿನಿಮಾ ಸೇರುವುದರಲ್ಲಿ ಯಾವುದೇ ಅನುಮಾನವೇ ಇಲ್ಲ” ಎಂದು ನಿರ್ಮಾಪಕರು ಹರ್ಷ ವ್ಯಕ್ತಪಡಿಸಿದ್ದಾರೆ.Fight in the song 'Unlock Raghava'

“ಇಡೀ ಸಿನಿಮಾದಲ್ಲಿ ನಾಯಕರಾದ ಮಿಲಿಂದ್ ಗೌತಮ್ ಅವರು ತುಂಬಾ ಹ್ಯಾಂಡ್ಸಮ್ ಆಗಿ ಮಿಂಚಿದ್ದಾರೆ. ಬಹಳ ಮುಖ್ಯವಾಗಿ ಸಾಹಸ ಸೀಕ್ವೆನ್ಸ್ ಗಳನ್ನು ನೋಡಿದಾಗ ನಮ್ಮ ಕನ್ನಡಕ್ಕೆ ಪ್ರಾಮಿಸಿಂಗ್ ಕಮರ್ಷಿಯಲ್ ಹೀರೋ ಆಗುವುದರಲ್ಲಿ ಅನುಮಾನವೇ ಇಲ್ಲ. ಜೊತೆಗೆ ಬ್ಯೂಟಿಫುಲ್ ಆಗಿರೋ ನಾಯಕಿ ರೇಚಲ್ ಡೇವಿಡ್ ಅವರೊಂದಿಗಿನ ಎಲ್ಲಾ ಸೀನ್‌ಗಳು ಮ್ಯಾಜಿಕಲ್ ಆಗಿ ಮೂಡಿಬಂದಿವೆ” ಎನ್ನುತ್ತಿದೆ ಚಿತ್ರ ತಂಡ.Fight in the song 'Unlock Raghava'

ಇಲ್ಲಿಯವರೆಗೂ ನಮಗೆ ಸಿಕ್ಕಿರುವ ಮಾಹಿತಿಯಂತೆ ‘ಅನ್‌ಲಾಕ್ ರಾಘವ’ ಚಿತ್ರ ಕಲರ್‌ಫುಲ್ ಆಗಿದ್ದು, ಹ್ಯೂಮರಸ್ ಮಜವನ್ನು ಉಣ ಬಡಿಸೋ ಕಮರ್ಷಿಯಲ್ ಸಿನಿಮಾ ಆಗಿದೆ. ಈಗಾಗಲೇ ಎಡಿಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ ನ ಉಳಿದ ಹಂತಗಳಲ್ಲಿ ತೊಡಗಿಸಿಕೊಂಡಿರುವ ‘ಅನ್‌ಲಾಕ್ ರಾಘವ’ ಬೇಗನೇ ತೆರೆಗಪ್ಪಳಿಸಿ, ಚಿತ್ರಪ್ರೇಮಿಗಳಿಗೆ ಮನರಂಜನೆ ಉಣಬಡಿಸಲಿದ್ದಾನೆ ಎಂಬ ಕಾತುರದಲ್ಲಿ ಸಿನಿಪ್ರೇಮಿಗಳಿದ್ದಾರೆ.
‘ಅನ್‌ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್‌ ನಡಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಮುರಳಿ ಮಾಸ್ಟರ್ ಹಾಗೂ ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.Fight in the song 'Unlock Raghava'

ಮಿಲಿಂದ್ ಗೌತಮ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆFight in the song 'Unlock Raghava'

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…