ಬಿಡುಗಡೆಯಾಯಿತು “ಗಾಳಿಪಟ ‍2” ಚಿತ್ರದ “ದೇವ್ಲೆ ದೇವ್ಲೆ” ಹಾಡು.

ಬಿಡುಗಡೆಗೂ ಮುನ್ನವೇ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಗಾಳಿಪಟ 2” ಚಿತ್ರದ “ದೇವ್ಲೆ ದೇವ್ಲೆ” ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.galipata 2

ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ನಡೆಯಿತು.

ಈ ಹಾಡನ್ನು ಬರೆದು ಅರ್ಜುನ್ ಜನ್ಯ ಅವರಿಗೆ ಕಳುಹಿಸಿದೆ. ಮೊದಲು ಈ ಹಾಡನ್ನು “ದೇವ್ರೆ ದೇವ್ರೆ” ಎಂದು ಬರೆದಿದ್ದು. ಆನಂತರ ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ ಎಂದರು ಅರ್ಜುನ್ ಜನ್ಯ. ಆಗ ರ ಕಾರ ತೆಗೆದು ಲ‌ ಕಾರ ಹಾಕಿ ಅಂದೆ. ಆಗ ಎಲ್ಲರಿಗೂ ಹಿಡಿಸಿತು. ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ನನ್ನ , ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯರ ಕಾಂಬಿನೇಶನ್ ನಲ್ಲಿ ಸಾಕಷ್ಟು ಎಣ್ಣೆ ಹಾಡುಗಳು ಗೆದ್ದಿವೆ. ಇದು ಕೂಡ ಗೆಲುತ್ತದೆ ಎಂಬ ಭರವಸೆಯಿದೆ. ಕೊರೋನ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಚಿತ್ರೀಕರಣವಾದ ಹಾಡು ಇದು. ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಾಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಆದರೆ ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ ಅವರು. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಏಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲಾ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೀವಿ. ಸಹಕಾರ ನೀಡಿದ್ದ ಇಡೀ ತಂಡಕ್ಕೆ ವಂದನೆಗಳು ಎಂದರು ನಿರ್ದೇಶಕ ಯೋಗರಾಜ್ ಭಟ್.galipata 2

ಕೋವಿಡ್ ಸಮಯದಲ್ಲಿ ಯಾರಿಗೂ ಏನೂ ಆಗದ ಹಾಗೆ ಕಜಾಕಿಸ್ತಾನಕ್ಕೆ ಹುಷಾರಾಗಿ ಕರೆದು ಕೊಂಡು ಹೋಗಿ ಬಂದ ನಿರ್ಮಾಪಕರಿಗೆ ಧನ್ಯವಾದ. ಇನ್ನು ಈ ಹಾಡಿನ ಬಗ್ಗೆ ಹೇಳಬೇಕೆಂದರೆ ಯೋಗರಾಜ್ ಸರ್ ಈ ಹಾಡನ್ನು ನನಗೆ ಕಳುಹಿಸಿದಾಗ, ಇದೇನ್ ಸರ್ ಹೀಗಿದೆ? ಈ ಹಾಡು ಕೇಳಿದವರು ನಿಮ್ಮ ಬಗ್ಗೆ ಏನಾದರೂ ಅಂದುಕೊಳ್ಳುತ್ತಾರೆ ಅಂದೆ. ಆನಂತರ ಇಲ್ಲ ಗಣಪ ಇನ್ನೊಂದು ಸಲ ಕೇಳು ಅಂದರು. ಕೇಳುತ್ತಾ, ಕೇಳುತ್ತಾ ನಾನೇ ಸದಾ ಗುನುಗುವಂತಾಯಿತು. ಅಂದು ಇದ್ದ ಆತಂಕ ಈಗ ಇಲ್ಲ. ಜನ “ದೇವ್ಲೆ ದೇವ್ಲೆ” ಹಾಡನ್ನು ಒಪ್ಪಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಜಯ್ ಪ್ರಕಾಶ್ ಗಾಯನ, ಪಾತಾಜೆ ಅವರ ಛಾಯಾಗ್ರಹಣ, ಧನು ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಎಲ್ಲರ ಅಭಿನಯ ಈ ಹಾಡನ್ನು ಶ್ರೀಮಂತಗೊಳಿಸಿದೆ ಎಂದರು ನಾಯಕ ಗೋಲ್ಡನ್ ಸ್ಟಾರ್ ಗಣೇಶ್.galipata 2

