ಮೇಘನರಾಜ್ ಅವರಿಗೆ ಪ್ರತಿಷ್ಠಿತ “FOG HERO” ಅವಾರ್ಡ್.

fog hero awards 22 meghana raj

ತಮ್ಮ ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. fog hero awards 22 meghana rajಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ.fog hero awards 22 meghana raj

ಕಳೆದ ಎರಡು ವರ್ಷಗಳ ನಂತರ (ಕೊರೋನ ನಂತರ) ಈ ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ.

ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ. ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು
ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು.fog hero awards 22 meghana raj

ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದರು ನಟಿ ಮೇಘನರಾಜ್.fog hero awards 22 meghana raj

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…