ಸಂದೀಪ್ ಕಿಶನ್ ಪ್ಯಾನ್ ಇಂಡಿಯಾ ‘ಮೈಕಲ್’ ಚಿತ್ರದ ಫಸ್ಟ್ ಲುಕ್ ರಿಲೀಸ್ .

ಸಂದೀಪ್ ಕಿಶನ್, ವಿಜಯ್ ಸೇತುಪತಿ ಮುಖ್ಯಭೂಮಿಕೆಯಲ್ಲಿರುವ ಮೈಕಲ್ ಚಿತ್ರ ಒಂದಿಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಬಳಗಕ್ಕೆ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದರು. ಇದೀಗ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಳ್ಳಲು ಸಜ್ಜಾಗುತ್ತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ರಿಲೀಸ್ ದಿನಾಂಕವನ್ನೂ ಘೋಷಿಸಲಿದೆ. ಅದಕ್ಕೂ ಮುನ್ನ ಇದೀಗ ಈ ಚಿತ್ರದ ಹೊಸದಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ.WhatsApp Image 2022 05 08 at 7.55.01 AM

ಶ್ರೀ ವೆಂಕಟೇಶ್ವರ ಸಿನಿಮಾಸ್​ ಎಲ್ಎಲ್​ಪಿ, ಕರಣ್ ಸಿ ಪ್ರೊಡಕ್ಷನ್ಸ್ ಎಲ್​ಎಲ್​ಪಿ ಬ್ಯಾನರ್​ನಲ್ಲಿ ಭರತ್ ಚೌಧರಿ, ಪುಷ್ಕರ್ ರಾಮ್ ಮೋಹನ್ ರಾವ್ ಮೈಕಲ್ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರವನ್ನು ರಂಜಿತ್ ಜಯೆಕೊಡಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಏನೆಂದರೆ, ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿಯೂ ಈ ಸಿನಿಮಾ ಸಿದ್ಧವಾಗುತ್ತಿದೆ.

ಮಾಸ್ ಆ್ಯಕ್ಷನ್ ಮತ್ತು ಕಮರ್ಷಿಯಲ್ ಅಂಶಗಳುಳ್ಳ ಈ ಸಿನಿಮಾ, ಸದ್ಯ ಚಿತ್ರೀಕರಣದಲ್ಲಿ ಬಿಜಿಯಾಗಿದೆ. ಈ ಚಿತ್ರದಲ್ಲಿ ಕಿಶನ್ ಗೆ ನಾಯಕಿಯರಾಗಿ ದಿವ್ಯಾಂಶ ಕೌಶಿಕ್, ವರಲಕ್ಷ್ಮಿ ಶರತ್ ಕುಮಾರ್ ನಟಿಸಿದರೆ‌, ವರುಣ್ ಸಂದೇಶ್ ಪ್ರಮುಖ ಪಾತ್ರದಲ್ಲಿದ್ದಾರೆ.WhatsApp Image 2022 05 08 at 7.55.01 AM 1

ಇನ್ನು ಈವರೆಗೂ ಕಂಟೆಂಟ್ ಬೇಸ್ಡ್​ ಮತ್ತು ಕಮರ್ಷಿಯಲ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟ ಸಂದೀಪ್ ಕಿಶನ್, ಈ ಚಿತ್ರದಲ್ಲಿ ಹಿಂದೆಂದೂ ಕಾಣಿಸದ ಲುಕ್​ನಲ್ಲಿ ಎದುರಾಗುತ್ತಿದ್ದಾರೆ. ಈ ಸಿನಿಮಾದ ಸಲುವಾಗಿ ದೇಹವನ್ನು ಹುರಿಗೊಳಿಸಿದ್ದಾರೆ. ಸಿಕ್ಸ್ ಪ್ಯಾಕ್ ಅವತಾರ, ಖಡಕ್ ಲುಕ್, ಲಾಂಗ್ ಹೇರ್ ನಿಂದಲೇ ಹೊಸ ಸಂದೀಪ್ ಕಿಶನ್ ಮೈಕಲ್ ಸಿನಿಮಾದಲ್ಲಿ ಕಾಣಿಸಲಿದ್ದಾರೆ..

ವಿಜಯ್ ಸೇತುಪತಿ, ಗೌತಮ್ ಮೆನನ್ ಜತೆಗೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…