ಯೋಗರಾಜ್ ಭಟ್ ಹಾಗೂ ಗಣೇಶ್ ಅವರ ಮೂಲಕ ನನ್ನ ಗಾಯನದ ಜರ್ನಿ “ಗಾಳಿಪಟ” ಮೊದಲ ಭಾಗದಲ್ಲಿ ಆರಂಭವಾಯಿತು “ಕವಿತೆ ಕವಿತೆ” ಹಾಡಿನ ಮೂಲಕ. ಈಗ “ಗಾಳಿಪಟ 2” ಚಿತ್ರದಲ್ಲೂ ಹಾಡಿದ್ದೇನೆ. ಲ ಕಾರದಲ್ಲಿ ಈ ಹಾಡನ್ನು ಹಾಡುವುದು ಕಷ್ಟ ಅಂದುಕೊಂಡೆ. ಅಭ್ಯಾಸ ಮಾಡಿದ್ದೆ. ಅರ್ಧ ಗಂಟೆಯಲ್ಲಿ “ದೇವ್ಲೆ ದೇವ್ಲೆ” ಹಾಡು ಹಾಡಿದೆ. ಈ ಹಿಂದೆ ಕೂಡ ನನ್ನ ಹಾಗೂ ಭಟ್ಟರ ಕಾಂಬಿನೇಶನಲ್ಲಿ ಸಾಕಷ್ಟು ಗೀತೆಗಳು ಜನಪ್ರಿಯವಾಗಿದೆ ಎಂದರು ಗಾಯಕ ವಿಜಯ್ ಪ್ರಕಾಶ್.galipata 2

ಈ ಹಾಡು ಮಾಡಿದಾಗ ಲ ಕಾರ ಇರಲಿಲ್ಲ. ಮೊದಲು ರ ಕಾರ ಇತ್ತು. ರ ಕಾರದ ಹಾಡು ಅಷ್ಟು ಮಜಾ ಇಲ್ಲ ಅಂದೆ. ಆಗ ಯೋಗರಾಜ್ ಸರ್, ರ ಕಾರಗಳನ್ನು ತೆಗೆದು ಲ ಕಾರ ಮಾಡು ಅಂದರು. ಹಾಗೆ ಮಾಡಿದಾಗ ಈ ಹಾಡು ತುಂಬಾ ಹಿಡಿಸಿತು. ವಿಜಯ್ ಪ್ರಕಾಶ್ ಅವರು ಇಂಪಾಗಿ ಹಾಡಿದ್ದಾರೆ. ನಾನು ಪದೇಪದೇ ಕೇಳುವ ಹಾಡಗಳೆಂದರೆ ಅದು “ಗಾಳಿಪಟ ೨” ಚಿತ್ರದ ಹಾಡುಗಳು ಎಂದರು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ.

ಈ ಹಾಡಿನ‌ ಚಿತ್ರೀಕರಣ ನೋಡಲು ಕಜಾಕಿಸ್ತಾನಕ್ಕೆ ಹೋಗಿದ್ದೆ. ಅದೇ ಮೊದಲ ಬಾರಿಗೆ ನಾನು ಅಂತರರಾಷ್ಟ್ರೀಯ ವಿಮಾನ ಹತ್ತಿದ್ದು, ಅಂತಹ ಚಳಿಯಲ್ಲಿ ಕೆಲಸ ಮಾಡಿದ್ದ ಚಿತ್ರ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.MAARU GAALIPATA071101

ನಾಯಕರಾದ ದಿಗಂತ್, ಪವನ್ ಕುಮಾರ್, ನಾಯಕಿ ಶರ್ಮಿಳಾ ಮಾಂಡ್ರೆ, ನಟಿ ಸುಧಾ ಬೆಳವಾಡಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಧನು ಮಾಸ್ಟರ್ ಹಾಗೂ ಆನಂದ್ ಆಡಿಯೋ ಶ್ಯಾಮ್ “ದೇವ್ಲೆ ದೇವ್ಲೆ” ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…