ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ”

ಇದು ಪ್ರಥಮ್ ಅಭಿನಯದ ಚಿತ್ರ .

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ “ಬಿಗ್ ಬಾಸ್” ಸ್ಪರ್ಧಿಗಳಾದ “ತುಕಾಲಿ” ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.First Night With Devva teaser

ನಾನು ನಿರ್ದೇಶಕರ ನಟ ಎಂದು ಮಾತನಾಡಿದ ಪ್ರಥಮ್, ಪಿ.ವಿ.ಆರ್ ಸ್ವಾಮಿ‌ ಅವರು ಬಹುಬೇಗನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ. ಈ ಚಿತ್ರದಲ್ಲಿ ನಗುವಿಗೆ ಬರವಿಲ್ಲ. ಹಾರಾರ್, ಕಾಮಿಡಿ, ಆಕ್ಷಮ್ ಹಾಗೂ ಸೆಂಟಿಮೆಂಟ್ ಗಳ ಸಮ್ಮಿಲ್ಲನವೇ ಈ ನಮ್ಮ ಚಿತ್ರ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಾಯಕಿಯರು. ನಿಖಿತ ನನ್ನ ಹೆಂಡತಿ ಪಾತ್ರ‌‌ ಮಾಡಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಮಾರಂಭಕ್ಕೆ ಬಂದಿರುವ ತುಕಾಲಿ ಸಂತೋಷ್ ಹಾಗೂ ನಮೃತಾ ಅವರಿಗೆ ಧನ್ಯವಾದ ಎಂದರು.First Night With Devva teaser

ನವೆಂಬರ್ ನಲ್ಲಿ ಆರಂಭವಾದ ಈ ಚಿತ್ರ, ನನ್ನ ತಂಡದ ಸಹಕಾರದಿಂದ ನಿಗದಿಯಂತೆ ಪೂರ್ಣವಾಗಿದೆ. ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಸಿದ್ದತೆ ನಡೆಯತ್ತಿದೆ ಎಂದು ನಿರ್ದೇಶಕ ಹಾಗೂ ಛಾಯಾಗ್ರಾಹಕ ಪಿ‌ವಿಆರ್ ಸ್ವಾಮಿ ತಿಳಿಸಿದರು.First Night With Devva teaser

ನಿರ್ಮಾಪಕ ನವೀನ್ ಬೀರಪ್ಪ, ನಾಯಕಿರಾದ ನಿಖಿತ, ಸುಶ್ಮಿತ, ಜೀವಿತ, ನಟಿ ಪುಷ್ಪ ಸ್ವಾಮಿ, ನಟ ಹರೀಶ್ ರಾಜ್, ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಕಾರ್ಯಕಾರಿ ನಿರ್ಮಾಪಕ ಅರವಿಂದ್ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಚಿತ್ರದ ಕುರಿತು ಮಾತನಾಡಿದರು.First Night With Devva teaser

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…