“F0R REGN” ಮಾತಿನ ಭಾಗದ ಚಿತ್ರೀಕರಣ ಪೂರ್ಣ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ.

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌. ಜುಲೈ ನಲ್ಲಿ ಆ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ. ಈ ಎರಡು ಹಾಡುಗಳನ್ನು ಬಹದ್ದೂರ್ ಚೇತನ್ ಕುಮಾರ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.201366

ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ಕೇವಲ ಮೂವತ್ತೆರಡು ದಿನಗಳಲ್ಲಿ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.WhatsApp Image 2022 06 29 at 9.20.40 PM

” ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.80005792

ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…