“ಗರುಡ”ನ ಹಾಡಿಗೆ ಗಣ್ಯರ ಮೆಚ್ಚುಗೆ. ಈ ಚಿತ್ರ ಮೇ 20 ರಂದು ಬಿಡುಗಡೆ.

ಸಿದ್ದಾರ್ಥ್ ಮಹೇಶ್ – ಶ್ರೀನಗರ ಕಿಟ್ಟಿ ಅಭಿನಯದ ಈ ಚಿತ್ರ ಮೇ 20 ರಂದು ಬಿಡುಗಡೆ.

“ಸಿಪಾಯಿ” ಚಿತ್ರದ ಮೂಲಕ ಜನಮನ ಗೆದ್ದಿದ್ದ, ಸಿದ್ದಾರ್ಥ್ ಮಹೇಶ್ ಅಭಿನಯದ “ಗರುಡ” ಚಿತ್ರದ ಹಾಡು ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ನೆರವೇರಿತು. ಶಾಸಕ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್ ನಟ ವಿನೋದ್ ಪ್ರಭಾಕರ್, ನಿರ್ದೇಶಕರಾದ ಮಹೇಶ್ ಬಾಬು, ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.WhatsApp Image 2022 05 17 at 2.38.06 PM

ನೃತ್ಯ ನಿರ್ದೇಶಕನಾಗಿ‌ ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶನ ಮಾಡುವ ಆಸೆಯಿತ್ತು. ಅವಕಾಶ ಮಾಡಿಕೊಟ್ಟ ಸಿದ್ದಾರ್ಥ್ ಮಹೇಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ಧನ್ಯವಾದವೆಂದರು ನಿರ್ದೇಶಕ ಧನ ಕುಮಾರ್ .WhatsApp Image 2022 05 17 at 2.38.07 PM

ನಾನು ಹಾಗೂ ಧನು ಮಾಸ್ಟರ್ ಚರ್ಚೆ ಮಾಡಿ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡೆವು. ನಂತರ ನಿರ್ಮಾಪಕರಿಗಾಗಿ ಕಾಯುತ್ತಿದ್ದಾಗ, ನಮ್ಮ ತಂದೆ ರಾಜಾ ರೆಡ್ಡಿ ಅವರು ನಿರ್ಮಾಣ ಮಾಡಲು ಮುಂದಾದರು. ಅವರ ಸಹಾಯ ಮರೆಯಲು ಸಾಧ್ಯವಿಲ್ಲ. ಸಮೀಕ್ಷೆಯ ಪ್ರಕಾರ “ಗರುಡ” ಸಾವಿರಾರು ಬದಕುವ ಪಕ್ಷಿ. ವಯಸ್ಸಾದ ಮೇಲೂ ತಾನೆ, ಮತ್ತೆ ಪುಟ್ಟಿದೇಳುವ ಪಕ್ಷಿ ಕೂಡ. ಹಾಗಾಗಿ ನಮ್ಮ ಸಿನಿಮಾಗೆ ಈ ಹೆಸರು ಸೂಕ್ತ ಅನಿಸಿತು. ಕಥೆ ಮಾಡುವಾಗಲೇ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ಅಭಿನಯಿಸಬೇಕೆಂದು ತೀರ್ಮಾನ‌ ಮಾಡಿಕೊಂಡಿದ್ದೆವು. ಕಿಟ್ಟಪ್ಪ ಅಭಿನಯಿಸಲು ಒಪ್ಪಿದರು. ಐಂದ್ರಿತಾ ರೆ, ಆಶಿಕಾ ರಂಗನಾಥ್, ರಂಗಾಯಣ ರಘು ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ತಂತ್ರಜ್ಞರ ಕೆಲಸವೂ ಉತ್ತಮವಾಗಿದೆ. ಇದೇ ಇಪ್ಪತ್ತರಂದು ತೆರೆಗೆ ಬರುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ಸಿದ್ದಾರ್ಥ್ ಮಹೇಶ್.WhatsApp Image 2022 05 17 at 2.38.07 PM 1

ಶೀನಗರ ಕಿಟ್ಟಿ, ಆಶಿಕಾ ರಂಗನಾಥ್, ಐಂದ್ರಿತಾ ರೆ, ರಂಗಾಯಣ ರಘು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿ, ಸಿದ್ದಾರ್ಥ್ ಮಹೇಶ್ ಅವರಿಗೆ ಶುಭ ಕೋರಿದರು. ಜೈ ಆನಂದ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಹಾಡಗಳ ಹಾಗು ಹಾಡಿದವರ ಬಗ್ಗೆ ತಿಳಿಸಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ತಾವು ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಹೇಳಿದರು.WhatsApp Image 2022 05 17 at 2.38.07 PM 2

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…