ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಟೂರ್ನಿವಲ್ ಗೆ ಅದ್ದೂರಿ ಚಾಲನೆ.

First indian international celebrbrity tournament and carnival

ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು.
ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿ ಪ್ರಿಯಾಂಕ ಉಪೇಂದ್ರ, ಜಾಕಿರ್ ಹುಸೇನ್, ನಟ ರುದ್ರ, ನಾಗತಿಹಳ್ಳಿ ಚಂದ್ರಶೇಖರ್, ನಟ ಅಜಯ್ ರಾವ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.First indian international celebrbrity tournament and carnival

“ಟೂರ್ನಿವಲ್” ಎಂದರೆ ಸೌತ್ ಏಷ್ಯಾ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯ. ನಮ್ಮ ರಾಜ್ಯದ ಸಿನಿತಾರೆಯರು ಹಾಗೂ ಮಾಲ್ಡೀವ್ಸ್ ನ ಸಿನಿತಾರೆಯರ ನಡುವೆ ಫುಟ್ಬಾಲ್ ಟೂರ್ನಮೆಂಟ್ ಆಯೋಜಿಸಲಾಗುವುದು. ಬರೀ ಕ್ರೀಡೆ ಅಷ್ಟೇ ಅಲ್ಲ. ಬೇರೆಬೇರೆ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂರು ದೇಶಗಳಲ್ಲೂ ನಡೆಸುವ ಉದ್ದೇಶವಿದೆ. ಇಲ್ಲಿನ ಚಿತ್ರ ಸಹ ಮಾಲ್ಡೀವ್ಸ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದ “ಟೂರ್ನಿವಲ್” ನ ಮ್ಯಾನೇಜಿಂಗ್ ಡೈರೆಕ್ಟರ್ ಪೂಜಾಶ್ರೀ, ಉದ್ಘಾಟನೆಗೆ ಆಗಮಿಸಿದ್ದ ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ದೇಶದ ಪ್ರವಾಸೋದ್ಯಮ ಸಚಿವರಿಗೆ, ಇಲ್ಲಿನ ಗಣ್ಯರಿಗೆ ಧನ್ಯವಾದ ‌ತಿಳಿಸಿದರು.First indian international celebrbrity tournament and carnival

ಈ ಸಂಸ್ಥೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವರಿಗೆ ಬೇಕಾದ ಸಹಕಾರ ನೀಡಲು ನಾವು ಸಿದ್ದ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್ ಹಾಗೂ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯನಾ ಗ್ಯಾಮೇಜ್ ತಿಳಿಸಿದರು.

ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಯಿತು. ಪ್ರಸಿದ್ದ ಕಲಾವಿದರೊಬ್ಬರ ಭರತನಾಟ್ಯ, ಖ್ಯಾತ ಶ್ರೀಲಂಕಾ ಗಾಯಕಿ ಯೋಹಾನಿ ಅವರ ಗಾಯನ ಹಾಗೂ ಫ್ಯಾಷನ್ ಶೋ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು.First indian international celebrbrity tournament and carnival

ಇದೇ ಸಂದರ್ಭದಲ್ಲಿ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ “Life of cockroach” ಚಿತ್ರದ ಶೀರ್ಷಿಕೆ ಅನಾವರಣ ಸಹ ನಡೆಯಿತು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…