ಗೆಲುವಿನ ಹಾದಿಯಲ್ಲಿ ಫಾರ್ ರಿಜಿಸ್ಟ್ರೇಷನ್…ಮೂರನೇ ವಾರವೂ ಉತ್ತಮ ಪ್ರದರ್ಶನ

for registration movie running successful

ಫ್ಯಾಮಿಲಿ ಡ್ರಾಮಾ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮನರಂಜನೆ ನೀಡುತ್ತಲೇ ಒಂದು ಮೆಸೇಜ್ ನೀಡುವಲ್ಲಿಯೂ ಈ ಚಿತ್ರ ಯಶಸ್ವಿ ಆಗಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬಾರ್ ಮತ್ತು ಮಿಲನಾ ನಾಗರಾಜ್ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಫ್ರೆಶ್ ಜೋಡಿ, ಫ್ರೆಶ್ ಕಂಟೆಂಟ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ಫೆಬ್ರವರಿ 23ರಂದು ತೆರೆಗೆ ಬಂದಿದ್ದ ಫಾರ್ ರಿಜಿಸ್ಟ್ರೇಷನ್ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ.for registration movie running successful

ಟ್ರೇಲರ್ ಮೆಚ್ಚಿದ ಸಂಸದ ತೇಜಸ್ವಿ ಸೂರ್ಯ

ಒಂದ್ಕಡೆ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಫ್ಯಾಮಿಲಿ ಆಡಿಯನ್ಸ್ ಮೆಚ್ಚಿಕೊಳ್ಳುತ್ತಿರುವ ಚಿತ್ರದ ಟ್ರೇಲರ್ ನೋಡಿ ಸಂಸದ ತೇಜಸ್ವಿ ಸೂರ್ಯ ಇಷ್ಟಪಟ್ಟಿದ್ದು, ಸಿನಿಮಾ ನೋಡುವುದಾಗಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.for registration movie running successful

ಲೇಡೀಸ್ ಶೋಗೆ ಭರಪೂರ ರೆಸ್ಪಾನ್ಸ್

ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಮಹಿಳೆಯರು ನೋಡಿ ಮನಸಾರೆ ಕೊಂಡಾಡಿದ್ದಾರೆ. ಬೆಂಗಳೂರಿನ ಲೂಲೂ ಮಾಲ್ ನಲ್ಲಿ ಲೇಡೀಸ್ ಗಾಗಿ ಚಿತ್ರತಂಡ ಇತ್ತೀಚೆಗಷ್ಟೇ ಸ್ಪೆಷಲ್ ಶೋ ಆಯೋಜಿಸಿತ್ತು. ಈ ಶೋಗೆ ಭರಪೂರ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರ ನೋಡಿದ ಎಲ್ಲಾ ಮಹಿಳೆಯರು ನವೀನ್ ಹಾಗೂ ಇಡೀ ತಂಡದ ಪ್ರಯತ್ನಕ್ಕೆ ಚಪ್ಪಾಳೆ ತಟ್ಟಿದ್ದಾರೆ.for registration movie running successful

ಹಾರೈಸುವ ವಿಡಿಯೋ ಸಾಂಗ್ ಬಿಡುಗಡೆ

ಫಾರ್ ರಿಜಿಸ್ಟ್ರೇಷನ್ ಚಿತ್ರದ ಹಾರೈಸುವ ಎಂಬ ವಿಡಿಯೋ ಹಾಡು ಬಿಡುಗಡೆಯಾಗಿದೆ. ತಾಯಿ ತನ್ನ ಮಗಳನ್ನು ಮದುವೆ ಮಾಡಿಕೊಡುವ ಸುಂದರ ಕ್ಷಣಗಳ ಹಾಡಿಗೆ ಕವಿರಾಜ್ ಸಾಹಿತ್ಯ ಬರೆದಿದ್ದು, ಆರ್ ಕೆ ಹರೀಶ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಕಂಠ ನೀಡಿದ್ದಾರೆ.for registration movie running successful

ಮಿಲನಾ ನಾಗರಾಜ್ ಮತ್ತು ಪೃಥ್ವಿ ಅಂಬಾರ್ ಮಾತ್ರವಲ್ಲದೇ ಈ ಸಿನಿಮಾದಲ್ಲಿ ಪ್ರತಿಭಾವಂತ ಕಲಾವಿದರ ದೊಡ್ಡ ಬಳಗವಿದೆ. ಪಿ. ರವಿಶಂಕರ್, ತಬಲ ನಾಣಿ, ಸುಧಾ ಬೆಳವಾಡಿ, ಸಿಹಿ ಕಹಿ ಚಂದ್ರು, ರಮೇಶ್ ಭಟ್, ಎಂ.ಎಸ್. ಉಮೇಶ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸಿದ್ದಾರೆ. ಕಾಮಿಡಿ ಮೂಲಕ ತಬಲ ನಾಣಿ ಅವರು ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ.for registration movie running successful

ನಿರ್ದೇಶಕ ನವೀನ್ ದ್ವಾರಕನಾಥ್ ಹೊಸತನದ ಕಥೆಯೊಂದಿಗೆ ರಂಜಿಸುವ ಕೆಲಸ ಮಾಡಿದ್ದಾರೆ. ಚಿತ್ರಕ್ಕೆ ಆರ್.ಕೆ.ಹರೀಶ್ ಸಂಗೀತ ಸಂಯೋಜಿಸಿದ್ದಾರೆ. ಅಭಿಲಾಷ್ ಕಲತಿ, ಅಭಿಷೇಕ್ ಜಿ ಕಾಸರಗೋಡು ಕ್ಯಾಮರಾ ವರ್ಕ್ ಮಾಡಿದ್ದಾರೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…