“ಪಾರೆವರ್” ಸುಮಧರ ತ್ರಿಕೋನ ಪ್ರೇಮಕಾವ್ಯ.

ಇತ್ತೀಚಿನ ದಿನಗಳಲ್ಲಿ ತಮ್ಮ ಅದ್ಭುತ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಗಳಿದೆ. ಅದರಲ್ಲಿ ವಿಡಿಯೋ ಸಾಂಗ್ ಕೂಡ ಒಂದು. ಎಷ್ಟೊಂದು ವಿಡಿಯೋ ಸಾಂಗ್ಸ್‌ ಚಿತ್ರಗೀತೆಗಳನ್ನು ಮೀರಿಸುವಷ್ಟು ಅದ್ದೂರಿಯಾಗಿರುತ್ತದೆ. ಯು.ಎಸ್ ನಿವಾಸಿ ಆದರ್ಶ್ ಅಯ್ಯಂಗಾರ್ ಅವರು “ಪಾರೆವರ್” ಎಂಬ ಅದ್ದೂರಿ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ತ್ರಿಕೋನ ಪ್ರೇಮಕಥೆಯ ಈ ಸುಂದರ ಪ್ರೇಮಕಾವ್ಯವನ್ನು ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿದ್ದಾರೆ. ಆದರ್ಶ್ ಅಯ್ಯಂಗಾರ್, ಸಿರಿ ಪ್ರಹ್ಲಾದ್, ಸುಮನ್, ರಾಜ್, ದರ್ಶನ್ ಕುಮಾರ್ ಇದರಲ್ಲಿ ನಟಿಸಿದ್ದಾರೆ.

ಕಾಲೇಜು ಜೀವನದಲ್ಲಿ ಪ್ರೀತಿ, ಪ್ರೇಮ ಸಾಮಾನ್ಯ. “ಪಾರೆವರ್” ಸಹ ಕಾಲೇಜ್ ವೊಂದರಲ್ಲಿ ನಡೆಯುವ ತ್ರಿಕೋನ ಪ್ರೇಮಕಥೆಯನ್ನಾಧರಿಸಿದೆ‌. ಕೆಲವು ಪ್ರೇಮ ಪ್ರಕರಣಗಳು ಮನೆಯವರಿಂದ ದೂರವಾಗುತ್ತದೆ. ಆದರೆ “ಪಾರೆವರ್” ನಲ್ಲಿ ಇದು ಯಾವುದೇ ಅಡೆತಡೆಗಳು ಇಲ್ಲದಿದ್ದರೂ, ವಿಧಿಯಿಂದ ಪ್ರೇಮಕಥೆ ತಿರುವು ಪಡೆದುಕೊಳ್ಳುತ್ತದೆ. ಹಾಗಾಗಿ “ಪಾರೆವರ್” ಗೆ “ಪ್ರೀತಿಯಂಬ ರಹದಾರಿಯಲ್ಲಿ ವಿಧಿಯೆಂಬ ಅನಿರೀಕ್ಷಿತ ನಿಲ್ದಾಣ” ಎಂಬ ಅಡಿಬರಹವಿದೆ. ಪ್ರೇಮಿಗಳ ಭಾವನೆ ಮತ್ತು ಹಾಡಿನ ಅಂತ್ಯ ಪ್ರೀತಿಯ ನಿರೀಕ್ಷೆಯನ್ನು ಪ್ರೇಮಿಗಳಲ್ಲಿ ಸದಾ ಇರುವಂತೆ ಮಾಡುವುದು ಈ ಹಾಡಿನ ವಿಶೇಷ.

ಮೂಲತಃ ಇಲ್ಲಿಯವರಾಗಿದ್ದರೂ ಯು.ಎಸ್ ನಲ್ಲಿ ನೆಲೆಸಿರುವ ಆದರ್ಶ್ ಅಯ್ಯಂಗಾರ್ ಈ ಹಿಂದೆ ಕೂಡ ಕೆಲವು ವಿಡಿಯೋ ಸಾಂಗ್ ಗಳನ್ನು ನಿರ್ಮಿಸಿ, ನಟಿಸಿದ್ದಾರೆ. “ಪಾರೆವರ್” ಇತ್ತೀಚೆಗೆ ಬಿಡುಗಡೆಯಾಗಿದ್ದು, ನೋಡುಗರ ಹಾಗೂ ಕೇಳುಗರ ಮನ ಗೆದ್ದಿದೆ.

ಹಿಂದೆ “ಹೊಂಬಣ್ಣ” ಎಂಬ ಚಿತ್ರ ನಿರ್ದೇಶಿಸಿದ್ದ ರಕ್ಷಿತ್ ತೀರ್ಥಹಳ್ಳಿ ಈ ಹಾಡನ್ನು ನಿರ್ದೇಶಿಸಿದ್ದಾರೆ. ದರ್ಶನ್ ಕುಮಾರ್ ಸಂಗೀತ ಹಾಗೂ ಗೀತರಚನೆ, ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ ಹಾಗೂ
ಸುಧೀರ್ ಎಸ್ ಜೆ ಅವರ ಸಂಕಲನ “ಪಾರೆವರ್” ಗಿದೆ.

ಈ ವಿಡಿಯೋ ಸಾಂಗ್ ವೀಕ್ಷಿಸಿರುವ ನಟಿ ರುಕ್ಮಿಣಿ ವಸಂತ್, ನಿರ್ದೇಶಕ ಪ್ರೀತಂ ಗುಬ್ಬಿ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಆದರ್ಶ್ ಅಯ್ಯಂಗಾರ್ ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ನೂತನ ಪ್ರತಿಭೆಗಳಿಗೆ ಅವಕಾಶ ನೀಡುವ ಯೋಜನೆ ಹಾಕಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…