‘ಗತವೈಭವ’ದ ನಾಯಕಿಯನ್ನು ಪರಿಚಯಿಸಲಿದ್ದಾರೆ ಆಶಿಕಾ ರಂಗನಾಥ್!

gatha vaibhava kannada movie

ಈ ವರ್ಷದ ಆರಂಭದಲ್ಲೇ ‘ಗತವೈಭವ’ ಎಂಬ ಚಿತ್ರವನ್ನು ಘೋಷಿಸಿದ್ದರು ನಿರ್ದೇಶಕ ಸಿಂಪಲ್ ಸುನಿ. ಒಂದು ಪತ್ರಿಕಾಗೋಷ್ಠಿ ಮಾಡಿ ನಾಯಕನ ಪರಿಚಯದ ವೀಡಿಯೋ ಸಹ ಬಿಡುಗಡೆ ಮಾಡಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ. ಈಗ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದ್ದು, ನಾಯಕಿಯ ಆಯ್ಕೆ ಆಗಿದೆ. ನಾಯಕನನ್ನು ಪರಿಚಯಿಸಿದ ಹಾಗೆಯೇ, ನಾಯಕಿಯನ್ನೂ ಒಂದು ವಿಶೇಷವಾದ ವೀಡಿಯೋ ಬಿಡುಗಡೆ ಮಾಡುವ ಮೂಲಕ ಪರಿಚಯಿಸುತ್ತಿದ್ದಾರೆ ಸುನಿ. ವಿಶೇಷ ಏನು ಗೊತ್ತಾ? ಆ ವೀಡಿಯೋವನ್ನು ಆಶಿಕಾ ರಂಗನಾಥ್ ಬಿಡುಗಡೆ ಮಾಡುತ್ತಿದ್ದಾರೆ.ASHIKA RANGANATH 21 (1)

ಹೌದು, ದುಶ್ಯಂತ್ ಅಭಿನಯದ ‘ಗತವೈಭವ’ ಚಿತ್ರಕ್ಕೆ ನಾಯಕಿಯ ಆಯ್ಕೆ ಮುಗಿದಿದೆ. ಆದರೆ, ಆ ನಾಯಕಿ ಯಾರು ಎಂಬುದನ್ನು ಆಶಿಕಾ ರಂಗನಾಥ್ ಹೇಳಲಿದ್ದಾರೆ. ಗುರುವಾರ (ಆಗಸ್ಟ್ 4) ಬೆಳಿಗ್ಗೆ 11 ಗಂಟೆ 11 ನಿಮಿಷಕ್ಕೆ ಸೋಷಿಯಲ್ ಮೀಡಿಯಾದ ಎಲ್ಲ ವೇದಿಕೆಗಳಲ್ಲೂ ಅವರೊಂದು ವೀಡಿಯೋ ಬಿಡುಗಡೆ ಮಾಡಲಿದ್ದಾರೆ. ಈ ವೀಡಿಯೋದಲ್ಲಿ ನಾಯಕಿ ಯಾರು ಎಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ನಾಯಕಿ ಯಾರಿರಬಹುದು ಎಂಬ ಕುತೂಹಲಕ್ಕೆ ಗುರುವಾರದವರೆಗೂ ಕಾಯಲೇಬೇಕು.gatha vaibhava kannada movie

ಅಂದಹಾಗೆ, ‘ಗತವೈಭವ’ ಚಿತ್ರದ ಮೂಲಕ ದುಶ್ಯಂತ್ ಎಂಬ ನವನಾಯಕನನ್ನು ಕನ್ನಡ ಚಿತ್ರರಿಂಗಕ್ಕೆ ಪರಿಚಯಿಸುತ್ತಿದ್ದಾರೆ ಸುನಿ. ಮುಂಚೆ ದುಶ್ಯಂತ್ಗಾಗಿ ‘ರಾಬಿನ್ ಹುಡ್’ ಎಂಬ ಚಿತ್ರವನ್ನು ಅವರು ಘೋಷಿಸಿದ್ದರು. ಈ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸಬೇಕಿತ್ತು. ಈಗ ಆ ಯೋಜನೆ ಸ್ವಲ್ಪ ಮುಂದಕ್ಕೆ ಹೋಗಿದೆ. ಮೊದಲು ಗತವೈಭವ ಶುರುವಾಗಲಿದ್ದು, ಈ ಚಿತ್ರವನ್ನು ಸುನಿ ಮತ್ತು ದೀಪಕ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.ASHIKA RANGANATH 21 (1)

‘ಗತವೈಭವ’ ಚಿತ್ರಕ್ಕೆ ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ. ಆಶಿಕ್ ಕುಸುಗೋಳಿ ಸಂಕಲನ ಈ ಚಿತ್ರಕ್ಕಿರಲಿದೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಱರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…